16.92 ಕಿ.ಮೀ ಮೈಲೇಜ್.. 5-ಸೀಟರ್, 11 ಲಕ್ಷದ 'ಹೋಂಡಾ ಎಲಿವೇಟ್'ಗೆ 3 ಬದಲಿ ಕಾರುಗಳಿವು!

ಹೋಂಡಾ ಎಲಿವೇಟ್ (Honda Elevate) ಪ್ರಮುಖ ಎಸ್‌ಯುವಿಯಾಗಿದೆ. ಇದು ರೂ.11 ಲಕ್ಷದಿಂದ ರೂ.17 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 15.31 ರಿಂದ 16.92 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಆಸನಗಳಿವೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ. ನೀವು, ಇದೇ 'ಎಲಿವೇಟ್' ಎಸ್‌ಯುವಿಗೆ ಪರ್ಯಾಯವಾಗಿ ಈ 3 ಕಾರುಗಳನ್ನು ಸಹ ಖರೀದಿ ಮಾಡಬಹುದು. ಬನ್ನಿ, ಆ ಬಗ್ಗೆ ಇಲ್ಲಿದೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಮಾರುತಿ ಗ್ರ್ಯಾಂಡ್ ವಿಟಾರಾ (Maruti Grand Vitara): ಈ ಎಸ್‌ಯುವಿಯು 'ಹೋಂಡಾ ಎಲಿವೇಟ್'ಗೆ ಅತ್ಯುತ್ತಮ ಬದಲಿ ಆಯ್ಕೆಯಾಗಲಿದೆ ಎಂದು ಹೇಳಿದರೆ ತಪ್ಪಾಗುವುದಿಲ್ಲ. ಇದು ರೂ.11 ಲಕ್ಷದಿಂದ ರೂ.21 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚರಿಸಬಹುದು.

Best 3 Alternative Cars For Honda Elevate Suv Details

ಈ ಕಾರು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. ಸ್ಟ್ರಾಂಗ್ ಹೈಬ್ರಿಡ್, ಮೈಲ್ಡ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದೆ. 19 ರಿಂದ 27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಸಿಟ್ರನ್ ಸಿ3 ಏರ್‌ಕ್ರಾಸ್ (Citroen C3 Aircross): ಇದು ಕೂಡ 'ಹೋಂಡಾ ಎಲಿವೇಟ್'ಗೆ ಉತ್ತಮವಾದ ಪರ್ಯಾಯ ಆಯ್ಕೆಯಾಗಲಿದೆ. ರೂ.8 ಲಕ್ಷದಿಂದ ರೂ.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಈ ಕಾರು 5/ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ದೊರೆಯುತ್ತದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 511 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ.

Best 3 Alternative Cars For Honda Elevate Suv Details

ನೂತನ ಸಿ3 ಏರ್‌ಕ್ರಾಸ್ ಕಾರು ಪೆಟ್ರೋಲ್ ಎಂಜಿನ್ ಹೊಂದಿದ್ದು, 19 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ ವಿವಿಧ ಆಕರ್ಷಕ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ಸ್ಟೀರಿಂಗ್-ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder): ಈ ಎಸ್‌ಯುವಿಯು 'ಹೋಂಡಾ ಎಲಿವೇಟ್'ಗೆ ಒಳ್ಳೆಯ ಪರ್ಯಾಯ ಆಯ್ಕೆಯಾಗಲಿದೆ. ಇದು ರೂ.11 ಲಕ್ಷದಿಂದ ರೂ.20 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಇದರಲ್ಲಿಯೂ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

Best 3 Alternative Cars For Honda Elevate Suv Details

ಈ ಎಸ್‌ಯುವಿ ಹೆಚ್ಚು ಬಲಿಷ್ಠವಾದ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) & ಸಿಎನ್‌ಜಿ ಪವರ್‌ಟ್ರೇನ್‌ನ್ನು ಹೊಂದಿದೆ. 19 ರಿಂದ 27 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಪನೋರಮಿಕ್ ಸನ್‌ರೂಫ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 3 Alternative Cars For Honda Elevate Suv Details

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Sunday, June 1, 2025, 9:30 [IST]
English summary
Best 3 alternative cars for honda elevate suv details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+