Tata: 9.66 ಲಕ್ಷ.. 5-ಸೀಟರ್, ಶಕ್ತಿಶಾಲಿ ಟಾಟಾ ಕರ್ವ್‌ಗೆ 3 ಬದಲಿ ಕಾರುಗಳಿವು.. ಬೆಲೆ ಎಷ್ಟು, ವಿಶೇಷತೆಗೇಳೆನು?

ಟಾಟಾ ಕರ್ವ್ (Tata Curvv) ಜನಪ್ರಿಯ ಕೂಪೆ ಎಸ್‌ಯುವಿಯಾಗಿದೆ. ಇದು ರೂ.9.66 ಲಕ್ಷದಿಂದ ರೂ.18.85 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಡೇಟೋನಾ ಗ್ರೇ, ಫ್ಲೇಮ್ ರೆಡ್, ಒಪೇರಾ ಬ್ಲ್ಯೂ, ಪ್ರೈಸ್ಟೈನ್ ವೈಟ್ ಹಾಗೂ ಪ್ಯೂರ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 208 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2560 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು.

ಈ ಕಾರು 1.2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 13 ರಿಂದ 17 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

Best 3 Alternative Cars For Tata Curvv Suv Basalt Creta And Grand Vitara

ನೀವು ಇದೇ 'ಟಾಟಾ ಕರ್ವ್'ಗೆ ಪರ್ಯಾಯವಾಗಿ ಈ 3 ಜನಪ್ರಿಯ ಎಸ್‌ಯುವಿಗಳಾದ ಸಿಟ್ರನ್ ಬಸಾಲ್ಟ್, ಹ್ಯುಂಡೈ ಕ್ರೆಟಾ ಹಾಗೂ ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಸಿಟ್ರನ್ ಬಸಾಲ್ಟ್ (Citroen Basalt):

ಇದು ಕೂಪೆ ಎಸ್‌ಯುವಿಯಾಗಿದೆ. 'ಟಾಟಾ ಕರ್ವ್'ಗೆ ಅತ್ಯುತ್ತಮವಾದ ಬದಲಿ ಕಾರಾಗಿದ್ದು, ರೂ.7.95 ಲಕ್ಷದಿಂದ ರೂ.13.11 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೋಡಲು ಕೂಡ ಚೆನ್ನಾಗಿದೆ. ಪೋಲಾರ್ ವೈಟ್, ಸ್ಟೀಲ್ ಗ್ರೇ, ಪ್ಲಾಟಿನಂ ಗ್ರೇ, ಕಾಸ್ಮೊ ಬ್ಲೂ ಮತ್ತು ಗಾರ್ನೆಟ್ ರೆಡ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 207 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,775 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.

Best 3 Alternative Cars For Tata Curvv Suv Basalt Creta And Grand Vitara

ನೂತನ 'ಬಸಾಲ್ಟ್' ಕಾರು 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.2-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 18 ರಿಂದ 19.5 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 10.2-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ನಂತಹ ಹಲವು ವೈಶಿಷ್ಟ್ಯಗಳಿವೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) & ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

ಹ್ಯುಂಡೈ ಕ್ರೆಟಾ (Hyundai Creta):

ಈ ಎಸ್‌ಯುವಿಯನ್ನು 'ಟಾಟಾ ಕರ್ವ್'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.10.73 ಲಕ್ಷದಿಂದ ರೂ.20.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಅಬಿಸ್ ಬ್ಲ್ಯಾಕ್, ಅಟ್ಲಾಸ್ ವೈಟ್, ರೋಬಸ್ಟ್ ಎಮರಾಲ್ಡ್ ಪರ್ಲ್, ಫಿಯರಿ ರೆಡ್, ರೇಂಜರ್ ಖಾಕಿ ಹಾಗೂ ಟೈಟಾನ್ ಗ್ರೇ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,610 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ.

Best 3 Alternative Cars For Tata Curvv Suv Basalt Creta And Grand Vitara

ಹೊಸ 'ಕ್ರೆಟಾ' ಕಾರು 1.5-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 22 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇ, 8-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಹಾಗೂ ಸನ್‌ರೂಫ್ ಒಳಗೊಂಡಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara):

ಇದು ಪ್ರಮುಖ ಎಸ್‌ಯುವಿಯಾಗಿದ್ದು, 'ಟಾಟಾ ಕರ್ವ್'ಗೆ ಬದಲಾಗಿ ಕೊಂಡುಕೊಳ್ಳಬಹುದು. ರೂ.10.77 ಲಕ್ಷದಿಂದ ರೂ.19.72 ಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಸ್ಪ್ಲೆಂಡಿಡ್ ಸಿಲ್ವರ್, ಗ್ರ್ಯಾಂಡಿಯರ್ ಗ್ರೇ ಹಾಗೂ ಆಪುಲೆಂಟ್ ರೆಡ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 210 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಎಂಎಂ ವೀಲ್‌ಬೇಸ್‌ನ್ನು ಪಡೆದಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ.

Best 3 Alternative Cars For Tata Curvv Suv Basalt Creta And Grand Vitara

ನೂತನ ಗ್ರ್ಯಾಂಡ್ ವಿಟಾರಾ ಕಾರು, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್), 1.5-ಲೀಟರ್ ಪೆಟ್ರೋಲ್ ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 19.38 ರಿಂದ 27.97 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ & ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Friday, December 19, 2025, 8:30 [IST]
English summary
Best 3 alternative cars for tata curvv suv basalt creta and grand vitara
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+