7-ಸೀಟರ್.. 7.99 ಲಕ್ಷ, ಹೊಸ ಮಹೀಂದ್ರಾ ಬೊಲೆರೊಗೆ ಪರ್ಯಾಯವಾಗಬಲ್ಲ 3 ಜನಪ್ರಿಯ ಕಾರುಗಳಿವು.. ಬೆಲೆ ಎಷ್ಟು?

ನಿನ್ನೆಯಷ್ಟೇ 2025ರ ಮಹೀಂದ್ರಾ ಬೊಲೆರೊ ಫೇಸ್‌ಲಿಫ್ಟ್ (Mahindra Bolero Facelift) ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಗಿದೆ. ಇದು ರೂ.7.99 ಲಕ್ಷದಿಂದ ರೂ.9.69 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಸ್ಟೆಲ್ತ್ ಬ್ಲ್ಯಾಕ್, ಡೈಮಂಡ್ ವೈಟ್, ಡಿಸ್ಯಾಟ್ ಸಿಲ್ವರ್ & ರಾಕಿ ಬೀಜ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 7 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 16 ಕಿ.ಮೀ ವರೆಗೆ ಮೈಲೇಜ್ ಕೊಡಬಲ್ಲದು. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ನೀವು ಇದೇ 'ಮಹೀಂದ್ರಾ ಬೊಲೆರೊ ಫೇಸ್‌ಲಿಫ್ಟ್'ಗೆ ಬದಲಾಗಿ ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga), ಟೊಯೊಟಾ ರೂಮಿಯನ್‌ (Toyota Rumion) ಮತ್ತು ರೆನಾಲ್ಟ್ ಟ್ರೈಬರ್ (Renault Triber) ಕಾರುಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

Best 3 Alternative Cars For Mahindra Bolero Facelift Ertiga Rumion And Triber

ಮಾರುತಿ ಸುಜುಕಿ ಎರ್ಟಿಗಾ:

ಇದೊಂದು ಎಂಪಿವಿಯಾಗಿದೆ. ಆದರೂ 'ಮಹೀಂದ್ರಾ ಬೊಲೆರೊ ಫೇಸ್‌ಲಿಫ್ಟ್'ಗೆ ಪರ್ಯಾಯ ಆಯ್ಕೆಯಾಗಲಿದೆ. ಅದಕ್ಕೆ ತಕ್ಕಂತೆ ಕನಿಷ್ಠ ರೂ.8.80 ಲಕ್ಷ ಮತ್ತು ಗರಿಷ್ಠ ರೂ.12.94 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಪರ್ಲ್ ಮೆಟಾಲಿಕ್ ಆರ್ಕ್ಟಿಕ್ ವೈಟ್, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್, ಪರ್ಲ್ ಮೆಟಾಲಿಕ್ ಆಬರ್ನ್ ರೆಡ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಕ್ಸ್‌ಫರ್ಡ್ ಬ್ಲೂ ಹಾಗೂ ಸ್ಪ್ಲೆಂಡಿಡ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ ಎರ್ಟಿಗಾ 7 ಆಸನಗಳನ್ನು ಒಳಗೊಂಡಿದೆ. 1.5-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20 ರಿಂದ 26 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಪ್ಯಾಡಲ್ ಶಿಫ್ಟರ್ಸ್ ಹಾಗೂ ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

Best 3 Alternative Cars For Mahindra Bolero Facelift Ertiga Rumion And Triber

ಟೊಯೊಟಾ ರೂಮಿಯನ್‌:

ಈ ಎಂಪಿವಿಯು ಕೂಡ 'ಮಹೀಂದ್ರಾ ಬೊಲೆರೊ ಫೇಸ್‌ಲಿಫ್ಟ್'ಗೆ ಬದಲಿಯಾಗಲಿದೆ. ರೂ.10.44 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಂಟೈಸಿಂಗ್ ಸಿಲ್ವರ್, ಸ್ಪಂಕಿ ಬ್ಲೂ, ಐಕಾನಿಕ್ ಗ್ರೇ, ರಸ್ಟಿಕ್ ಬ್ರೌನ್ ಹಾಗೂ ಕೆಫೆ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಹೊಸ ರೂಮಿಯನ್‌ 7 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 1.5-ಲೀಟರ್ ಸಾಮರ್ಥ್ಯದ ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 26 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಎಸಿ ಹಾಗೂ ಪ್ಯಾಡಲ್ ಶಿಫ್ಟರ್‌ಗಳು ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

Best 3 Alternative Cars For Mahindra Bolero Facelift Ertiga Rumion And Triber

ರೆನಾಲ್ಟ್ ಟ್ರೈಬರ್:

ಇದು ಎಂಪಿವಿಯಾಗಿದ್ದು, 'ಮಹೀಂದ್ರಾ ಬೊಲೆರೊ ಫೇಸ್‌ಲಿಫ್ಟ್'ಗೆ ಪರ್ಯಾಯ ಆಯ್ಕೆಯಾಗಲಿದೆ. ಕನಿಷ್ಠ ರೂ.5.76 ಲಕ್ಷ ಹಾಗೂ ಗರಿಷ್ಠ ರೂ.8.60 ಲಕ್ಷ (ಎಕ್ಸ್-ಶೋರೂಂ) ದರವನ್ನು ದರವನ್ನು ಪಡೆದಿದೆ. ಉತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಆಂಬರ್ ಟೆರಾಕೋಟಾ, ಜನ್ಸ್ಕರ್ ಬ್ಲೂ ಹಾಗೂ ಶ್ಯಾಡೋ ಗ್ರೇ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

Best 3 Alternative Cars For Mahindra Bolero Facelift Ertiga Rumion And Triber

ಈ ಟ್ರೈಬರ್ 7 ಆಸನಗಳನ್ನು ಹೊಂದಿದೆ. 1-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 20 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 8 ಇಂಚಿನ ಪ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಹಾಗೂ ಮ್ಯಾನುವಲ್ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

More from DriveSpark

Article Published On: Tuesday, October 7, 2025, 23:18 [IST]
English summary
Best 3 alternative cars for mahindra bolero facelift ertiga rumion and triber
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+