Tata Sierra: ಇತಿಹಾಸ ಬರೆಯಲು ಟಾಟಾ ರೆಡಿ.. ಮತ್ತೆ ಬರುತ್ತೆ ರಸ್ತೆ ಮೇಲಿನ 'ಮಹಾರಾಜ' ಸಿಯೆರಾ ಕಾರು!

ಟಾಟಾ ಸಿಯೆರಾ (Tata Sierra), ದೇಶೀಯ ಮಾರುಕಟ್ಟೆಯಲ್ಲಿ ದಶಕಗಳ ಹಿಂದೆ, ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಗಳಿಸಿತ್ತು. ಗ್ರಾಹಕರು ಈ ಕಾರನ್ನು ಮುಗಿಬಿದ್ದು ಖರೀದಿ ಮಾಡುತ್ತಿದ್ದರು. ಆದರೆ, 2000ರಲ್ಲಿ ನಾನಾ ಕಾರಣಗಳಿಗೆ ಈ ಕಾರಿನ ಮಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಇದು ಅಂದಿನ ಖರೀದಿದಾರರಿಗೆ ಬೇಸರ ತರಿಸಿತ್ತು.. ಜನ ಮೆಚ್ಚಿದ ಸಿಯೆರಾ ಕಾರನ್ನು ಹೊಸ ರೂಪದಲ್ಲಿ ಮಾರಾಟಕ್ಕೆ ತರಲು ಕಂಪನಿಯು ಭಾರೀ ಸಿದ್ಧತೆ ನಡೆಸುತ್ತಿದೆ ಎಂದು ಈ ಹಿಂದೆ ವರದಿಯಾಗಿತ್ತು. ಅತಿ ಶೀಘ್ರದಲ್ಲಿಯೇ ನೂತನ ಸಿಯೆರಾ ಕಾರು ಬಿಡುಗಡೆಯಾಗುವ ಕಾಲವು ಬಂದು ಬಿಟ್ಟಿದೆ.

ನವದೆಹಲಿಯಲ್ಲಿ ಆಯೋಜಿಸಿರುವ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲಿ ಶುಕ್ರವಾರ ಟಾಟಾ ಮೋಟಾರ್ಸ್ ತಯಾರಿಕೆಗೆ ಸಿದ್ಧಗೊಂಡಿರುವ ನೂತನ ಸಿಯೆರಾ (Sierra) ಕಾರನ್ನು ಪ್ರದರ್ಶನ ಮಾಡಿದೆ. ಇದೊಂದು ಎಸ್‌ಯುವಿಯಾಗಿದೆ. ಮೊದಲಿಗೆ ಎಲೆಕ್ಟ್ರಿಕ್ ಅವತಾರದಲ್ಲಿ ಮಾರಾಟಕ್ಕೆ ಬರಲಿದೆ. ಆ ಬಳಿಕ, ಪೆಟ್ರೋಲ್/ಡೀಸೆಲ್ ಆಯ್ಕೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನೀರಿಕ್ಷೆಯಿದೆ.

Auto Expo 2025 Tata Reveals Sierra Car Expected Price And Features Details

ಭಾರತ್ ಮೊಬಿಲಿಟಿ ಎಕ್ಸ್‌ಪೋದಲ್ಲಿ ತೋರಿಸಲಾಗಿರುವ ಹೊಸ ಟಾಟಾ ಸಿಯೆರಾ ಎಸ್‌ಯುವಿ ಹೊರಭಾಗದಲ್ಲಿ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ವರ್ಟಿಕಲ್ ಹೆಡ್‌ಲ್ಯಾಂಪ್‌ಗಳು, ಫ್ಲಶ್-ಫಿಟ್ಟಿಂಗ್ ಡೋರ್ ಹ್ಯಾಂಡಲ್‌ಗಳು, ಡುಯಲ್-ಟೋನ್ ಅಲಾಯ್ ವೀಲ್‌ಗಳು, ಬಾಡಿ ಕಲರ್ ಬಿ-ಪಿಲ್ಲರ್‌ಗಳು ಮತ್ತು ಬ್ಲ್ಯಾಕ್ ರೂಫ್ ರೈಲ್ಸ್ ಹೊಂದಿದೆ. ಜೊತೆಗೆ ಹಿಂಭಾಗ ಕನೆಕ್ಟ್ಡ್ ಎಲ್ಇಡಿ ಲೈಟ್ ಸೆಟಪ್ ಅನ್ನು ಒಳಗೊಂಡಿದೆ.

