500 ಕಿ.ಮೀಗೂ ಅಧಿಕ ಓಡಬಲ್ಲದು: ನಿನ್ನೆಯಷ್ಟೇ ಹೊಸ ಮಾರುತಿ ಎಸ್‌ಯುವಿ ಅನಾವರಣ.. 3 ಪರ್ಯಾಯ ಕಾರುಗಳು, ಬೆಲೆ ಎಷ್ಟು?
ನಿನ್ನೆಯಷ್ಟೇ ಭಾರತದಲ್ಲಿ ಹೊಸ ಮಾರುತಿ ಸುಜುಕಿ ಇ-ವಿಟಾರಾ (Maruti Suzuki e Vitara) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಮತ್ತೊಮ್ಮೆ ಅನಾವರಣಗೊಳಿಸಲಾಯಿತು. ಇದು ರೂ.17 ಲಕ್ಷದಿಂದ ರೂ.22.50 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ಲಭ್ಯವಾಗುವ ನಿರೀಕ್ಷೆಯಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ನೆಕ್ಸಾ ಬ್ಲೂ, ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಗ್ರ್ಯಾಂಡಿಯರ್ ಗ್ರೇ, ಬ್ಲ್ಯೂಯಿಶ್ ಬ್ಲ್ಯಾಕ್ ಮತ್ತು ಆಪ್ಯುಲೆಂಟ್ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು.
ಈ ಕಾರು 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 543 ಕಿ.ಮೀವರೆಗೆ (ARAI) ರೇಂಜ್ ನೀಡಲಿದೆ ಎಂದು ಕಂಪನಿ ಹೇಳಿದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25 ಇಂಚಿನ ಆಲ್ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 7 ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ನೀವು ಇದೇ 'ಮಾರುತಿ ಇ-ವಿಟಾರಾ'ಗೆ ಬದಲಾಗಿ ಈ 3 ಎಲೆಕ್ಟ್ರಿಕ್ ಎಸ್‌ಯುವಿಗಳಾದ ಟಾಟಾ ನೆಕ್ಸಾನ್ ಇವಿ, ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ ಹಾಗೂ ವಿನ್‌ಫಾಸ್ಟ್ ವಿಎಫ್6ಗಳನ್ನು ಖರೀದಿ ಮಾಡಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಟಾಟಾ ನೆಕ್ಸಾನ್ ಇವಿ (Tata Nexon EV):
ಇದೊಂದು ಜನಪ್ರಿಯ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.12.49 ಲಕ್ಷದಿಂದ ರೂ.17.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ, ಫ್ಲೇಮ್ ರೆಡ್, ಇಂಟೆನ್ಸಿ ಟೀಲ್, ಎಂಪವರ್ಡ್ ಆಕ್ಸೈಡ್, ಕ್ರಿಯೇಟಿವ್ ಓಷನ್ ಮತ್ತು ಎಂಪವರ್ಡ್ ಡಾರ್ಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ.

ನೂತನ 'ನೆಕ್ಸಾನ್ ಇವಿ' 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 275 ಕಿ.ಮೀ ರಿಂದ 489 ಕಿ.ಮೀವರೆಗೆ ರೇಂಜ್ ಕೊಡುತ್ತದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.
ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric):
ಈ ಎಸ್‌ಯುವಿಯನ್ನು ಗ್ರಾಹಕರು ಮೆಚ್ಚಿಕೊಂಡಿದ್ದಾರೆ. ರೂ.18.02 ಲಕ್ಷದಿಂದ ರೂ.24.55 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಅಟ್ಲಾಸ್ ವೈಟ್, ಸ್ಟಾರಿ ನೈಟ್, ಓಷನ್ ಬ್ಲೂ ಮ್ಯಾಟ್, ಟೈಟಾನ್ ಗ್ರೇ ಮ್ಯಾಟ್ ಹಾಗೂ ಅಬಿಸ್ ಬ್ಲ್ಯಾಕ್ ಪರ್ಲ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು.

ಹೊಸ 'ಕ್ರೆಟಾ ಎಲೆಕ್ಟ್ರಿಕ್' 42 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 51.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 390 ರಿಂದ 473 ಕಿ.ಮೀವರೆಗೆ ಕಿ.ಮೀವರೆಗೆ ರೇಂಜ್ ನೀಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಸ್ಕ್ರೀನ್, ಮತ್ತು ಪನೋರಮಿಕ್ ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ಡಿಜಿಟಲ್ ಕೀಯನ್ನು ಒಳಗೊಂಡಿದೆ.
ವಿನ್‌ಫಾಸ್ಟ್ ವಿಎಫ್6 (VinFast VF6):
ಇದು ಪ್ರಖ್ಯಾತ ಎಸ್‌ಯುವಿಯಾಗಿದೆ. ರೂ.16.49 ಲಕ್ಷದಿಂದ ರೂ.18.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೋಡುಗರ ಕಣ್ಣು ಕುಕ್ಕುವಂತಹ ವಿನ್ಯಾಸವನ್ನು ಹೊಂದಿದೆ. ಕ್ರಿಮ್ಸನ್ ರೆಡ್, ಜೆನಿತ್ ಗ್ರೇ, ಅರ್ಬನ್ ಮಿಂಟ್, ಜೆಟ್ ಬ್ಲ್ಯಾಕ್ ಮತ್ತು ಡೆಸ್ಯಾಟ್ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ.

ನೂತನ 'ವಿನ್‌ಫಾಸ್ಟ್ ವಿಎಫ್6' ಕಾರು 59.6 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 470 ಕಿ.ಮೀವರೆಗೆ ರೇಂಜ್ ಕೊಡುತ್ತದೆ. 12.9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, 8 ಸ್ಪೀಕರ್ ಸೌಂಡ್ ಸಿಸ್ಟಮ್ ಹಾಗೂ ಪನೋರಮಿಕ್ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.


Click it and Unblock the Notifications








