33 ಕಿ.ಮೀ ಮೈಲೇಜ್.. 5-ಸೀಟರ್, 3.50 ಲಕ್ಷ.. ಈ ಮಾರುತಿ ಕಾರಿಗೆ ಪರ್ಯಾಯವಾಗಬಲ್ಲ 3 ಕಾರುಗಳಿವು, ಬೆಲೆ ಎಷ್ಟು?
ಮಾರುತಿ ಸುಜುಕಿ ಎಸ್-ಪ್ರೆಸ್ಸೊ (Maruti Suzuki S-Presso) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ರೂ.3.50 ಲಕ್ಷದಿಂದ ರೂ.5.25 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದರಲ್ಲಿ 1-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಇದ್ದು, 24 ರಿಂದ 33 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು), ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಹಾಗೂ ಯುಎಸ್‌ಬಿ ಕನೆಕ್ಟಿವಿಟಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 2 ಏರ್‌ಬ್ಯಾಗ್‌ಗಳು ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಒಳಗೊಂಡಿದೆ. ನೀವು ಇದೇ 'ಎಸ್-ಪ್ರೆಸ್ಸೊ'ಗೆ ಬದಲಾಗಿ ಈ 3 ಜನಪ್ರಿಯ ಕಾರುಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ರೆನಾಲ್ಟ್ ಕ್ವಿಡ್ (Renault Kwid):
ಇದೊಂದು ಹ್ಯಾಚ್‌ಬ್ಯಾಕ್ ಆಗಿದ್ದು, 'ಮಾರುತಿ ಸುಜುಕಿ ಎಸ್-ಪ್ರೆಸ್ಸೊ'ಗೆ ಬದಲಾಗಿಯೂ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ಕನಿಷ್ಠ ರೂ.4.30 ಲಕ್ಷ ಹಾಗೂ ಗರಿಷ್ಠ ರೂ.5.90 (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಎಲೆಕ್ಟ್ರಿಕ್ ಬ್ಲೂ, ಪ್ಲಾನೆಟ್ ಗ್ರೇ, ಪರ್ಲ್ ವೈಟ್, ಐಸ್ ಕೂಲ್ ವೈಟ್, ಔಟ್‌ಬ್ಯಾಕ್ ಬ್ರೊನ್ & ಮೂನ್‌ಲೈಟ್ ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ 'ಕ್ವಿಡ್' 1-ಲೀ. ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. ರೂಪಾಂತರಗಳಿಗೆ ಅನುಗುಣವಾಗಿ 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 21 ರಿಂದ 22 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 157 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 18.46 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ಈ ಕಾರು 5 ಆಸನಗಳನ್ನು ಒಳಗೊಂಡಿದೆ. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 279 ಲೀ.ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (8 ಇಂಚು), ಕೀ ಲೆಸ್ ಎಂಟ್ರಿ ಮತ್ತು ಮ್ಯಾನುವಲ್ ಎಸಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ ಹಿಲ್ ಸ್ಟಾರ್ಟ್ ಅಸಿಸ್ಟ್‌ನ್ನು ಹೊಂದಿದೆ.

ಟಾಟಾ ಟಿಯಾಗೊ (Tata Tiago):
ಇದು ಪ್ರಖ್ಯಾತ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದ್ದು, 'ಮಾರುತಿ ಸುಜುಕಿ ಎಸ್-ಪ್ರೆಸ್ಸೊ'ಗೆ ಪರ್ಯಾಯ ಆಯ್ಕೆಯಾಗಲಿದೆ. ರೂ.4.57 ಲಕ್ಷದಿಂದ ರೂ.7.82 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಅರಿಜೋನಾ ಬ್ಲೂ, ಟೊರ್ನಾಡೊ ಬ್ಲೂ, ಓಷನ್ ಬ್ಲೂ, ಡೇಟೋನಾ ಗ್ರೇ ಮತ್ತು ಸೂಪರ್ನೋವಾ ಕಾಪರ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.
ಹೊಸ 'ಟಿಯಾಗೊ' 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 28 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25 ಇಂಚು), ಬ್ಲೂಟೂತ್ ಕನೆಕ್ಟಿವಿಟಿ, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಕೀಲೆಸ್ ಎಂಟ್ರಿ, ಡುಯಲ್ ಏರ್‌ಬ್ಯಾಗ್‌ಗಳು ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಪಡೆದಿದೆ.

ಮಾರುತಿ ಸುಜುಕಿ ಇಗ್ನಿಸ್ (Maruti Suzuki Ignis):
ಈ ಹ್ಯಾಚ್‌ಬ್ಯಾಕ್ ಸ್ವತಃ ಮಾರುತಿ ಸುಜುಕಿಯ ಒಡೆತನದಲ್ಲಿದ್ದರೂ 'ಎಸ್-ಪ್ರೆಸ್ಸೊ'ಗೆ ಬದಲಿ ಕಾರಾಗಿದೆ. ಕನಿಷ್ಠ ರೂ.5.35 ಲಕ್ಷ ಮತ್ತು ಗರಿಷ್ಠ ರೂ.7.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ನೆಕ್ಸಾ ಬ್ಲ್ಯೂ, ಸಿಲ್ಕಿ ಸಿಲ್ವರ್, ಪರ್ಲ್ ಆರ್ಕ್ಟಿಕ್ ವೈಟ್, ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ & ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ನೂತನ 'ಇಗ್ನಿಸ್' 1.2-ಲೀ. ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 21 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (7 ಇಂಚು), ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟಾರ್ಟ್/ಸ್ಟಾಪ್ ಬಟನ್, ಕೀಲೆಸ್ ಎಂಟ್ರಿ, ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಸೆಂಟ್ರಲ್ ಲಾಕಿಂಗ್ ಸಿಸ್ಟಮ್ & ರೇರ್ ಪಾರ್ಕಿಂಗ್ ಸೆನ್ಸಾರ್‌ನಂತಹ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








