Bajaj: ಬಡವರಿಗೆ ಸಿಹಿಸುದ್ದಿ.. ಬಜಾಜ್ ಗೋಗೋ ಎಲೆಕ್ಟ್ರಿಕ್ ಆಟೋರಿಕ್ಷಾಗಳು ಬಿಡುಗಡೆ, 3.27 ಲಕ್ಷ ಬೆಲೆ, 251 Km ರೇಂಜ್!

ಬಜಾಜ್ ಆಟೋ (Bajaj Auto) ಜನಪ್ರಿಯ ವಾಹನ ತಯಾರಕ ಕಂಪನಿಯಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ವಿವಿಧ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಯಶಸ್ವಿಯಾಗಿ ಮಾರಾಟಗೊಳಿಸುತ್ತಿದೆ. ಬಜಾಜ್ ಮಧ್ಯಮ ವರ್ಗದ ಜನರಿಗೆ ಸಿಹಿಸುದ್ದಿ ನೀಡುವುದರೊಂದಿಗೆ, ಎಲೆಕ್ಟ್ರಿಕ್ ತ್ರಿಚಕ್ರ ವಾಹನ ವಿಭಾಗದಲ್ಲಿ ಹೊಸ ಕ್ರಾಂತಿ ಸೃಷ್ಟಿಸಲು ಮುಂದಾಗಿದೆ. ಸದ್ಯ, ಗೋಗೋ (Gogo) ಸರಣಿಯ ಮೂರು ನೂತನ ಎಲೆಕ್ಟ್ರಿಕ್ ಆಟೋರಿಕ್ಷಾಗಳನ್ನು ಮಾರಾಟಕ್ಕೆ ತಂದಿದೆ. ಬನ್ನಿ.. ಆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿಯೋಣ.

ಹೊಸ ಬಜಾಜ್ ಗೋಗೋ (Bajaj GoGo) ಎಲೆಕ್ಟ್ರಿಕ್ ಆಟೋರಿಕ್ಷಾಗಳು ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಬಿಡುಗಡೆಗೊಂಡಿವೆ. ರೂ.3.26 ಲಕ್ಷದಿಂದ ರೂ.3.83 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿವೆ. ಇದರೊಂದಿಗೆ ಪಿ5009, ಪಿ5012 ಮತ್ತು ಪಿ7012 ಎಂಬ ಮೂರು ಆಕರ್ಷಕ ರೂಪಾಂತರ (ವೇರಿಯೆಂಟ್) ಆಯ್ಕೆಯಲ್ಲಿಯೂ ಖರೀದಿಗೆ ದೊರೆಯುತ್ತವೆ.

Bajaj Gogo Electric Autos Launched India Rs 3 26 Lakh Starting Price Details

ಈ ರೂಪಾಂತರದ ಹೆಸರಿನ 'ಪಿ' ಅಕ್ಷರ ಪ್ಯಾಸೆಂಜರ್‌ನ್ನು ಸೂಚಿಸುತ್ತದೆ. 50 & 70 ಗೋಗೋ ಎಲೆಕ್ಟ್ರಿಕ್ ಆಟೋರಿಕ್ಷಾ ಅಳತೆಯ ಬಗ್ಗೆ ಬೆಳಕು ಚೆಲ್ಲುತ್ತದೆ. ಕಡೆಯ 9 ಮತ್ತು 12 ಸಂಖ್ಯೆಗಳು, ಇದು 9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 12 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ ಎಂಬುದನ್ನು ತಿಳಿಸುತ್ತದೆ.

ಕಾರ್ಯಕ್ಷಮತೆಗೆ ಸಂಬಂಧಿಸಿದಂತೆ ನಾವು 12 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್ ಹೊಂದಿರುವ ಟಾಪ್ ಎಂಡ್ ಮಾಡೆಲ್ 'ಬಜಾಜ್ ಗೋಗೋ ಪಿ7012' ಬಗ್ಗೆ ಮಾತ್ರ ಮಾತನಾಡಿದ್ದೇವೆ. ಇದರಲ್ಲಿ ಬಳಕೆ ಮಾಡಿರುವ ಎಲೆಕ್ಟ್ರಿಕ್ ಮೋಟಾರ್, 7.7 ಬಿಹೆಚ್‌ಪಿ ಪೀಕ್ ಪವರ್ ಹಾಗೂ 36 ಎನ್ಎಂ (ನ್ಯೂಟನ್ ಮೀಟರ್) ಟಾರ್ಕ್ ಉತ್ಪಾದಿಸುತ್ತದೆ.

