Tata: 5-ಸೀಟರ್.. 627 Km ರೇಂಜ್.. ಹೊಸ ಟಾಟಾ ಹ್ಯಾರಿಯರ್ ಇವಿಗೆ 3 ಅತ್ಯುತ್ತಮ ಬದಲಿ ಕಾರುಗಳಿವು!

ನೂತನ ಟಾಟಾ ಹ್ಯಾರಿಯರ್ ಇವಿ (Tata Harrier EV) ಮೊನ್ನೆಯಷ್ಟೇ ಬಿಡುಗಡೆಗೊಂಡಿದೆ. ಇದು ರೂ.21.49 ಲಕ್ಷ ಪರಿಚಯಾತ್ಮಕ ಬೆಲೆಯನ್ನು ಹೊಂದಿದೆ. 65 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) & 75 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 627 ಕಿಲೋಮೀಟರ್‌ವರೆಗೂ ರೇಂಜ್ (ಮೈಲೇಜ್) ನೀಡುತ್ತದೆ. ಇದರಲ್ಲಿ 5-ಆಸನಗಳಿವೆ. 14.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳನ್ನು ಹೊಂದಿದೆ. ನೀವು 'ಹ್ಯಾರಿಯರ್ ಇವಿ'ಗೆ ಪರ್ಯಾಯವಾಗಿ ಈ 3 ಪ್ರಮುಖ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿ ಮಾಡಬಹುದು. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric): ಇದು 'ಟಾಟಾ ಹ್ಯಾರಿಯರ್ ಇವಿ'ಗೆ ಉತ್ತಮವಾದ ಬದಲಿ ಆಯ್ಕೆಯಾಗಲಿದೆ. ಈ ಕಾರು ಕನಿಷ್ಠ ರೂ.17.99 ಲಕ್ಷ ಮತ್ತು ಗರಿಷ್ಠ ರೂ.24.38 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿ 5 ಮಂದಿ ಆರಾಮದಾಯಕವಾಗಿ ಸುಲಭವಾಗಿ ಓಡಾಟ ನಡೆಸಬಹುದು.

Best 3 Alternative Cars For Tata Harrier EV Creta Electric BE 6 And Atto 3

ಈ ಎಲೆಕ್ಟ್ರಿಕ್ ಕಾರು ಹೆಚ್ಚು ಶಕ್ತಿಯುತವಾದ 42 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) & 51.4 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 390 ರಿಂದ 473 ಕಿಲೋಮೀಟರ್ ಕ್ರಮಿಸುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಸ್ಕ್ರೀನ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಹೀಂದ್ರಾ ಬಿಇ 6 (Mahindra BE 6): ಈ ಎಲೆಕ್ಟ್ರಿಕ್ ಎಸ್‌ಯುವಿಯು ಹೊಸ 'ಟಾಟಾ ಹ್ಯಾರಿಯರ್ ಇವಿ'ಗೆ ಒಳ್ಳೆಯ ಪರ್ಯಾಯ ಕಾರಾಗಲಿದೆ. ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ರೂಪಾಂತರಗಳಿಗೆ (ವೇರಿಯೆಂಟ್) ಅನುಗುಣವಾಗಿ ರೂ.18.90 ಲಕ್ಷದಿಂದ ರೂ.26.90 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ.

Best 3 Alternative Cars For Tata Harrier EV Creta Electric BE 6 And Atto 3

ನೂತನ 'ಬಿಇ 6' ಕಾರಿನಲ್ಲಿ 5 ಆಸನಗಳಿವೆ. 59 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 79 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 535 ರಿಂದ 682 ಕಿಲೋಮೀಟರ್ ಓಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್‌ & ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಸ್ಕ್ರೀನ್ ಸೆಟಪ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಬಿವೈಡಿ ಅಟ್ಟೊ 3 (BYD Atto 3): ಇದು ಕೂಡ 'ಟಾಟಾ ಹ್ಯಾರಿಯರ್ ಇವಿ'ಗೆ ಅತ್ಯುತ್ತಮ ಬದಲಿ ಆಯ್ಕೆಯಾಗಲಿದೆ. ಕನಿಷ್ಠ ರೂ.24.99 ಲಕ್ಷ ಮತ್ತು ಗರಿಷ್ಠ ರೂ.33.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಇದರಲ್ಲಿಯೂ 5 ಆಸನ ಆಯ್ಕೆ ವ್ಯವಸ್ಥೆಯಿದೆ.

Best 3 Alternative Cars For Tata Harrier EV Creta Electric BE 6 And Atto 3

ಹೊಸ ಅಟ್ಟೊ 3 ಎಲೆಕ್ಟ್ರಿಕ್ ಕಾರು ಬಲಿಷ್ಠವಾದ 49.92 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 60.48 ಕಿಲೋ ವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ ಆಯ್ಕೆಯನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 468 ರಿಂದ 521 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 12.8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ.

Best 3 Alternative Cars For Tata Harrier EV Creta Electric BE 6 And Atto 3

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, June 5, 2025, 8:30 [IST]
English summary
Best 3 alternative cars for tata harrier ev creta electric be 6 and atto 3
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+