Tata: 11.49 ಲಕ್ಷ.. 5-ಸೀಟರ್, ಹೊಸ ಟಾಟಾ ಸಿಯೆರಾಗೆ 3 ಬದಲಿ ಕಾರುಗಳಿವು.. ಬೆಲೆ ಎಷ್ಟು, ವಿಶೇಷತೆಗಳೇನು?

ಇತ್ತೀಚೆಗೆ ನೂತನ ಟಾಟಾ ಸಿಯೆರಾ (Tata Sierra) ಎಸ್‌ಯುವಿಯನ್ನು ಮಾರಾಟಕ್ಕೆ ತರಲಾಗಿದೆ. ಇದು ರೂ.11.49 ಲಕ್ಷ (ಎಕ್ಸ್-ಶೋರೂಂ) ಪರಿಚಯಾತ್ಮಕ ಬೆಲೆಯಲ್ಲಿ ಬಿಡುಗಡೆಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಅಂಡಮಾನ್ ಅಡ್ವೆಂಚರ್ (ಯೆಲ್ಲೋ), ಬೆಂಗಾಲ್ ರೂಜ್ (ರೆಡ್), ಕೂರ್ಗ್ ಕ್ಲೌಡ್ಸ್ (ಸಿಲ್ವರ್), ಮುನ್ನಾರ್ ಮಿಸ್ಟ್ (ಗ್ರೀನ್), ಮಿಂಟಲ್ ಗ್ರೇ ಹಾಗೂ ಪ್ರಿಸ್ಟೀನ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2730 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಈ ಎಸ್‌ಯುವಿಯು 5-ಆಸನಗಳನ್ನು ಒಳಗೊಂಡಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. ಟ್ರಿಪಲ್ ಸ್ಕ್ರೀನ್ ಸೆಟಪ್, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

Best 3 Alternative Cars For New Tata Sierra Suv Creta Elevate And Scorpio Classic

ನೀವು ಇದೇ 'ಟಾಟಾ ಸಿಯೆರಾ'ಗೆ ಪರ್ಯಾಯವಾಗಿ ಈ 3 ಜನಪ್ರಿಯ ಕಾರುಗಳಾದ ಹ್ಯುಂಡೈ ಕ್ರೆಟಾ, ಹೋಂಡಾ ಎಲಿವೇಟ್ ಹಾಗೂ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್‌ಗಳನ್ನು ಖರೀದಿ ಮಾಡಬಹುದು. ಬನ್ನಿ, ಈ ಎಸ್‌ಯುವಿಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.

ಹ್ಯುಂಡೈ ಕ್ರೆಟಾ (Hyundai Creta):

ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯಲಿದ್ದು, 'ಹ್ಯುಂಡೈ ಕ್ರೆಟಾ'ಗೆ ಬದಲಿ ಕಾರಾಗಲಿದೆ. ಅದಕ್ಕೆ ತಕ್ಕಂತೆ ರೂ.1.11 ಲಕ್ಷದಿಂದ ರೂ.20.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್, ಟೈಟಾನ್ ಗ್ರೇ, ಫಿಯರಿ ರೆಡ್, ರೇಂಜರ್ ಖಾಕಿ ಹಾಗೂ ರೋಬಸ್ಟ್ ಎಮರಾಲ್ಡ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

Best 3 Alternative Cars For New Tata Sierra Suv Creta Elevate And Scorpio Classic

ನೂತನ 'ಹ್ಯುಂಡೈ ಕ್ರೆಟಾ' ಎಸ್‌ಯುವಿಯು 5-ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ & 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. ಡುಯಲ್ ಡಿಸ್‌ಪ್ಲೇ, ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸಿಸ್ಟಮ್‌ ಮತ್ತು ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಹೋಂಡಾ ಎಲಿವೇಟ್ (Honda Elevate):

ಈ ಕಾರನ್ನು 'ಟಾಟಾ ಸಿಯೆರಾ'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ರೂ.11 ಲಕ್ಷದಿಂದ ರೂ.16.67 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಗೋಲ್ಡನ್ ಬ್ರೌನ್ ಮೆಟಾಲಿಕ್, ಫೀನಿಕ್ಸ್ ಆರೆಂಜ್ ಪರ್ಲ್, ಅಬ್ಸಿಡಿಯನ್ ಬ್ಲೂ ಪರ್ಲ್, ಮೆಟಿಯೊರಾಯ್ಡ್ ಗ್ರೇ ಮೆಟಾಲಿಕ್, ರೇಡಿಯಂಟ್ ರೆಡ್ ಮೆಟಾಲಿಕ್, ಲೂನಾರ್ ಸಿಲ್ವರ್ ಮೆಟಾಲಿಕ್ ಹಾಗೂ ಪ್ಲಾಟಿನಂ ವೈಟ್ ಪರ್ಲ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

Best 3 Alternative Cars For New Tata Sierra Suv Creta Elevate And Scorpio Classic

ಹೊಸ 'ಹೋಂಡಾ ಎಲಿವೇಟ್' 5-ಆಸನಗಳನ್ನು ಒಳಗೊಂಡಿದೆ. 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ಟ್ರಾಕ್ಷನ್ ಕಂಟ್ರೋಲ್‌ನ್ನು ಹೊಂದಿದೆ.

ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್ (Mahindra Scorpio Classic):

ಇದನ್ನು ಕೂಡ 'ಟಾಟಾ ಸಿಯೆರಾ'ಗೆ ಬದಲಾಗಿ ಮನೆಗೆ ತರಬಹುದಾಗಿದೆ. ರೂ.12.97 ಲಕ್ಷದಿಂದ ರೂ.16.70 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ನೋಡಲು ಕಣ್ಮನ ಸೆಳೆಯುವ ವಿನ್ಯಾಸವನ್ನು ಹೊಂದಿದೆ. ಎವರೆಸ್ಟ್ ವೈಟ್, ಮೋಲ್ಟನ್ ರೆಡ್ ರೇಜ್, ಗ್ಯಾಲಕ್ಸಿ ಗ್ರೇ, ಸ್ಟೆಲ್ತ್ ಬ್ಲ್ಯಾಕ್ ಹಾಗೂ ಡೈಮಂಡ್ ವೈಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

Best 3 Alternative Cars For New Tata Sierra Suv Creta Elevate And Scorpio Classic

ನೂತನ 'ಸ್ಕಾರ್ಪಿಯೋ ಕ್ಲಾಸಿಕ್' 7/ 9 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಕ್ರೂಸ್ ಕಂಟ್ರೋಲ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 2 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

More from DriveSpark

Article Published On: Friday, November 28, 2025, 8:30 [IST]
English summary
Best 3 alternative cars for new tata sierra suv creta elevate and scorpio classic
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+