Bajaj Gogo Electric Autos Launched India Rs 3 26 Lakh Starting Price Details

ಈ ಬಜಾಜ್ ಗೋಗೋ ಪಿ7012 ಎಲೆಕ್ಟ್ರಿಕ್ ಆಟೋರಿಕ್ಷಾ ಸಂಪೂರ್ಣ ಚಾರ್ಜ್‌ನಲ್ಲಿ 251 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಇಕೋ, ಪವರ್, ಕ್ಲೈಂಬ್ & ಪಾರ್ಕ್ ಅಸಿಸ್ಟ್ ಎಂಬ ಡ್ರೈವಿಂಗ್ ಮೋಡ್ ಆಯ್ಕೆಯನ್ನು ಹೊಂದಿದೆ. 50 ಕೆಎಂಪಿಹೆಚ್ ಸ್ಪೀಡ್‌ನ್ನು ಒಳಗೊಂಡಿದೆ. ಇದರ ಗ್ರೌಂಡ್ ಕ್ಲಿಯರೆನ್ಸ್ 180 ಎಂಎಂ ಇದೆ.

ನೂತನ ಗೋಗೋ ಪಿ7012 ಇ-ಆಟೋರಿಕ್ಷಾ ವಿಶಾಲವಾದ ಪ್ಯಾಸೆಂಜರ್ ಸೀಟ್‌ನ್ನು ಹೊಂದಿದೆ. ಮುಂಭಾಗ (ಫ್ರಂಟ್) ಟೆಲಿಸ್ಕೋಪಿಕ್ ಫೋರ್ಕ್ಸ್ ಹಾಗೂ ಹಿಂಭಾಗ (ರೇರ್) ಟ್ವಿನ್-ಶಾಕ್ ಅಬ್ಸಾರ್ಬರ್‌ ಸಸ್ಪೆನ್ಷನ್ ಸೆಟಪ್ ಆಯ್ಕೆಯನ್ನು ಪಡೆದಿದೆ. ಆಂಟಿ-ರೋಲ್ ಡಿಟೆಕ್ಷನ್, ಆಟೋ ಹಝರ್ಡ್, ಎಲ್ಇಡಿ ಲೈಟಿಂಗ್, ಹಿಲ್ ಹೋಲ್ಡ್ ಅಸಿಸ್ಟ್ 2-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್, ಡಿಜಿಟಲ್ ಎಲ್‌ಸಿಡಿ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಯುಎಸ್‌‍ಬಿ ಟೈಪ್-ಎ ಚಾರ್ಜಿಂಗ್ ಪೋರ್ಟ್‌ಗಳನ್ನು ಹೊಂದಿದೆ.

Bajaj Gogo Electric Autos Launched India Rs 3 26 Lakh Starting Price Details

ಇನ್ನು, ಬಜಾಜ್ ಗೋಗೋ ಇ-ಆಟೋರಿಕ್ಷಾಗಳ ಬ್ಯಾಟರಿಯು 5 ವರ್ಷಗಳ ವಾರಂಟಿಯನ್ನು ಹೊಂದಿದೆ. ಜೊತೆಗೆ ಈ ನೂತನ ಎಲೆಕ್ಟ್ರಿಕ್ ಆಟೋರಿಕ್ಷಾಗಳು ಆಕರ್ಷಕ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡು ಮಾರಾಟಕ್ಕೆ ಬಂದಿರುವುದರಿಂದ ದುಡಿಯುವ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಲಿದೆ. ಮುಂಬರುವ ದಿನಗಳಲ್ಲಿ ನೂತನ ಬಜಾಜ್ ಗೋಗೋ ಇ-ಆಟೋರಿಕ್ಷಾಗಳಿಗೆ ದೇಶೀಯ ಗ್ರಾಹಕರಿಗೆ ಯಾವ ರೀತಿಯ ಪ್ರತಿಕ್ರಿಯೆ ವ್ಯಕ್ತವಾಗುತ್ತದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, February 27, 2025, 20:22 [IST]
English summary
Bajaj gogo electric autos launched india rs 3 26 lakh starting price details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+