21 Km ಮೈಲೇಜ್.. 5-ಸೀಟರ್, 5.85 ಲಕ್ಷ.. ಮಾರುತಿ ಇಗ್ನಿಸ್‌ಗೆ 3 ಬದಲಿ ಕಾರುಗಳಿವು.. ಅಷ್ಟೇ ಚೆನ್ನಾಗಿವೆ!
ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಇದು ರೂ.5.85 ಲಕ್ಷದಿಂದ ರೂ.8.12 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.2-ಲೀ. ಪೆಟ್ರೋಲ್ ಎಂಜಿನ್ ಪಡೆದಿದ್ದು, 20.89 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಏರ್‌ಬ್ಯಾಗ್‌ಗಳು ಹಾಗೂ ರೇರ್ ಪಾರ್ಕಿಂಗ್ ಸೇನಾರ್ಸ್ ಹೊಂದಿದೆ. ನೀವು ಇದೇ ಇಗ್ನಿಸ್‌ಗೆ ಪರ್ಯಾಯವಾಗಿ ಈ 3 ಕಾರುಗಳನ್ನು ಕೂಡ ಖರೀದಿ ಮಾಡಬಹುದು. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಟಾಟಾ ಪಂಚ್ (Tata Punch):
ಇದೊಂದು ಮೈಕ್ರೋ ಎಸ್‌ಯುವಿಯಾಗಿದೆ. ಆದರೂ ಮಾರುತಿ ಸುಜುಕಿ ಇಗ್ನಿಸ್ ಹ್ಯಾಚ್‌ಬ್ಯಾಕ್‌ಗೆ ಬದಲಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ಕೈಗೆಟುಕುವ ಬೆಲೆಯಲ್ಲಿಯೇ ಸಿಗಲಿದ್ದು, ರೂ.6.20 ಲಕ್ಷದಿಂದ ರೂ.10.32 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಕಾರಿನಲ್ಲೂ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

ನೂತನ ಪಂಚ್ ಎಸ್‌ಯುವಿಯು ಬೆಲೆಗೆ ತಕ್ಕಂತೆ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದ್ದು, 18.8 ರಿಂದ 26.99 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಹ್ಯುಂಡೈ ಎಕ್ಸ್‌ಟರ್ (Hyundai Exter):
ಈ ಎಸ್‌ಯುವಿಯನ್ನು ಸಹ ಮಾರುತಿ ಸುಜುಕಿ ಇಗ್ನಿಸ್‌ಗೆ ಪರ್ಯಾಯವಾಗಿ ಮನೆಗೆ ತರಬಹುದು. ಇದು ಬಜೆಟ್ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯಲಿದ್ದು, ರೂ.6.21 ಲಕ್ಷದಿಂದ ರೂ.10.51 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಜೊತೆಗೆ ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಅಟ್ಲಾಸ್ ವೈಟ್, ಫೈರಿ ರೆಡ್, ರೇಂಜರ್ ಖಾಕಿ, ಸ್ಟಾರಿ ನೈಟ್ ಮತ್ತು ಟೈಟಾನ್ ಗ್ರೇ ಸೇರಿದಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ನೂತನ ಎಕ್ಸ್‌ಟರ್ ಎಸ್‌ಯುವಿಯು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 19 ರಿಂದ 27 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿಯೂ 5 ಆಸನಗಳಿವೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 391 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ಈ ಕಾರು ಗ್ರಾಹಕರನ್ನು ಸೆಳೆಯಬಲ್ಲ ಹತ್ತಾರು ಅತ್ಯಾಕರ್ಷಕ ವೈಶಿಷ್ಟ್ಯಗಳನ್ನು ಪಡೆದಿದೆ. ಬಹುಮುಖ್ಯವಾಗಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಸನ್‌ರೂಫ್ ಮತ್ತು ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx):
ಇದು ಮಾರುತಿ ಕಂಪನಿಯ ಎಸ್‌ಯುವಿಯಾಗಿದೆ. ಅದರ ಹೊರಯಾಗಿಯೂ ಇಗ್ನಿಸ್ ಹ್ಯಾಚ್‌ಬ್ಯಾಕ್‌ಗೆ ಪರ್ಯಾಯವಾಗಿ ಖರೀದಿ ಮಾಡಬಹುದು. ಅದಕ್ಕೆ ಅನುಗುಣವಾಗಿ ರೂ.7.54 ಲಕ್ಷದಿಂದ ರೂ.13.03 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ ಸಹ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಜೊತೆಗೆ ಕಣ್ಣು ಕ್ಕುಕುವಂತಹ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಾಗುತ್ತದೆ.

ಈ ಕಾರು 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಡುಯಲ್ಜೆಟ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 20 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್ ಹಾಗೂ ಟೈಪ್ ಸಿ ಚಾರ್ಜರ್‌ನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.


Click it and Unblock the Notifications