TATA: ಹೊಸ ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ ಹ್ಯಾಚ್‌ಬ್ಯಾಕ್‌ಗೆ 3 ಬದಲಿ ಕಾರುಗಳಿವು.. ಅಷ್ಟೇ ಚೆನ್ನಾಗಿವೆ!

ಬಹುನಿರೀಕ್ಷಿತ 2025ರ ನೂತನ ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ (Tata Altroz Facelift) ಹ್ಯಾಚ್‌ಬ್ಯಾಕ್‌ನ್ನು ಈಚೆಗೆ ಅದ್ದೂರಿಯಾಗಿ ಮಾರಾಟಕ್ಕೆ ತರಲಾಯಿತು. ಈ ಕಾರು ರೂ.6.89 ಲಕ್ಷ ಆರಂಭಿಕ ದರವನ್ನು (ಎಕ್ಸ್-ಶೋರೂಂ) ಪಡೆದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀ. ಸಿಎನ್‌ಜಿ ಹಾಗೂ 1.5-ಲೀ. ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. ಇದರಲ್ಲಿ 5 ಆಸನಗಳಿವೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ. ನೀವು 'ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್'ಗೆ ಪರ್ಯಾಯವಾಗಿ ಈ 3 ಕಾರುಗಳನ್ನು ಖರೀದಿ ಮಾಡಬಹುದು. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮಾರುತಿ ಸುಜುಕಿ ಬಲೆನೊ (Maruti Suzuki Baleno): ಇದು ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಆಗಿದ್ದು, 'ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್'ಗೆ ಅತ್ಯುತ್ತಮವಾದ ಬದಲಿ ಆಯ್ಕೆಯಾಗಲಿದೆ. ಬಜೆಟ್ ಬೆಲೆಯಲ್ಲಿಯೂ ಖರೀದಿಗೆ ಲಭ್ಯವಿದ್ದು, ಕನಿಷ್ಠ ರೂ.6.70 ಲಕ್ಷ ಹಾಗೂ ಗರಿಷ್ಠ ರೂ.10 ಲಕ್ಷ (ಎಕ್ಸ್-ಶೋರೂಂ - ಬೆಂಗಳೂರು) ದರವನ್ನು ಪಡೆದಿದೆ.

Best 3 Alternative Cars For Tata Altroz Facelift Baleno Glanza And I20 Details

ಈ ಕಾರು 1.2-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿಯೂ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚರಿಸಬಹುದು. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಕೀಲೆಸ್ ಎಂಟ್ರಿ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಟೊಯೊಟಾ ಗ್ಲಾನ್ಜಾ (Toyota Glanza): ಈ ಹ್ಯಾಚ್‌ಬ್ಯಾಕ್‌ ಕೂಡ 'ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್'ಗೆ ಪರ್ಯಾಯ ಕಾರಾಗಿದೆ. ಅತಿ ಕಡಿಮೆ ಬೆಲೆಯಲ್ಲಿಯೂ ಖರೀದಿಗೆ ದೊರೆಯಲಿದ್ದು, ಮಧ್ಯಮ ವರ್ಗದ ಗ್ರಾಹಕರು ಸುಲಭವಾಗಿ ಕೊಳ್ಳಬಹುದು. ಇದು ರೂ.7 ಲಕ್ಷದಿಂದ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ.

Best 3 Alternative Cars For Tata Altroz Facelift Baleno Glanza And I20 Details

ಹೊಸ ಗ್ಲಾನ್ಜಾ ಕಾರು 1.2-ಲೀ. ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 22 ರಿಂದ 30 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಆಸನಗಳಿವೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಹ್ಯುಂಡೈ ಐ20 (Hyundai i20): ಇದು ಪ್ರಮುಖ ಹ್ಯಾಚ್‌ಬ್ಯಾಕ್‌ ಆಗಿದ್ದು, 'ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್' ಕಾರಿಗೆ ಉತ್ತಮವಾದ ಬದಲಿ ಆಯ್ಕೆಯಾಗಲಿದೆ. ಈ ಕಾರು ಕನಿಷ್ಠ ರೂ.7 ಲಕ್ಷದಿಂದ ರೂ.11 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಜೊತೆಗೆ 5 ಆಸನಗಳನ್ನು ಹೊಂದಿದೆ.

Best 3 Alternative Cars For Tata Altroz Facelift Baleno Glanza And I20 Details

ಈ ಕಾರು 1.2-ಲೀ. ಪೆಟ್ರೋಲ್ ಎಂಜಿನ್ ಪಡೆದಿದ್ದು, 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಪುಶ್ ಬಟನ್ ಸ್ಟಾರ್ಟ್‌, ಸ್ಮಾರ್ಟ್ ಕೀ ಮತ್ತು ಎಲೆಕ್ಟ್ರಿಕ್ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 3 Alternative Cars For Tata Altroz Facelift Baleno Glanza And I20 Details

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, May 29, 2025, 8:30 [IST]
English summary
Best 3 alternative cars for tata altroz facelift baleno glanza and i20 details
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+