ಈ ಕಾರಿನ ಒಳಭಾಗದ ವಿನ್ಯಾಸ ಹಾಗೂ ವೈಶಿಷ್ಟ್ಯದ ಕುರಿತಂತೆ ಅಷ್ಟಾಗಿ ಯಾವುದೇ ವಿವರಗಳು ಲಭ್ಯವಾಗಿಲ್ಲ. ಆದರೂ ಈ ಎಸ್‌ಯುವಿ ಟಾಟಾ ಕಾರುಗಳಲ್ಲಿಯೇ ಮೊದಲ ಬಾರಿಗೆ 3-ಸ್ಕ್ರೀನ್ ಸೆಟಪ್ ಮತ್ತು 4-ಸ್ಪೋಕ್ ಸ್ಟೀರಿಂಗ್ ವೀಲ್ ಒಳಗೊಂಡಿರಲಿದೆ ಎಂದು ಗೊತ್ತಾಗಿದೆ. ಇದು ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಚಾರ್ಜರ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿರುವ ನೀರಿಕ್ಷೆಯೂ ಇದೆ.

Auto Expo 2025 Tata Reveals Sierra Car Expected Price And Features Details

ನೂತನ ಟಾಟಾ ಸಿಯೆರಾ ಎಸ್‌ಯುವಿ ಪ್ರಯಾಣಿಕರಿಗೆ ಗರಿಷ್ಠ ರಕ್ಷಣೆಯನ್ನು ಒದಗಿಸಲಿದೆ ಎನ್ನಲಾಗಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ಹಿಲ್-ಹೋಲ್ಡ್, ಹಿಲ್-ಡಿಸೆಂಟ್ ಕಂಟ್ರೋಲ್ ಅನ್ನು ಒಳಗೊಂಡಿರುವ ನಿರೀಕ್ಷೆಯಿದೆ.

ಎಲೆಕ್ಟ್ರಿಕ್ ಆಯ್ಕೆಯಲ್ಲಿ ಬರುವ ಟಾಟಾ ಸಿಯೆರಾ ಬೃಹತ್ ಗಾತ್ರದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಪಡೆದುಕೊಡಿರಲಿದೆ. ಸಂಪೂರ್ಣ ಚಾರ್ಜ್‌ನಲ್ಲಿ 500 ಕಿಲೋಮೀಟರ್‌‌ವರೆಗೆ ಓಡಬಹುದು ಎಂದು ಹೇಳಲಾಗಿದೆ. ಇಂಧನ ರೂಪದಲ್ಲಿ ಬರುವ ಮಾಡೆಲ್, 1.2 ಲೀ. ಪೆಟ್ರೋಲ್ ಮತ್ತು 1.5 ಲೀ. ಡೀಸೆಲ್ ಎಂಜಿನ್‌ನ್ನು ಪಡೆದುಕೊಂಡಿರಲಿದೆ ಎನ್ನಲಾಗಿದೆ.

Auto Expo 2025 Tata Reveals Sierra Car Expected Price And Features Details

ಹೊಸ ಟಾಟಾ ಸಿಯೆರಾ ಎಸ್‌ಯುವಿ ಬಜೆಟ್ ಬೆಲೆಯಲ್ಲಿಯೂ ಖರೀದಿಗೆ ದೊರೆಯಬಹುದು ಎಂದು ಅಂದಾಜಿಸಲಾಗಿದೆ. ಇದರ ಇಂಧನ ಚಾಲಿತ ಮಾಡೆಲ್, ರೂ.10.50 ಲಕ್ಷ ಹಾಗೂ ಎಲೆಕ್ಟ್ರಿಕ್ ಚಾಲಿತ ಮಾಡೆಲ್ ರೂ.25 ಲಕ್ಷವರೆಗೆ ಆರಂಭಿಕ (ಎಕ್ಸ್ ಶೋರೂಂ) ದರವನ್ನು ಹೊಂದಿರುವ ನೀರಿಕ್ಷೆಯಿದೆ. ಮುಂಬರುವ ಕೆಲವೇ ತಿಂಗಳಲ್ಲಿ ಈ ಸಿಯೆರಾ ಕಾರು, ಮಾರಾಟಕ್ಕೂ ಬರುವ ಸಾಧ್ಯತೆಯೂ ದಟ್ಟವಾಗಿದೆ.

ಡ್ರೈವ್‌ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, January 17, 2025, 19:12 [IST]
English summary
Auto expo 2025 tata reveals sierra car expected price and features details
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+