Kia: 6 & 7-ಸೀಟರ್.. 11.49 ಲಕ್ಷ, ಹೊಸ 'ಕಿಯಾ ಕ್ಯಾರೆನ್ಸ್ ಕ್ಲಾವಿಸ್' ಎಂಪಿವಿಗೆ 3 ಬದಲಿ ಕಾರುಗಳಿವು.. ಬೆಲೆ ಎಷ್ಟು?

ಇತ್ತೀಚೆಗೆ ಹೊಸ ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis) ಎಂಪಿವಿಯನ್ನು ಬಿಡುಗಡೆಗೊಳಿಸಲಾಗಿತ್ತು. ಇದು ರೂ.11.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್‌ನ್ನು ಪಡೆದಿದ್ದು, 6 ಹಾಗೂ 7 ಆಸನ ಆಯ್ಕೆ ವ್ಯವಸ್ಥೆಯಲ್ಲಿ ಖರೀದಿಗೆ ಲಭ್ಯವಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪನೋರಮಿಕ್ ಸನ್‌ರೂಫ್ ಮತ್ತು 9-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾಗಳನ್ನು ಹೊಂದಿದೆ. ನೀವು ನೂತನ 'ಕಿಯಾ ಕ್ಯಾರೆನ್ಸ್ ಕ್ಲಾವಿಸ್' ಎಂಪಿವಿಗೆ ಬದಲಾಗಿ ಈ 3 ಕಾರುಗಳನ್ನು ಕೂಡ ತೆಗೆದುಕೊಳ್ಳಬಹುದು. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಹ್ಯುಂಡೈ ಅಲ್ಕಾಜರ್ (Hyundai Alcazar): ಇದು ಪ್ರಮುಖ ಎಸ್‌ಯುವಿಯಾಗಿದ್ದು, 'ಕಿಯಾ ಕ್ಯಾರೆನ್ಸ್ ಕ್ಲಾವಿಸ್' ಎಂಪಿವಿಗೆ ಪರ್ಯಾಯ ಆಯ್ಕೆಯಾಗಲಿದೆ. ಈ ಕಾರು ರೂ.15 ಲಕ್ಷದಿಂದ ರೂ.22 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ಬೆಲೆಯನ್ನು ಒಳಗೊಂಡಿದೆ. ಇದರಲ್ಲಿ 6 ಮತ್ತು 7 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ನಡೆಸಬಹುದು.

Best 3 Alternative Cars for Kia Carens Clavis mpv Alcazar Safari XL6 Details

ಈ ಎಸ್‌ಯುವಿ 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌‌ನ್ನು ಒಳಗೊಂಡಿದೆ. 17.5 ರಿಂದ 20.4 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡಿಸ್‌ಪ್ಲೇಗಳು, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ಪನೊರೊಮಿಕ್ ಸನ್‌ರೂಫ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಟಾಟಾ ಸಫಾರಿ (Tata Safari): ಈ ಎಸ್‌ಯುವಿಯು 'ಕಿಯಾ ಕ್ಯಾರೆನ್ಸ್ ಕ್ಲಾವಿಸ್'ಗೆ ಅತ್ಯುತ್ತಮ ಬದಲಿ ಕಾರಾಗಲಿದೆ. ಇದು ರೂ.15.50 ಲಕ್ಷದಿಂದ ರೂ.27.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 2-ಲೀ. ಡೀಸೆಲ್ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 16 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Best 3 Alternative Cars for Kia Carens Clavis mpv Alcazar Safari XL6 Details

ನೂತನ ಕಾರು 6/ 7 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), ಡುಯಲ್-ಜೋನ್ ಆಟೋಮೆಟಿಕ್ ಎಸಿ, 10-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಮತ್ತು ಸನ್‌ರೂಫ್‌ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6): ಇದು ಕೂಡ 'ಕಿಯಾ ಕ್ಯಾರೆನ್ಸ್ ಕ್ಲಾವಿಸ್' ಎಂಪಿವಿಗೆ ಪರ್ಯಾಯ ಆಯ್ಕೆಯಾಗಲಿದೆ. ಈ ಕಾರು ರೂ.12 ಲಕ್ಷದಿಂದ ರೂ.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇದರಲ್ಲಿ 6 ಆಸನ ಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಸಂಚರಿಸಬಹುದು.

Best 3 Alternative Cars for Kia Carens Clavis mpv Alcazar Safari XL6 Details

ಈ ಎಕ್ಸ್ಎಲ್6 ಎಂಪಿವಿ 1.5-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20 ರಿಂದ 26 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್ ಮತ್ತು ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 4 ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

Best 3 Alternative Cars for Kia Carens Clavis mpv Alcazar Safari XL6 Details

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, May 27, 2025, 8:30 [IST]
English summary
Best 3 alternative cars for kia carens clavis mpv alcazar safari xl6 details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+