ಪ್ರಖ್ಯಾತ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ ಎಸ್‌ಯುವಿಗೆ 3 ಬದಲಿ ಕಾರುಗಳಿವು.. ಬೆಲೆ ಇಷ್ಟೇನಾ, ವಿಶೇಷತೆಗಳೇನು?
ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic) ಪ್ರಮುಖ ಎಸ್‍ಯುವಿಯಾಗಿ ಹೊರಹೊಮ್ಮಿದ್ದು, ರೂ.14 ಲಕ್ಷದಿಂದ ರೂ.18 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಶಕ್ತಿಯುತವಾದ 2.2-ಲೀ. ಸಾಮರ್ಥ್ಯದ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 14 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 7/ 9 ಆಸನಗಳಿವೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಆಟೋ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಹೊಂದಿದೆ. ನೀವು 'ಸ್ಕಾರ್ಪಿಯೋ ಕ್ಲಾಸಿಕ್' ಬದಲಾಗಿ ಈ ಪ್ರಮಖ ಕಾರುಗಳನ್ನು ಸಹ ಖರೀದಿ ಮಾಡಬಹುದು.
ಟೊಯೊಟಾ ಇನ್ನೋವಾ ಕ್ರಿಸ್ಟಾ (Toyota Innova Crysta)..
ಇದೊಂದು ಎಂಪಿವಿಯಾಗಿದೆ. 'ಸ್ಕಾರ್ಪಿಯೋ ಕ್ಲಾಸಿಕ್'ಗೆ ಅತ್ಯುತ್ತಮ ಪರ್ಯಾಯ ಆಯ್ಕೆಯಾಗಲಿದೆ. ರೂ.20 ಲಕ್ಷದಿಂದ 27 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಕಾರು 7/ 8 ಆಸನ ಆಯ್ಕೆ ವ್ಯವಸ್ಥೆ ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ದೂರದ ಊರುಗಳಿಗೆ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 300 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ನೂತನ ಎಂಪಿವಿ 2.4-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 8 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ರೇರ್ ಎಸಿ ವೆಂಟ್‌ಗಳು ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಟಾಟಾ ಹ್ಯಾರಿಯರ್ (Tata Harrier)..
ಇದು ಜನಪ್ರಿಯ ಎಸ್‌ಯುವಿಯಾಗಿ ಮನೆ ಮಾತಾಗಿದೆ. ಈ ಕಾರನ್ನು ಕೂಡ 'ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್'ಗೆ ಬದಲಾಗಿ ಖರೀದಿ ಮಾಡಬಹುದಾಗಿದೆ. ಅದಕ್ಕೆ ತಕ್ಕಂತೆ ರೂ.15 ಲಕ್ಷದಿಂದ ರೂ.27 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇದರಲ್ಲಿ 5 ಆಸನಗಳಿವೆ. ಜೊತೆಗೆ 445 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

ಈ ಎಸ್‌ಯುವಿಯು 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 14.60 ರಿಂದ 16.8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಫುಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್, ಡುಯಲ್ ಜೋನ್ ಆಟೋಮೆಟಿಕ್ ಎಸಿ ಮತ್ತು ಪನೊರೊಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza)..
ಈ ಎಸ್‌ಯುವಿಯು 'ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್'ಗೆ ಉತ್ತಮವಾದ ಪರ್ಯಾಯ ಆಯ್ಕೆಯಾಗಲಿದೆ. ಇದು ರೂ.9 ಲಕ್ಷದಿಂದ ರೂ.14 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದು 5 ಆಸನಗಳನ್ನು ಒಳಗೊಂಡಿದ್ದು, ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 328 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

ಹೊಸ ಎಸ್‌ಯುವಿಯು 1.5-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 26 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಒಟ್ಟಾರೆಯಾಗಿ, ಇವೆಲ್ಲ ಕಾರುಗಳು ಒಂದಕ್ಕಿಂತ ಒಂದು ಅದ್ಬುತವಾಗಿವೆ. ಹೆಚ್ಚು ಆಕರ್ಷಕವಾದ ವಿನ್ಯಾಸ ಹಾಗೂ ವೈಶಿಷ್ಟ್ಯಗಳನ್ನು ಪಡೆದುಕೊಂಡಿದ್ದು, ಸ್ವಲ್ಪ ಮಟ್ಟಿಗೆ ಕೈಗೆಟುಕುವ ಬೆಲೆಯಲ್ಲಿಯೇ ಖರೀದಿಗೆ ದೊರೆಯಲಿವೆ. ಹಾಗೆಯೇ ಉತ್ತಮ ಸಂಖ್ಯೆಯಲ್ಲಿಯೂ ಮಾರಾಟವಾಗುತ್ತಿವೆ. ನೀವು ಈ ಮೇಲಿನ ಕಾರಿನಲ್ಲಿ ಯಾವುದನ್ನು ಖರೀದಿ ಮಾಡುತ್ತೀರಾ.. ಕಾಮೆಂಟ್ ಮಾಡಿ ತಿಳಿಸಿರಿ.


Click it and Unblock the Notifications