ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಕಾರಿಗೆ ಈ 3 ಎಸ್‌ಯುವಿಗಳು ಪರ್ಯಾಯವಾಗಬಲ್ಲವು.. ಬೆಲೆ ಎಷ್ಟು, ವಿಶೇಷತೆಗಳೇನು?
ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric) ಜನಪ್ರಿಯ ಎಸ್‌ಯುವಿಯಾಗಿದೆ. ಈ ಕಾರು ರೂ.17.99 ಲಕ್ಷದಿಂದ ರೂ.24.38 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 42 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 51.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 473 ಕಿಲೋಮೀಟರ್ ಕ್ರಮಿಸುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯೊಂದಿರುವ ಈ ಎಸ್‌ಯುವಿ, 10.25-ಇಂಚಿನ ಡುಯಲ್ ಸ್ಕ್ರೀನ್ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಈ 'ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್'ಗೆ ಪರ್ಯಾಯವಾಗಿ ಗ್ರಾಹಕರು ಈ 3 ಕಾರುಗಳನ್ನು ಖರೀದಿ ಮಾಡಬಹುದು. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಷತೆಗಳ ಬಗ್ಗೆ ಒಂದಷ್ಟು ವಿವರವನ್ನು ತಿಳಿಯೋಣ.
ಎಂಜಿ ಜಡ್ಎಸ್ ಇವಿ (MG ZS EV): ಈ ಎಲೆಕ್ಟ್ರಿಕ್ ಕಾರು ರೂ.18.98 ಲಕ್ಷದಿಂದ ರೂ.26.64 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 50.3 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 461 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಎಕ್ಸಿಕ್ಯೂಟಿವ್, ಎಕ್ಸೈಟ್ ಪ್ರೊ & ಎಕ್ಸ್‌ಕ್ಲೂಸಿವ್ ಪ್ಲಸ್ ಎಂಬ ರೂಪಾಂತರಗಳ (ವೇರಿಯೆಂಟ್) ಆಯ್ಕೆಯಲ್ಲಿ ದೊರೆಯುತ್ತದೆ.

ಈ ಎಂಜಿ ಜಡ್ಎಸ್ ಇವಿಯಲ್ಲಿ 5 ಜನರು ಓಡಾಟ ನಡೆಸಬಹುದು. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಮತ್ತು ಆಟೋ ಎಸಿ, 6-ಸ್ಪೀಕರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಟಾಟಾ ಕರ್ವ್ ಇವಿ (Tata Curvv EV): ಇದೊಂದು ಪ್ರಖ್ಯಾತ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.17.49 ಲಕ್ಷದಿಂದ ರೂ.21.99 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಸಿಗುತ್ತದೆ. 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 55 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್ ಆಯ್ಕೆಯನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 430 ರಿಂದ 502 ಕಿಲೋಮೀಟರ್ ಓಡುತ್ತದೆ.
ಈ ಟಾಟಾ ಕರ್ವ್ ಇವಿಯಲ್ಲಿಯೂ 5 ಮಂದಿ ಪ್ರಯಾಣಿಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಪನೊರೊಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಮಹೀಂದ್ರಾ ಬಿಇ 6 (Mahindra BE 6): ಈ ಎಲೆಕ್ಟ್ರಿಕ್ ಎಸ್‌ಯುವಿ ರೂ.18.90 ಲಕ್ಷದಿಂದ ರೂ.26.90 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 682 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ.

ನೂತನ ಮಹೀಂದ್ರಾ ಬಿಇ 6 ಕಾರಿನಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 455 ಲೀ. ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ & ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ ಡುಯಲ್ ಸ್ಕ್ರೀನ್ ಸೆಟಪ್, ಟೂ-ಸ್ಪೋಕ್ ಸ್ಟೀರಿಂಗ್ ವೀಲ್, ವೆಂಟಿಲೇಟೆಡ್ ಸೀಟ್‌ಗಳು ಮತ್ತು ವೈರ್‌ಲೆಸ್ ಚಾರ್ಜರ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಮಲ್ಟಿಪಲ್ ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications