Hyundai: ಅಗ್ಗದ ಹ್ಯುಂಡೈ ಔರಾ ಸೆಡಾನ್‌ಗೆ 3 ಜಬರ್ದಸ್ತ್ ಪರ್ಯಾಯ ಕಾರುಗಳಿವು.. ಬೆಲೆ ಎಷ್ಟು?
ಹ್ಯುಂಡೈ ಔರಾ (Hyundai Aura) ಪ್ರಮುಖ ಸೆಡಾನ್ ಆಗಿದೆ. ಇದು ರೂ.6.54 ಲಕ್ಷದಿಂದ ರೂ.9.11 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 17 ರಿಂದ 28.4 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನಗಳಿವೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ. ನೀವು 'ಹ್ಯುಂಡೈ ಔರಾ'ಗೆ ಬದಲಾಗಿ ಈ 3 ಪ್ರಮಖ ಸೆಡಾನ್‌ಗಳನ್ನು ಖರೀದಿ ಮಾಡಬಹುದು. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಮಾರುತಿ ಸುಜುಕಿ ಡಿಜೈರ್ ಸೆಡಾನ್ 'ಹ್ಯುಂಡೈ ಔರಾ'ಗೆ ಅತ್ಯುತ್ತಮ ಪರ್ಯಾಯ ಕಾರು..
ಇದು ರೂ.6.84 ಲಕ್ಷದಿಂದ ರೂ.10.19 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 24.79 ರಿಂದ 33.73 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿಯೂ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು.

ಈ ಕಾರು ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಮ್ಯಾಗ್ಮಾ ಗ್ರೇ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಸನ್‌ರೂಫ್ ಮತ್ತು ಆಟೋ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಟಾಟಾ ಟಿಗೂರ್ 'ಹ್ಯುಂಡೈ ಔರಾ'ಗೆ ಸೂಕ್ತ ಬದಲಿ ಸೆಡಾನ್..
ಇದು ಕನಿಷ್ಠ ರೂ.6 ಲಕ್ಷ ಹಾಗೂ ಗರಿಷ್ಠ ರೂ.9.50 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 19.43 ರಿಂದ 28.06 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿಯೂ 5 ಜನರು ಸಂಚಾರ ಮಾಡಬಹುದು.

ನೂತನ ಟಿಗೂರ್ ಸೆಡಾನ್ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಬಹುಮುಖ್ಯವಾಗಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಹೋಂಡಾ ಅಮೇಜ್ 'ಹ್ಯುಂಡೈ ಔರಾ'ಗೆ ಉತ್ತಮ ಪರ್ಯಾಯ ಕಾರು..
ಇದು ರೂ.8.10 ಲಕ್ಷದಿಂದ ರೂ.11.20 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಒಳಗೊಂಡಿದೆ. ಪೆಟ್ರೋಲ್ ಎಂಜಿನ್‌ನ್ನು ಮಾತ್ರ ಹೊಂದಿದ್ದು, 19.46 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಹಾಗೆಯೇ ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ರೇಡಿಯಂಟ್ ರೆಡ್ ಮೆಟಾಲಿಕ್, ಗೋಲ್ಡನ್ ಬ್ರೌನ್ ಮೆಟಾಲಿಕ್ ಹಾಗೂ ಮೆಟಿರೊಯ್ಡ್ ಗ್ರೇ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಈ ಸೆಡಾನ್ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ (8-ಇಂಚು), ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರಿಗೆ ಹೆಚ್ಚಿನ ರಕ್ಷಣೆಯನ್ನು ಒದಗಿಸಲಿದ್ದು, 6 ಏರ್‌ಬ್ಯಾಗ್‌ಗಳು, ಎಡಿಎಸ್ಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 3-ಪಾಯಿಂಟ್ ಸೀಟ್‌ಬೆಲ್ಟ್‌ಗಳನ್ನು ಹೊಂದಿದೆ.
ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications