Mahindra: 500+ ಕಿ.ಮೀ ಓಡುತ್ತೆ! 7-ಸೀಟರ್.. ಹೊಸ ಮಹೀಂದ್ರಾ XEV 9Sಗೆ 3 ಬದಲಿ ಕಾರುಗಳು, ಬೆಲೆ ಎಷ್ಟು, ವಿಶೇಷತೆಗಳೇನು?

ಇತ್ತೀಚೆಗೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್ಇವಿ 9ಎಸ್ (Mahindra XEV 9S) ಕಾರನ್ನು ಬಿಡುಗಡೆಗೊಳಿಸಲಾಯಿತು. ಇದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. ರೂ.19.95 ರಿಂದ ರೂ.29.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಡಸರ್ಟ್ ಮಿಸ್ಟ್, ಎವರೆಸ್ಟ್ ವೈಟ್, ಮಿಡ್‌ನೈಟ್ ಬ್ಲ್ಯಾಕ್, ನೆಬ್ಯುಲಾ ಬ್ಲೂ, ರೂಬಿ ವೆಲ್ವೆಟ್ ಹಾಗೂ ಸ್ಟೆಲ್ತ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 4,737 ಮಿ.ಮೀ ಉದ್ದ, 1,900 ಮಿ.ಮೀ ಅಗಲ ಹಾಗೂ 1,747 ಮಿ.ಮೀ ಎತ್ತರವಿದೆ. ಜೊತೆಗೆ 201 ಮೀ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,762 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಕಾರು 7 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್), 70 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 400 ರಿಂದ 550 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡಲಿದೆ ಎಂದು ಅಂದಾಜಿಸಲಾಗಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್, ಕೀಲೆಸ್ ಎಂಟ್ರಿ ಹಾಗೂ ರೇರ್ ಎಸಿ ವೆಂಟ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best 3 Alternative Cars For New Mahindra XEV 9S BYD eMAX 7 Kia Carens Clavis EV Tata Harrier EV

ನೀವು ಇದೇ 'ಮಹೀಂದ್ರಾ ಎಕ್ಸ್ಇವಿ 9ಎಸ್'ಗೆ ಪರ್ಯಾಯವಾಗಿ ಈ 3 ಕಾರುಗಳಾದ ಬಿವೈಡಿ ಇಮ್ಯಾಕ್ಸ್7, ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ ಹಾಗೂ ಟಾಟಾ ಹ್ಯಾರಿಯರ್ ಇವಿಗಳನ್ನು ಖರೀದಿ ಮಾಡಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಬಿವೈಡಿ ಇಮ್ಯಾಕ್ಸ್7 (BYD eMAX 7):

ಇದು ಜನಪ್ರಿಯ ಎಂಪಿವಿಯಾಗಿದೆ. 'ಮಹೀಂದ್ರಾ ಎಕ್ಸ್ಇವಿ 9ಎಸ್'ಗೆ ಬದಲಿ ಕಾರಾಗಿಯೂ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.26.90 ಲಕ್ಷದಿಂದ ರೂ.29.90 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಕ್ರಿಸ್ಟಲ್ ವೈಟ್, ಕ್ವಾರ್ಟ್ಜ್ ಬ್ಲೂ, ಕಾಸ್ಮೊಸ್ ಬ್ಲ್ಯಾಕ್ ಮತ್ತು ಹಾರ್ಬರ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 170 ಮೀ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,800 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

Best 3 Alternative Cars For New Mahindra XEV 9S BYD eMAX 7 Kia Carens Clavis EV Tata Harrier EV

ನೂತನ 'ಇಮ್ಯಾಕ್ಸ್7' ಕಾರು 6/ 7 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 55.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 71.8 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 420 ರಿಂದ 530 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 12.8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಬ್ಲೂಟೂತ್ ಕನೆಕ್ಟಿವಿಟಿ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ (Kia Carens Clavis EV):

ಈ ಕಾರನ್ನು 'ಮಹೀಂದ್ರಾ ಎಕ್ಸ್ಇವಿ 9ಎಸ್'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದಾಗಿದೆ. ರೂ.17.99 ಲಕ್ಷದಿಂದ ರೂ.24.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಗ್ಲೇಸಿಯರ್ ವೈಟ್ ಪರ್ಲ್, ಅರೋರಾ ಬ್ಲ್ಯಾಕ್ ಪರ್ಲ್, ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ ಮತ್ತು ಐವರಿ ಸಿಲ್ವರ್ ಮ್ಯಾಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 200 ಮೀ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,780 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Best 3 Alternative Cars For New Mahindra XEV 9S BYD eMAX 7 Kia Carens Clavis EV Tata Harrier EV

ಹೊಸ 'ಕ್ಯಾರೆನ್ಸ್ ಕ್ಲಾವಿಸ್ ಇವಿ' 7 ಆಸನಗಳನ್ನು ಒಳಗೊಂಡಿದೆ. 42 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 51.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 404 ರಿಂದ 490 ಕಿ.ಮೀವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್ ಹಾಗೂ ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಟಾಟಾ ಹ್ಯಾರಿಯರ್ ಇವಿ (Tata Harrier EV):

ಇದು ಪ್ರಖ್ಯಾತ ಎಸ್‌ಯುವಿಯಾಗಿದೆ. 'ಮಹೀಂದ್ರಾ ಎಕ್ಸ್ಇವಿ 9ಎಸ್'ಗೆ ಬದಲಾಗಿ ಮನೆಗೆ ತರಬಹುದು. ರೂ.21.49 ಲಕ್ಷದಿಂದ ರೂ.30.23 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಸಾಕಷ್ಟು ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ ಮತ್ತು ಪ್ಯೂರ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,741 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

Best 3 Alternative Cars For New Mahindra XEV 9S BYD eMAX 7 Kia Carens Clavis EV Tata Harrier EV

ನೂತನ 'ಹ್ಯಾರಿಯರ್ ಇವಿ' 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 65 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 538 ರಿಂದ 627 ಕಿ.ಮೀವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 14.5 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ ಪನೊರೊಮಿಕ್ ಸನ್‌ರೂಫ್ ಒಳಗೊಂಡಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

More from DriveSpark

Article Published On: Monday, December 1, 2025, 11:32 [IST]
English summary
Best 3 alternative cars for new mahindra xev 9s byd emax 7 kia carens clavis ev tata harrier ev
Read more on mahindra india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+