ಅಗ್ಗದ ಬೆಲೆ.. 5-ಸೀಟರ್.. 6 ಏರ್‌ಬ್ಯಾಗ್‌ನ ಮಾರುತಿ ಬಲೆನೊಗೆ ಬದಲಿ ಆಯ್ಕೆಯಾಗಬಲ್ಲ 3 ಪ್ರಮುಖ ಕಾರುಗಳಿವು!
ಇತ್ತೀಚೆಗೆ ಮಾರುತಿ ಸುಜುಕಿ ಬಲೆನೊ (Maruti Suzuki Baleno) ಹ್ಯಾಚ್‌ಬ್ಯಾಕ್‌ನ್ನು 6 ಏರ್‌ಬ್ಯಾಗ್ ಆಯ್ಕೆಯಲ್ಲಿ ನವೀಕರಿಸಿ, ಮಾರಾಟಕ್ಕೆ ತರಲಾಗಿತ್ತು. ಇದು ಕನಿಷ್ಠ ರೂ.6.70 ಲಕ್ಷ ಹಾಗೂ ಗರಿಷ್ಠ ರೂ.9.92 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 22 ರಿಂದ 30 ಕಿ.ಮೀವರೆಗೂ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಆಸನಗಳಿವೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಹಾಗೂ ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ನಾವಿಲ್ಲಿ ಇದೇ 'ಬಲೆನೊ'ಗೆ ಪರ್ಯಾಯ ಆಯ್ಕೆಯಾಗಬಲ್ಲ 3 ಪ್ರಮುಖ ಕಾರುಗಳ ಕುರಿತಂತೆ ತಿಳಿಸಿಕೊಟ್ಟಿದ್ದೇವೆ.
ಟೊಯೊಟಾ ಗ್ಲಾನ್ಜಾ (Toyota Glanza):
ಈ ಹ್ಯಾಚ್‌ಬ್ಯಾಕ್ ಕೂಡ ಮಾರುತಿ ಸುಜುಕಿ ಬಲೆನೊಗೆ ಪರ್ಯಾಯ ಆಯ್ಕೆಯಾಗಲಿದೆ. ಇದರ ಎಲ್ಲ ರೂಪಾಂತರಗಳು 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ. ಅದಕ್ಕೆ ತಕ್ಕಂತೆ ರೂ.6.90 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 5 ಆಸನಗಳನ್ನು ಒಳಗೊಂಡಿದ್ದು, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಕೆಫೆ ವೈಟ್ ಮತ್ತು ಸ್ಪೋರ್ಟಿನ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಗ್ಲಾನ್ಜಾ 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 22 ರಿಂದ 30.61 ಕಿ.ಮೀವರೆಗೂ ಮೈಲೇಜ್ ಕೊಡುತ್ತದೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಟೋ ಕ್ಲೇಮೇಟ್ ಕಂಟ್ರೋಲ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್, ಹೈಟ್ ಅಡ್ಜಸ್ಟಬಲ್ ಡ್ರೈವರ್ ಸೀಟ್, ಹೆಡ್ಸ್-ಅಪ್ ಡಿಸ್‌ಪ್ಲೇ ಮತ್ತು ಕೀಲೆಸ್ ಎಂಟ್ರಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಟಾಟಾ ಆಲ್ಟ್ರೋಜ್ (Tata Altroz):
ಇದನ್ನು ಮಾರುತಿ ಬಲೆನೊಗೆ ಬದಲಾಗಿ ಕೊಂಡುಕೊಳ್ಳಬಹುದಾಗಿದ್ದು, 6 ಏರ್‌ಬ್ಯಾಗ್ ಆಯ್ಕೆಯನ್ನು ಪಡೆದಿದೆ. ಈ ಕಾರು ಕನಿಷ್ಠ ರೂ.6.89 ಲಕ್ಷ ಮತ್ತು ಗರಿಷ್ಠ ರೂ.11.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎಲ್ಇಡಿ ಹೆಡ್‌ಲೈಟ್‌ಗಳು, ಎಲ್ಇಡಿ ಫಾಗ್ ಲ್ಯಾಂಪ್‌ಗಳು ಮತ್ತು ಅಲಾಯ್ ವೀಲ್‌ಗಳನ್ನು ಪಡೆದಿದೆ.

ಈ ಕಾರಿನಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. 345 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀಟರ್ ಸಿಎನ್‌ಜಿ ಹಾಗೂ 1.5-ಲೀಟರ್ ಟರ್ಬೋ ಚಾರ್ಜ್ಡ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ & 6-ಸ್ಪೀಡ್ (ಡುಯಲ್-ಕ್ಲಚ್ ಆಟೋಮೆಟಿಕ್ ಟ್ರಾಸ್ಮಿಷನ್) ಗೇರ್‌ಬಾಕ್ಸ್‌ನ್ನು ಹೊಂದಿದೆ. 19 ರಿಂದ 26 ಕಿ.ಮೀವರೆಗೂ ಮೈಲೇಜ್ ನೀಡುತ್ತದೆ.

ಹೊಸ ಆಲ್ಟ್ರೋಜ್ ಎಂಬರ್ ಗ್ಲೋ, ಪ್ರಿಸ್ಟೈನ್ ವೈಟ್, ಪ್ಯೂರ್ ಗ್ರೇ, ಡ್ಯೂನ್ ಗ್ಲೋ ಹಾಗೂ ರಾಯಲ್ ಬ್ಲೂ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 10.25-ಇಂಚಿರುವ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 4-ಸ್ಪೀಕರ್ ಸೆಟಪ್, ರೇರ್ ಎಸಿ ವೆಂಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಮತ್ತು ಯುಎಸ್‌ಬಿ-ಸಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಮಾರುತಿ ಸುಜುಕಿ ಸ್ವಿಫ್ಟ್ (Maruti Suzuki Swift):
ಇದು ಮಾರುತಿ ಸುಜುಕಿ ಕಂಪನಿ ಕಾರಾಗಿದ್ದರೂ ಬಲೆನೊಗೆ ಪರ್ಯಾಯವಾಗಿ ಖರೀದಿ ಮಾಡಬಹುದು. ಅದಕ್ಕೆ ತಕ್ಕಂತೆ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ. ರೂ.6.49 ಲಕ್ಷದಿಂದ ರೂ.9.64 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಲಸ್ಟರ್ ಬ್ಲೂ, ನಾವೆಲ್ ಆರೆಂಜ್, ಮ್ಯಾಗ್ಮಾ ಗ್ರೇ & ಸ್ಪ್ಲೆಂಡಿಡ್ ಸಿಲ್ವರ್ ಎಂಬ ಬಣ್ಣಗಳೊಂದಿಗೆ ದೊರೆಯುತ್ತದೆ.

ಈ ಕಾರು 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 24.8 ರಿಂದ 32.85 ಕಿ.ಮೀವರೆಗೂ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಆಸನಗಳಿವೆ. 9-ಇಂಚಿರುವ ಇನ್ಫೋಟೈನ್‌ಮೆಂಟ್ ಸ್ಕ್ರೀನ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್ ಪ್ಲೇ, ಆಟೋ ಕ್ಲೇಮೇಟ್ ಕಂಟ್ರೋಲ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ.


Click it and Unblock the Notifications