11 ಲಕ್ಷ.. 6 ಸೀಟರ್.. ಈ 'ಮಾರುತಿ ಎಂಪಿವಿ'ಗೆ ಮೂರು ಪರ್ಯಾಯ ಕಾರುಗಳಿವು.. ಬೆಲೆ ಎಷ್ಟು, ವಿಶೇಷತೆಗಳೇನು?

ಮಾರುತಿ ಸುಜುಕಿ ಎಕ್ಸ್ಎಲ್6 (Maruti Suzuki XL6) ಜನಪ್ರಿಯ ಎಂಪಿವಿಯಾಗಿ ಹೊರಹೊಮ್ಮಿದೆ. ಇದು ಕನಿಷ್ಠ ರೂ.12 ಲಕ್ಷ ಮತ್ತು ಗರಿಷ್ಠ ರೂ.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಬಲಿಷ್ಠವಾದ 1.5-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 20 ರಿಂದ 26 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 6 ಆಸನಗಳಿವೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 4 ಏರ್‌ಬ್ಯಾಗ್‌ಗಳನ್ನು ಹೊಂದಿದೆ. ನೀವು ಇದೇ 'ಎಕ್ಸ್ಎಲ್6' ಎಂಪಿವಿಗೆ ಬದಲಾಗಿ ಈ 3 ಕಾರುಗಳನ್ನು ಕೂಡ ಖರೀದಿ ಮಾಡಬಹುದು. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮಹೀಂದ್ರ ಬೊಲೆರೊ ನಿಯೋ (Mahindra Bolero Neo): ಇದೊಂದು ಎಸ್‌ಯುವಿಯಾಗಿದ್ದು, 'ಮಾರುತಿ ಸುಜುಕಿ ಎಕ್ಸ್ಎಲ್6' ಎಂಪಿವಿಗೆ ಅತ್ಯುತ್ತಮವಾದ ಪರ್ಯಾಯ ಆಯ್ಕೆಯಾಗಲಿದೆ. ಅದಕ್ಕೆ ತಕ್ಕಂತೆ ಬಜೆಟ್ ಬೆಲೆಯಲ್ಲಿಯೂ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಇದು ರೂ.10 ಲಕ್ಷದಿಂದ ರೂ.12 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ.

Best 3 Alternative Cars for Maruti Suzuki XL6 Mpv Bolero Rumion Triber

ಈ ಎಸ್‌ಯುವಿ 1.5-ಲೀ. ಡೀಸೆಲ್ ಎಂಜಿನ್ ಪಡೆದಿದ್ದು, 17.29 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದು 7 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚಾರಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಕ್ರೂಸ್ ಕಂಟ್ರೋಲ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ ಡುಯಲ್-ಫ್ರಂಟ್ ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಟೊಯೊಟಾ ರೂಮಿಯನ್ (Toyota Rumion): ಈ ಎಂಪಿವಿಯು 'ಮಾರುತಿ ಸುಜುಕಿ ಎಕ್ಸ್ಎಲ್6' ಕಾರಿಗೆ ಉತ್ತಮವಾದ ಬದಲಿ ಆಯ್ಕೆಯಾಗಲಿದ್ದು, ಅತಿ ಕಡಿಮೆ ಬೆಲೆಯಲ್ಲಿಯೂ ಸಿಗುತ್ತದೆ. ಹೀಗಾಗಿ ಮಧ್ಯಮ ವರ್ಗದ ಗ್ರಾಹಕರು ಸಹ ಸುಲಭವಾಗಿ ಖರೀದಿ ಮಾಡಬಹುದು. ಇದು ರೂ.12 ಲಕ್ಷದಿಂದ ರೂ.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ.

Best 3 Alternative Cars for Maruti Suzuki XL6 Mpv Bolero Rumion Triber

ನೂತನ ರೂಮಿಯನ್ ಎಂಪಿವಿ 1.5-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 20.11 ರಿಂದ 26.11 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. 7 ಆಸನಗಳನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಎಸಿ, ಕ್ರೂಸ್ ಕಂಟ್ರೋಲ್, ಪುಶ್-ಬಟನ್ ಎಂಜಿನ್ ಸ್ಟಾರ್ಟ್/ ಸ್ಟಾಪ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 4-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ರೆನಾಲ್ಟ್ ಟ್ರೈಬರ್ (Renault Triber): ಇದು 'ಮಾರುತಿ ಸುಜುಕಿ ಎಕ್ಸ್ಎಲ್6' ಎಂಪಿವಿಗೆ ಪರ್ಯಾಯ ಆಯ್ಕೆಯಾಗಲಿದ್ದು, ಅತ್ಯಂತ ಕಡಿಮೆ ಬೆಲೆಯಲ್ಲಿ ದೇಶೀಯ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಈ ಕಾರು ಕನಿಷ್ಠ ರೂ.6 ಲಕ್ಷ ಮತ್ತು ಗರಿಷ್ಠ ರೂ.9 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ.

Best 3 Alternative Cars for Maruti Suzuki XL6 Mpv Bolero Rumion Triber

ಈ ಹೊಸ ಎಂಪಿವಿ 1-ಲೀ. ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 18.2 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 7 ಆಸನಗಳಿವೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಚಾರ್ಜರ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 4 ಏರ್‌ಬ್ಯಾಗ್‌ಗಳನ್ನು ಹೊಂದಿದೆ.
Best 3 Alternative Cars for Maruti Suzuki XL6 Mpv Bolero Rumion Triber

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Wednesday, May 28, 2025, 8:32 [IST]
English summary
Best 3 alternative cars for maruti suzuki xl6 mpv bolero rumion triber
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+