5-ಸೀಟರ್.. 6 ಲಕ್ಷದ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿಗೆ 3 ಬದಲಿ ಕಾರುಗಳಿವು, ಬೆಲೆಯೂ ಕಡಿಮೆ ಗೊತ್ತಾ!

ನಿಸ್ಸಾನ್ ಮ್ಯಾಗ್ನೈಟ್ (Nissan Magnite) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ದೇಶೀಯ ಮಾರುಕಟ್ಟೆಯಲ್ಲಿ ಈ ಕಾರು, ಕನಿಷ್ಠ ರೂ.6 ಲಕ್ಷ ಮತ್ತು ಗರಿಷ್ಠ ರೂ.12 ಲಕ್ಷವರೆಗೆ ಎಕ್ಸ್-ಶೋರೂಂ ಬೆಲೆಯನ್ನು ಹೊಂದಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 17 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ. ನಾವಿಲ್ಲಿ ಈ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿಗೆ ಬದಲಿ ಆಯ್ಕೆಯಾಗಬಲ್ಲ 3 ಪ್ರಮುಖ ಕಾರುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.

ರೆನಾಲ್ಟ್ ಕಿಗರ್ (Renault Kiger): ಇದು ಸಹ ಜನಪ್ರಿಯ ಎಸ್‌ಯುವಿಯಾಗಿದ್ದು, ನಿಸ್ಸಾನ್ ಮ್ಯಾಗ್ನೈಟ್ ಕಾರಿಗೆ ಪರ್ಯಾಯ ಆಯ್ಕೆಯಾಗಲಿದೆ. ಈ ಕಾರು ಬಜೆಟ್ ಬೆಲೆಯಲ್ಲಿ ಖರೀದಿಗೆ ದೊರೆಯಲಿದ್ದು, ಮಧ್ಯಮ ವರ್ಗದ ಜನರು ಸುಲಭವಾಗಿ ಮನೆಗೆ ತರಬಹುದು. ನೂತನ ಕಿಗರ್ ಎಸ್‌ಯುವಿ ರೂ.6 ಲಕ್ಷದಿಂದ ರೂ.11 ಲಕ್ಷವರೆಗೆ ಎಕ್ಸ್-ಶೋರೂಂ ದರವನ್ನು ಹೊಂದಿದೆ. ಜೊತೆಗೆ ಆಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ.

Best 3 Alternative Cars For Nissan Magnite Suv Kiger Kylaq And Fronx

ಈ ರೆನಾಲ್ಟ್ ಕಿಗರ್ ಕಾರು ಬೆಲೆಗೆ ತಕ್ಕಂತೆ ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಪಡೆದಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 18.24 ರಿಂದ 20.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಆಸನಗಳಿವೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 4-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಸ್ಕೋಡಾ ಕೈಲಾಕ್ (Skoda Kylaq): ಈ ಎಸ್‌ಯುವಿಯು ಸಾಕಷ್ಟು ಹೊಸತನಗಳಿಗೆ ಸಾಕ್ಷಿಯಾಗಿದೆ. ಅದಕ್ಕೆ ಅನುಗುಣವಾಗಿ ಬೆಲೆಯನ್ನು ಪಡೆದಿದ್ದು, ಇದನ್ನು ಶ್ರೀಸಾಮಾನ್ಯರ ಐರಾವತ ಎಂದು ಕರೆದರೂ ತಪ್ಪಾಗುವುದಿಲ್ಲ. ಹೊಚ್ಚ ಹೊಸ ಸ್ಕೋಡಾ ಕೈಲಾಕ್ ಕಾರು, ಕನಿಷ್ಠ ರೂ.8 ಲಕ್ಷದಿಂದ ಗರಿಷ್ಠ ರೂ.14 ಲಕ್ಷವರೆಗೆ ಎಕ್ಸ್-ಶೋರೂಂ ಬೆಲೆಯನ್ನು ಪಡೆದಿದೆ.

Best 3 Alternative Cars For Nissan Magnite Suv Kiger Kylaq And Fronx

ನೂತನ ಸ್ಕೋಡಾ ಕೈಲಾಕ್ ಕಾರು, ಬಲಿಷ್ಠವಾದ ಪವರ್‌ಟ್ರೇನ್‌ನ್ನೇ ಒಳಗೊಂಡಿದೆ. ಇದು 1.0-ಲೀ. ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಪಡೆದಿದೆ. 15 ರಿಂದ 18 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx): ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದ್ದು, ಅತಿಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುವುದರೊಂದಿಗೆ ಎಲ್ಲಡೆ ಮನೆ ಮಾತಾಗಿದೆ. ಈ ಕಾರನ್ನು ಗ್ರಾಹಕರು ಕೂಡ ನಾಮುಂದು - ತಾಮುಂದು ಎಂಬಂತೆ ಖರೀದಿ ಮಾಡುತ್ತಿದ್ದಾರೆ. ಇದು ರೂ.7.50 ಲಕ್ಷದಿಂದ ರೂ.13 ಲಕ್ಷವರೆಗೆ ಎಕ್ಸ್-ಶೋರೂಂ ದರವನ್ನು ಪಡೆದಿದೆ.

Best 3 Alternative Cars For Nissan Magnite Suv Kiger Kylaq And Fronx

ಈ ಫ್ರಾಂಕ್ಸ್ ಎಸ್‌ಯುವಿ ಕೂಡ ಹೆಚ್ಚು ಶಕ್ತಿಯುತವಾದ 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ ಒಟ್ಟು 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರಿಸಬಹುದು. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

Best 3 Alternative Cars For Nissan Magnite Suv Kiger Kylaq And Fronx

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Tuesday, April 29, 2025, 10:36 [IST]
English summary
Best 3 alternative cars for nissan magnite suv kiger kylaq and fronx
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+