28.65 Km ಮೈಲೇಜ್.. 5-ಸೀಟರ್, ಹೊಸ ಮಾರುತಿ ವಿಕ್ಟೋರಿಸ್‌ಗೆ 3 ಪರ್ಯಾಯ ಕಾರುಗಳಿವು.. ಬೆಲೆ ಎಷ್ಟು, ವಿಶೇಷತೆಗಳೇನು?
ನಿನ್ನೆಯಷ್ಟೇ ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಕಾರನ್ನು ಪರಿಚಯಿಸಲಾಗಿದೆ. ಇದೊಂದು ಕಾಂಪ್ಯಾಕ್ಟ್ ಎಸ್‌ಯುವಿಯಾಗಿದೆ. ರೂ.12 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ನೀರಿಕ್ಷೆಯಿದೆ. ಹೈಬ್ರಿಡ್, ಪೆಟ್ರೋಲ್ ಹಾಗೂ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 28.65 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 10.1-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾ ಪಡೆದಿದೆ. ನೀವು ಇದೇ 'ವಿಕ್ಟೋರಿಸ್'ಗೆ ಬದಲಾಗಿ ಈ 3 ಕಾರುಗಳನ್ನು ಖರೀದಿ ಮಾಡಬಹುದು. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಹ್ಯುಂಡೈ ಕ್ರೆಟಾ (Hyundai Creta):
ಇದು ಜನಪ್ರಿಯ ಎಸ್‌ಯುವಿಯಾಗಿದ್ದು, ಮಾರುತಿ ಸುಜುಕಿ ವಿಕ್ಟೋರಿಸ್‌ಗೆ ಅತ್ಯುತ್ತಮವಾದ ಪರ್ಯಾಯ ಆಯ್ಕೆಯಾಗಲಿದೆ. ರೂ.11.11 ಲಕ್ಷದಿಂದ ರೂ.20.92 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸ ಹೊಂದಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲಾಕ್ ಮತ್ತು ಟೈಟಾನ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 21 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು.
ನೂತನ ಕ್ರೆಟಾ ಎಸ್‌ಯುವಿಯ ಅತ್ಯುತ್ತಮವಾದ ಕ್ಯಾಬಿನ್‌ನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಮತ್ತು ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಯಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಹಿಲ್ ಸ್ಟಾರ್ಟ್ ಅಸಿಸ್ಟ್‌ಗಳನ್ನು ಪಡೆದಿದೆ.

ಹೋಂಡಾ ಎಲಿವೇಟ್ (Honda Elevate):
ಇದನ್ನು ಕೂಡ ಮಾರುತಿ ಸುಜುಕಿ ವಿಕ್ಟೋರಿಸ್‌ಗೆ ಬದಲಾಗಿ ಖರೀದಿ ಮಾಡಬಹುದು. ಅದಕ್ಕೆ ತಕ್ಕಂತೆ ರೂ.11.91 ಲಕ್ಷದಿಂದ ರೂ.16.73 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಪ್ಲಾಟಿನಂ ವೈಟ್ ಪರ್ಲ್, ಗೋಲ್ಡನ್ ಬ್ರೌನ್ ಮೆಟಾಲಿಕ್, ಅಬ್ಸಿಡಿಯನ್ ಬ್ಲೂ ಪರ್ಲ್, ಮೆಟಿಯೊರಾಯ್ಡ್ ಗ್ರೇ ಮೆಟಾಲಿಕ್, ರೇಡಿಯಂಟ್ ರೆಡ್ ಮೆಟಾಲಿಕ್ ಹಾಗೂ ಲೂನಾರ್ ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.
ಈ ಕಾರು 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 15 ರಿಂದ 17 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಟ್ರಾಕ್ಷನ್ ಕಂಟ್ರೋಲ್‌ನ್ನು ತನ್ನದಾಗಿಸಿಕೊಂಡಿದೆ.

ಟಾಟಾ ನೆಕ್ಸಾನ್ (Tata Nexon):
ಇದು ವಿಶ್ವಾಸಾರ್ಹ ಎಸ್‌ಯುವಿಯಾಗಿ ಹೊರಹೊಮ್ಮಿದ್ದು, ಮಾರುತಿ ಸುಜುಕಿ ವಿಕ್ಟೋರಿಸ್‌ಗೆ ಪರ್ಯಾಯವಾಗಬಲ್ಲದು. ರೂ.8 ಲಕ್ಷದಿಂದ ರೂ.15.60 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಉತ್ತಮವಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಓಷನ್ ಬ್ಲೂ, ಪ್ಯೂರ್ ಗ್ರೇ, ಪ್ಯೂರ್ ವೈಟ್ ಮತ್ತು ಗ್ರಾಸ್‌ಲ್ಯಾಂಡ್ ಬೀಜ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ಈ ನೆಕ್ಸಾನ್ ಕಾರು ಬಲಿಷ್ಠವಾದ 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 17 ರಿಂದ 24 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications