ಮಾರುತಿ ಸುಜುಕಿ ಬಲೆನೊಗೆ 3 ಪರ್ಯಾಯ ಕಾರುಗಳಿವು.. ಬೆಲೆಗೂ ಅಗ್ಗ, ನಿರೀಕ್ಷೆಗೂ ಮೀರಿದ ವಿಶೇಷತೆಗಳು!
ಮಾರುತಿ ಸುಜುಕಿ ಬಲೆನೊ (Maruti Suzuki Baleno) ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿ ಹೊರಹೊಮ್ಮಿದೆ. ಇದು ಕನಿಷ್ಠ ರೂ.6.70 ಲಕ್ಷ ಹಾಗೂ ಗರಿಷ್ಠ ರೂ.9.92 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. 1.2-ಲೀ. ಸಾಮರ್ಥ್ಯದ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದ್ದು, ಯಾವ ಬೈಕ್‌ಗೂ ಕಮ್ಮಿಯಿಲ್ಲದಂತೆ 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಕೀಲೆಸ್ ಎಂಟ್ರಿಯಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಇದರಲ್ಲಿ 5 ಜನರು ಓಡಾಟ ನಡೆಸಬಹುದು. ದೇಶೀಯ ಗ್ರಾಹಕರು ಬಲೆನೊಗೆ ಪರ್ಯಾಯವಾಗಿ ಈ 3 ಕಾರುಗಳನ್ನು ಕೂಡ ತೆಗೆದುಕೊಳ್ಳಬಹುದು. ಬನ್ನಿ, ಇವುಗಳ ಬೆಲೆ ಮತ್ತು ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರವನ್ನು ತಿಳಿಯೋಣ.
ಟೊಯೊಟಾ ಗ್ಲಾನ್ಜಾ (Toyota Glanza): ಇದು ಸಹ ಜನಪ್ರಿಯ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದ್ದು, ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿದೆ. ಇದರಿಂದ ಮಧ್ಯಮ ವರ್ಗಕ್ಕೆ ಸೇರಿರುವ ಗ್ರಾಹಕರು ಸುಲಭವಾಗಿ ಖರೀದಿ ಮಾಡಬಹುದು. ಈ ಕಾರು, ರೂ.6.90 ಲಕ್ಷದಿಂದ ರೂ.10 ಲಕ್ಷ ಎಕ್ಸ್-ಶೋರೂಂ ದರವನ್ನು ಹೊಂದಿದೆ.

ನೂತನ ಟೊಯೊಟಾ ಗ್ಲಾನ್ಜಾ ಹ್ಯಾಚ್‌ಬ್ಯಾಕ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದ್ದು, 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿರುವ ಈ ಕಾರು, ಹಲವು ಆಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋ ಕ್ಲೇಮೇಟ್ ಕಂಟ್ರೋಲ್ ಮತ್ತು ಎಂಜಿನ್ ಸ್ಟಾರ್ಟ್/ಸ್ಟಾಪ್ ಸಿಸ್ಟಮ್‌ನ್ನು ಹೊಂದಿದೆ.
ಟಾಟಾ ಆಲ್ಟ್ರೋಜ್ (Tata Altroz): ಈ ಕಾರು ಹೆಚ್ಚು ಅತ್ಯಾಧುನಿಕವಾಗಿದ್ದು, ಸಾಮಾನ್ಯ ಗ್ರಾಹಕರಿಗೆ ಬಜೆಟ್ ಬೆಲೆಯಲ್ಲಿಯೂ ಸಿಗುತ್ತದೆ. ಇದು ಕನಿಷ್ಠ ರೂ.6.65 ಲಕ್ಷ ಮತ್ತು ಗರಿಷ್ಠ ರೂ.11.30 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. ಇದರಲ್ಲಿಯೂ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಸುಲಭವಾಗಿ ದೂರದ ಊರುಗಳಿಗೆ ಪ್ರಯಾಣ ಮಾಡಬಹುದು.

ಈ ಟಾಟಾ ಆಲ್ಟ್ರೋಜ್ ಹ್ಯಾಚ್‌ಬ್ಯಾಕ್, 1.2-ಲೀ. ಟರ್ಬೊ ಪೆಟ್ರೋಲ್, 1.5-ಲೀ. ಡೀಸೆಲ್ ಮತ್ತು 1.2-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19.33 ರಿಂದ 26.20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.
ಹ್ಯುಂಡೈ ಐ20 (Hyundai i20): ಇದು ಪ್ರಖ್ಯಾತ ಹ್ಯಾಚ್‌ಬ್ಯಾಕ್ ಆಗಿದ್ದು, ಅತ್ಯಂತ ಕಡಿಮೆ ಬೆಲೆಯಲ್ಲಿಯೂ ಖರೀದಿದಾರರು ಕೊಂಡುಕೊಳ್ಳಬಹುದು. ಈ ಕಾರು ರೂ.7.04 ಲಕ್ಷದಿಂದ ರೂ.11.25 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. 1.2-ಲೀ. ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 16 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಹೊಸ ಹ್ಯುಂಡೈ ಐ20 ಕಾರು ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಏರ್ ಪ್ಯೂರಿಫೈಯರ್, ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಈ ಕಾರಿನಲ್ಲಿಯೂ 5 ಮಂದಿ ಓಡಾಟ ನಡೆಸಬಹುದು. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications