20 Km ಮೈಲೇಜ್.. 7-ಸೀಟರ್, 6.29 ಲಕ್ಷ.. ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್‌ಗೆ ಪರ್ಯಾಯವಾಗಬಲ್ಲ 3 ಕಾರುಗಳಿವು!
ಈಚೆಗೆ 2025ರ ನೂತನ ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್ (Renault Triber Facelift) ಎಂಪಿವಿಯನ್ನು ಮಾರಾಟಕ್ಕೆ ತರಲಾಯಿತು. ಇದು ರೂ.6.29 ಲಕ್ಷದಿಂದ ರೂ.9.16 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 20 ಕಿ.ಮೀ ವರೆಗೆ ಮೈಲೇಜ್ ನೀಡಬಲ್ಲದು. 7-ಆಸನಗಳನ್ನು ಹೊಂದಿದೆ. 8-ಇಂಚಿನ ಪ್ಲೋಟಿಂಗ್ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 7-ಇಂಚಿನ ಸೆಮಿ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ 6-ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ನೀವು ಈ 'ಟ್ರೈಬರ್ ಫೇಸ್‌ಲಿಫ್ಟ್'ಗೆ ಬದಲಾಗಿ ಈ 3 ಕಾರುಗಳನ್ನು ಖರೀದಿ ಮಾಡಬಹುದು. ಬನ್ನಿ, ಅವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಒಂದಷ್ಟು ವಿವರಗಳನ್ನು ತಿಳಿಯೋಣ.
ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis):
ಇದೊಂದು ಎಂಪಿವಿಯಾಗಿದ್ದು, ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್‌ಗೆ ಪರ್ಯಾಯ ಆಯ್ಕೆಯಾಗಲಿದೆ. ರೂ.11.50 ಲಕ್ಷದಿಂದ ರೂ.21.50 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಪ್ಯೂಟರ್ ಆಲಿವ್, ಇಂಪೀರಿಯಲ್ ಬ್ಲೂ, ಗ್ಲೇಸಿಯರ್ ವೈಟ್ ಪರ್ಲ್, ಗ್ರಾವಿಟಿ ಗ್ರೇ, ಸ್ಪಾರ್ಕ್ಲಿಂಗ್ ಸಿಲ್ವರ್ ಹಾಗೂ ಅರೋರಾ ಬ್ಲ್ಯಾಕ್ ಪರ್ಲ್ ಎಂಬ ಬಣ್ಣಗಳನ್ನು ಪಡೆದಿದೆ.

ಈ ಕಾರು 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 15 ರಿಂದ 19 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 6 & 7 ಆಸನಗಳನ್ನು ಪಡೆದಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಾಗುವಂತೆ 216 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ.
ಹೊಸ 'ಕ್ಯಾರೆನ್ಸ್ ಕ್ಲಾವಿಸ್' ಎಂಪಿವಿ 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಫ್ಲಾಟ್-ಬಾಟಮ್ ಸ್ಟೀರಿಂಗ್ ವೀಲ್, ಪನೋರಮಿಕ್ ಸನ್‌ರೂಫ್, 64-ಕಲರ್ ಆಂಬಿಯೆಂಟ್ ಲೈಟಿಂಗ್ ಹಾಗೂ 9-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಮಾರುತಿ ಸುಜುಕಿ ಎರ್ಟಿಗಾ (Maruti Suzuki Ertiga):
ಈ ಎಂಪಿವಿಯು ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್‌ಗೆ ಬದಲಿ ಕಾರಗಲಿದ್ದು, ರೂ.9.11 ಲಕ್ಷದಿಂದ ರೂ.13.40 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಪರ್ಲ್ ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಮೆಟಾಲಿಕ್ ಮ್ಯಾಗ್ಮಾ ಗ್ರೇ, ಪರ್ಲ್ ಮೆಟಾಲಿಕ್ ಆಬರ್ನ್ ರೆಡ್ ಹಾಗೂ ಪರ್ಲ್ ಮೆಟಾಲಿಕ್ ಆಕ್ಸ್‌ಫರ್ಡ್ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಇದು 7 ಆಸನಗಳನ್ನು ಒಳಗೊಂಡಿದೆ. 209 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 1.5-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 20 ರಿಂದ 26 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಂಜಿನ್ ಸ್ಟಾರ್ಟ್/ಸ್ಟಾಪ್ ಬಟನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ 6-ಏರ್‌ಬ್ಯಾಗ್‌ನಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಾರುತಿ ಸುಜುಕಿ ಇಕೋ (Maruti Suzuki Eeco):
ಇದೊಂದು ವ್ಯಾನ್ ಆಗಿದ್ದು, ರೆನಾಲ್ಟ್ ಟ್ರೈಬರ್ ಫೇಸ್‌ಲಿಫ್ಟ್‌ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ರೂ.5.70 ಲಕ್ಷದಿಂದ ರೂ.6.96 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಧುನಿಕವಾಗಿ ವಿನ್ಯಾಸವನ್ನು ಹೊಂದಿದೆ. ಮೆಟಾಲಿಕ್ ಪ್ಯಾಶನ್ ರೆಡ್, ಸೆರುಲಿಯನ್ ಬ್ಲ್ಯೂ, ಸಾಲಿಡ್ ವೈಟ್ & ಪರ್ಲ್ ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೆ ಸಿಗುತ್ತದೆ.

ಈ ಕಾರು ದರಕ್ಕೆ ತಕ್ಕಂತೆ 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 26 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 5/ 6 ಆಸನಗಳನ್ನು ಪಡೆದಿದೆ. ಸೆಮಿ ಡಿಜಿಟಲ್ ಸ್ಪೀಡೋಮೀಟರ್, ಮ್ಯಾನುವಲ್ ಎಸಿ, ಯುಎಸ್‌ಬಿ ಕನೆಕ್ಟಿವಿಟಿ, ರೇರ್ ಪಾರ್ಕಿಂಗ್ ಸೆನ್ಸಾರ್‌ಗಳು, 6-ಏರ್‌ಬ್ಯಾಗ್‌ಗಳು ಹಾಗೂ ಫ್ರಂಟ್ ಸೀಟ್‌ಬೆಲ್ಟ್ ರಿಮೈಂಡರ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ.


Click it and Unblock the Notifications