24 ಕಿ.ಮೀ ಮೈಲೇಜ್.. 5 ಸೀಟರ್, 8 ಲಕ್ಷ.. ಕಿಯಾ ಸೋನೆಟ್‌ಗೆ 3 ಬದಲಿ ಕಾರುಗಳಿವು.. ಅಷ್ಟೇ ಚೆನ್ನಾಗಿವೆ!
ಕಿಯಾ ಸೋನೆಟ್ (Kia Sonet) ಜನಪ್ರಿಯ ಎಸ್‌ಯುವಿಯಾಗಿದೆ. ಇದು ರೂ.8 ಲಕ್ಷದಿಂದ ರೂ.15.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 18 ರಿಂದ 24 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನಗಳಿವೆ. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ. ನೀವು ಸೋನೆಟ್‌ಗೆ ಪರ್ಯಾಯವಾಗಿ ಈ 3 ಕಾರುಗಳನ್ನು ಖರೀದಿ ಮಾಡಬಹುದು. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಸ್ಕೋಡಾ ಕೈಲಾಕ್ (Skoda Kylaq):
ಈ ಎಸ್‌ಯುವಿಯು ಕಿಯಾ ಸೋನೆಟ್‌ಗೆ ಅತ್ಯುತ್ತಮವಾದ ಬದಲಿ ಆಯ್ಕೆಯಾಗಲಿದ್ದು, ರೂ.8.25 ಲಕ್ಷದಿಂದ ರೂ.13.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಬ್ರಿಲಿಯಂಟ್ ಸಿಲ್ವರ್, ಲಾವಾ ಬ್ಲೂ, ಆಲಿವ್ ಗೋಲ್ಡ್ ಮತ್ತು ಕಾರ್ಬನ್ ಸ್ಟೀಲ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು 1.0-ಲೀ. ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 15 ರಿಂದ 18 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಜೊತೆಗೆ 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 10-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 8-ಇಂಚಿರುವ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಸನ್‌ರೂಫ್ ಹಾಗೂ ಕೀಲೆಸ್ ಎಂಟ್ರಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx):
ಈ ಕಾರನ್ನು ಕೂಡ ಕಿಯಾ ಸೋನೆಟ್‌ಗೆ ಪರ್ಯಾಯವಾಗಿ ಖರೀದಿ ಮಾಡಬಹುದು. ಅದಕ್ಕೆ ತಕ್ಕಂತೆ ಬಜೆಟ್ ಬೆಲೆಯಲ್ಲಿಯೂ ಸಿಗಲಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಮನೆಗೆ ತರಬಹುದು. ಕನಿಷ್ಠ ರೂ.7.54 ಲಕ್ಷ ಹಾಗೂ ಗರಿಷ್ಠ ರೂ.13.03 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ.

ಹೊಸ ಫ್ರಾಂಕ್ಸ್ ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಹೊಂದಿದೆ. ಆರ್ಕ್ಟಿಕ್ ವೈಟ್, ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ ಮತ್ತು ಅರ್ಥನ್ ಬ್ರೌನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಡುಯಲ್ಜೆಟ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 20 ರಿಂದ 28 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.
ಇದರಲ್ಲಿಯೂ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 9-ಇಂಚಿರುವ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಮಲ್ಟಿ-ಫಂಕ್ಷನ್ ಸ್ಟೀರಿಂಗ್ ವೀಲ್, ಅರ್ಕಾಮಿಸ್-ಟ್ಯೂನ್ಡ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಹ್ಯುಂಡೈ ವೆನ್ಯೂ (Hyundai Venue):
ಈ ಎಸ್‌ಯುವಿಯು ಕಿಯಾ ಸೋನೆಟ್‌ಗೆ ಉತ್ತಮವಾದ ಬದಲಿ ಆಯ್ಕೆಯಾಗಲಿದೆ. ಅತಿ ಕಡಿಮೆ ಬೆಲೆಯನ್ನು ಒಳಗೊಂಡಿದ್ದು, ಮಧ್ಯಮ ಹಾಗೂ ಶ್ರೀಮಂತ ವರ್ಗದ ಗ್ರಾಹಕರು ಕೂಡ ಸುಲಭವಾಗಿ ಖರೀದಿ ಮಾಡಬಹುದು. ರೂ.7.94 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ.

ನೂತನ ವೆನ್ಯೂ ಕಾರು 5 ಆಸನಗಳನ್ನು ಒಳಗೊಂಡಿದೆ. 1.2 ಲೀ. ಪೆಟ್ರೋಲ್, 1-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 22 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಏರ್ ಪ್ಯೂರಿಫೈಯರ್, ಸನ್‌ರೂಫ್ ಮತ್ತು ಪುಶ್-ಬಟನ್ ಸ್ಟಾರ್ಟ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.


Click it and Unblock the Notifications