ಜಪಾನ್ ಬ್ರ್ಯಾಂಡ್‌ನ ಕಾರುಗಳಿಗೆ ಮನಸೋತ ಬೆಂಗಳೂರು ಜನ.. ದಕ್ಷಿಣ ಭಾರತದಲ್ಲೇ ಅಗ್ರಸ್ಥಾನ!
ಟೊಯೊಟಾ (Toyota) ವಿಶ್ವಾಸಾರ್ಹ ವಾಹನ ತಯಾರಕ ಕಂಪನಿ ಎಂದೇ ಹೆಸರುವಾಸಿಯಾಗಿದೆ. ಕರ್ನಾಟಕದ ಬಿಡದಿಯಲ್ಲಿ ಬೃಹತ್ ಉತ್ಪಾದನಾ ಘಟಕವನ್ನು ಹೊಂದಿದೆ. ದಕ್ಷಿಣ ಭಾರತದಲ್ಲಿ 'ಬೆಂಗಳೂರು' ಟೊಯೊಟಾ ಕಂಪನಿಗೆ ಪ್ರಮುಖ ಮಾರುಕಟ್ಟೆಯಾಗಿ ಹೊರಹೊಮ್ಮಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ಕಾರುಗಳನ್ನು ಮಾರಾಟಗೊಳಿಸಿದೆ. ಇದು ನಗರದಲ್ಲಿ ಪ್ರೀಮಿಯಂ ಹಾಗೂ ಹೈಬ್ರಿಡ್ ಮಾಡೆಲ್‌ಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಎತ್ತಿ ತೋರಿಸುತ್ತಿದೆ.
2024ರಲ್ಲಿ ದಕ್ಷಿಣ ಭಾರತದಾದ್ಯಂತ ಟೊಯೊಟಾ ಕಾರುಗಳನ್ನು ಗ್ರಾಹಕರು ನಾ ಮುಂದು - ತಾ ಮುಂದು ಎಂಬಂತೆ ಖರೀದಿ ಮಾಡಿದ್ದಾರೆ. ಇದರ ಪರಿಣಾಮ ಪ್ರಾದೇಶಿಕ ಮಟ್ಟದಲ್ಲಿ ಮಾರಾಟ ಸಂಖ್ಯೆಯು ಒಟ್ಟು 1,06,000 ಯುನಿಟ್‌ಗಳಿಗೆ ತಲುಪಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಪಾಲು ಶೇಕಡ 31% ಇದೆ. ಹಾಗೆಯೇ ದೇಶೀಯವಾಗಿ ಕರ್ನಾಟಕವು ಶೇಕಡ 11% ಕೊಡುಗೆ ನೀಡಿದೆ.

ಟೊಯೊಟಾದ ಪ್ರೀಮಿಯಂ & ಹೈಬ್ರಿಡ್ ಕಾರುಗಳಿಗೆ ಬೇಡಿಕೆ ಏಕೆ:
ಬೆಂಗಳೂರಿಗರ ಆದಾಯ ಹೆಚ್ಚಳಗೊಂಡಿದೆ. ಅದಕ್ಕೆ ತಕ್ಕಂತೆ ನಗರವಾಸಿಗಳು ಉತ್ತಮ ಇಂಧನ ದಕ್ಷತೆ ಹೊಂದಿರುವ ಪ್ರೀಮಿಯಂ ಮತ್ತು ಹೈಬ್ರಿಡ್ ಕಾರುಗಳನ್ನು ಕೊಂಡುಕೊಳ್ಳಲು ಮನಸ್ಸು ಮಾಡುತ್ತಿದ್ದಾರೆ. ಇದರಿಂದಾಗಿ ಟೊಯೊಟಾ ಕಾರುಗಳ ಮಾರಾಟ ಸಂಖ್ಯೆ ಅಧಿಕಗೊಂಡಿದೆ ಎಂದು ವಿಶ್ಲೇಷಿಸಲಾಗಿದೆ.
ಟೊಯೊಟಾ ಕಾರುಗಳ ತಿಂಗಳ ಮಾರಾಟ ಹೇಗಿದೆ:
ಈ ನವೆಂಬರ್ ತಿಂಗಳಲ್ಲಿ ಬರೋಬ್ಬರಿ 33,752 ಯುನಿಟ್ ಟೊಯೊಟಾ ಕಾರುಗಳನ್ನು ಮಾರಾಟ ಮಾಡಲಾಗಿದೆ. 2024ರ ಇದೇ ಅವಧಿಯಲ್ಲಿ 26,323 ಯುನಿಟ್‌ಗಳನ್ನು ಮಾರಲಾಗಿತ್ತು. ಈ ಅಂಕಿ ಅಂಶವನ್ನು ಲೆಕ್ಕ ಹಾಕಿದಾಗ, ಮಾರಾಟ ಪ್ರಮಾಣವು ವರ್ಷದಿಂದ ವರ್ಷಕ್ಕೆ ಶೇಕಡ 28% ಬೆಳವಣಿಗೆಯಾಗಿದೆ.
ಈ ಟೊಯೊಟಾ ಕಾರುಗಳೆಂದರೆ ಗ್ರಾಹಕರಿಗೆ ಬಲು ಪ್ರೀತಿ:
ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross): ಇದೊಂದು ಜನಪ್ರಿಯ ಎಂಪಿವಿಯಾಗಿದೆ. ರೂ.18.16 ಲಕ್ಷದಿಂದ ರೂ.30.83 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಪ್ಲಾಟಿನಂ ವೈಟ್ ಪರ್ಲ್, ಆಟಿಟ್ಯೂಡ್ ಬ್ಲ್ಯಾಕ್ ಮೈಕಾ, ಸಿಲ್ವರ್ ಮೆಟಾಲಿಕ್ ಹಾಗೂ ಸೂಪರ್ ವೈಟ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 185 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2850 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.
ಈ ಕಾರು 2-ಲೀಟರ್ ಪೆಟ್ರೋಲ್ & 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 16.13 ರಿಂದ 23.24 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 7/ 8 ಆಸನಗಳನ್ನು ಹೊಂದಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋ ಎಸಿ, ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಳನ್ನು ಪಡೆದಿದೆ.
ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder): ಇದು ಪ್ರಮುಖ ಎಸ್‌ಯುವಿಯಾಗಿದೆ. ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಸ್ಪೋರ್ಟಿನ್ ರೆಡ್, ಮಿಡ್‌ನೈಟ್ ಬ್ಲ್ಯಾಕ್, ಕೇವ್ ಬ್ಲ್ಯಾಕ್ ಹಾಗೂ ಸ್ಪೀಡಿ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಈ ಕಾರು 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) & 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 28 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ನಂತಹ ವೈಶಿಷ್ಟ್ಯಗಳಿವೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಳನ್ನು ಹೊಂದಿದೆ.


Click it and Unblock the Notifications








