Tata Curvv: ಅಗ್ಗದ 'ಟಾಟಾ ಕರ್ವ್'ಗೆ 3 ಪರ್ಯಾಯ ಕಾರುಗಳಿವು.. ಭಾರೀ ವೈಶಿಷ್ಟ್ಯಗಳು, ಬೆಲೆ ಎಷ್ಟು?
ಟಾಟಾ ಕರ್ವ್ (Tata Curvv) ಪ್ರಮುಖ ಕೂಪೆ ಎಸ್‌ಯುವಿ ಹೊರಹೊಮ್ಮಿದೆ. ಇದು ರೂ.10 ಲಕ್ಷದಿಂದ ರೂ.20 ಲಕ್ಷವರೆಗೆ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. ಪೆಟ್ರೋಲ್ & ಡೀಸೆಲ್ ಎಂಜಿನ್‌ನ್ನು ಹೊಂದಿದ್ದು, 11 ರಿಂದ 15 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ಪನೊರೊಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ. ನಾವಿಲ್ಲಿ 'ಕರ್ವ್'ಗೆ ಪರ್ಯಾಯ ಆಯ್ಕೆಯಾಗಬಲ್ಲ ಈ 3 ಜನಪ್ರಿಯ ಕಾರುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತ ಒಂದಷ್ಟು ವಿವರಗಳನ್ನು ತಿಳಿಸಿಕೊಟ್ಟಿದ್ದೇವೆ.
ಕಿಯಾ ಸೆಲ್ಟೋಸ್ (Kia Seltos): ಈ ಎಸ್‌ಯುವಿ ಕೂಡ ಟಾಟಾ ಕರ್ವ್ ಕಾರಿಗೆ ಬದಲಿ ಆಯ್ಕೆಯಾಗಲಿದ್ದು, ಸಾಮಾನ್ಯ ಗ್ರಾಹಕರಿಗೆ ಅತ್ಯಂತ ಕೈಗೆಟುಕುವ ಬೆಲೆಯಲ್ಲಿ ಸಿಗುತ್ತದೆ. ಇದು ರೂ.11.19 ಲಕ್ಷದಿಂದ ರೂ.20.51 ಲಕ್ಷ ಎಕ್ಸ್-ಶೋರೂಂ ದರವನ್ನು ಒಳಗೊಂಡಿದೆ. ಹೊರಭಾಗದಲ್ಲೂ ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಗ್ಲೇಸಿಯರ್ ಪರ್ಲ್ ವೈಟ್, ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ ಮತ್ತು ಸ್ಪಾರ್ಕ್ಲಿಂಗ್ ಸಿಲ್ವರ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೆ ಸಿಗುತ್ತದೆ.

ನೂತನ ಸೆಲ್ಟೋಸ್ ಕಾರು 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಸ್ಕ್ರೀನ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಸ್ಕೋಡಾ ಕುಶಾಕ್ (Skoda Kushaq): ಇದು ಪ್ರಖ್ಯಾತ ಎಸ್‌ಯುವಿಯಾಗಿದೆ. ಅದಕ್ಕೆ ತಕ್ಕಂತೆ ಬಜೆಟ್ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ರೂ.11 ಲಕ್ಷದಿಂದ ರೂ.19 ಲಕ್ಷವರೆಗೆ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಈ ಕಾರಿನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

ಈ ಸ್ಕೋಡಾ ಕುಶಾಕ್ ಕಾರು, 1-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 18.09 ರಿಂದ 19.76 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಸಿಂಗಲ್ ಪೇನ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.
ಸಿಟ್ರನ್ ಬಸಾಲ್ಟ್ (Citroen Basalt): ಈ ಕೂಪೆ ಎಸ್‌ಯುವಿ ಟಾಟಾ ಕರ್ವ್ ಕಾರಿಗೆ ನೇರ ಎದುರಾಳಿಯಾಗಿದೆ. ಇದು ಕನಿಷ್ಠ ರೂ.8 ಲಕ್ಷ ಹಾಗೂ ಗರಿಷ್ಠ ರೂ.14.10 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.2-ಲೀ. ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 18 ರಿಂದ 19.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಸಿಟ್ರನ್ ಬಸಾಲ್ಟ್ ಹೊರಭಾಗದಲ್ಲಿ ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಪೋಲಾರ್ ವೈಟ್, ಸ್ಟೀಲ್ ಗ್ರೇ & ಪ್ಲಾಟಿನಂ ಗ್ರೇ ಒಳಗೊಂಡಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಈ ಕಾರು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ,ಯಂತಹ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications