8-ಸೀಟರ್.. 23 Km ಮೈಲೇಜ್, ಮಾರುತಿ ಇನ್ವಿಕ್ಟೋಗೆ 3 ಬದಲಿ ಕಾರುಗಳಿವು.. ಅಷ್ಟೇ ಚೆನ್ನಾಗಿವೆ, ಬೆಲೆ ಎಷ್ಟು?
ಮಾರುತಿ ಸುಜುಕಿ ಇನ್ವಿಕ್ಟೋ (Maruti Suzuki Invicto) ಜನಪ್ರಿಯ ಎಂಪಿವಿಯಾಗಿದ್ದು, ರೂ.25.51 ಲಕ್ಷದಿಂದ ರೂ.29.22 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 2-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್ ಒಳಗೊಂಡಿದ್ದು, 23 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 7/ 8 ಆಸನಗಳಿವೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ. ನೀವು 'ಇನ್ವಿಕ್ಟೋ' ಬದಲಿಗೆ ಈ 3 ಪರ್ಯಾಯ ಕಾರುಗಳನ್ನು ಖರೀದಿ ಮಾಡಬಹುದು. ಬನ್ನಿ, ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis):
ಈ ಎಂಪಿವಿಯು 'ಮಾರುತಿ ಸುಜುಕಿ ಇನ್ವಿಕ್ಟೋ'ಗೆ ಅತ್ಯುತ್ತಮವಾದ ಬದಲಿ ಆಯ್ಕೆಯಾಗಲಿದ್ದು, ರೂ.11.50 ಲಕ್ಷದಿಂದ ರೂ.21.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಈ ಕಾರಿನಲ್ಲಿ 6/ 7 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಪ್ರವಾಸದ ವೇಳೆಯಲ್ಲಿ ಲಗೇಜ್ ತೆಗೆದುಕೊಂಡು ಹೋಗಲು 216 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

ಇದು ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 15.34 -ರಿಂದ 19.54 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಜೊತೆಗೆ ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ, ಗ್ಲೇಸಿಯರ್ ವೈಟ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಸ್ಪಾರ್ಕ್ಲಿಂಗ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ನೂತನ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ಸನ್‌ರೂಫ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ - ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross):
ಇದನ್ನು ಕೂಡ 'ಮಾರುತಿ ಸುಜುಕಿ ಇನ್ವಿಕ್ಟೋ'ಗೆ ಪರ್ಯಾಯ ಎಂಪಿವಿ ಎಂದು ಪರಿಗಣಿಸಬಹುದು. ಆದರೂ, ಟೊಯೊಟಾ ಹಾಗೂ ಮಾರುತಿ ಸುಜುಕಿ ಕಂಪನಿಗಳು ಪಾಲುದಾರಿಕೆ ಹೊಂದಿರುವುದರಿಂದ 'ಇನ್ವಿಕ್ಟೋ' ಕಾರು ಇನ್ನೋವಾ ಹೈಕ್ರಾಸ್ ಎಂಪಿವಿಯನ್ನೇ ಆಧರಿಸಿದೆ. ಹೊಸ 'ಇನ್ನೋವಾ ಹೈಕ್ರಾಸ್' ರೂ.19.94 ಲಕ್ಷದಿಂದ ರೂ.31.34 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.
ಈ ಹೈಕ್ರಾಸ್ ಎಂಪಿವಿಯಲ್ಲಿ 7/ 8 ಆಸನಗಳಿವೆ. 2.0-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 2.0-ಲೀ. ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್ ಆಯ್ಕೆಯನ್ನು ಹೊಂದಿದೆ. 21 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಸನ್‌ರೂಫ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic):
ಇದು ಜನಪ್ರಿಯ ಎಸ್‌ಯುವಿಯಾಗಿದ್ದು, 'ಮಾರುತಿ ಸುಜುಕಿ ಇನ್ವಿಕ್ಟೋ'ಗೆ ಬದಲಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.13.77 ಲಕ್ಷದಿಂದ ರೂ.17.72 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಇದರಲ್ಲಿ 7/ 9 ಆಸನ ಆಯ್ಕೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಬಹುದು.

ಈ ಕಾರು ಬಲಿಷ್ಠವಾದ ಪವರ್‌ಟ್ರೇನ್‌ನ್ನು ಹೊಂದಿದೆ. 2.2-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 14 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಆಟೋ ಕ್ಲೇಮೇಟ್ ಕಂಟ್ರೋಲ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್-ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿ - ಲಾಕ್ ಬ್ರೇಕಿಂಗ್ ಸಿಸ್ಟಮ್) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಗಳನ್ನು ಹೊಂದಿದೆ.


Click it and Unblock the Notifications