6 ಲಕ್ಷದ Tata Punch ಎಸ್‌ಯುವಿಗೆ ಬದಲಿಗೆ ಈ 3 ಕಾರುಗಳನ್ನು ತೆಗೆದುಕೊಳ್ಳಬಹುದು.. ಯಾವುವು, ವಿಶೇಷತೆಗಳೇನು?
ಟಾಟಾ ಪಂಚ್ (Tata Punch) ಪ್ರಖ್ಯಾತ ಮೈಕ್ರೋ ಎಸ್‌ಯುವಿ ಗುರುತಿಸಿಕೊಂಡಿದೆ. ಇದು ರೂ.6.20 ಲಕ್ಷದಿಂದ ರೂ.10.32 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. ಯಾವ ಬೈಕ್‌ಗೂ ಕಮ್ಮಿಯಿಲ್ಲದಂತೆ 18.8 ರಿಂದ 26.99 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5-ಮಂದಿ ಓಡಾಟ ನಡೆಸಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ. ದೇಶೀಯ ಗ್ರಾಹಕರು ನೂತನ 'ಟಾಟಾ ಪಂಚ್' ಎಸ್‌ಯುವಿಗೆ ಪರ್ಯಾಯವಾಗಿ ಈ 3 ಕಾರುಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಹ್ಯುಂಡೈ ಎಕ್ಸ್‌ಟರ್ (Hyundai Exter): ಇದು ಕೂಡ ಜನಪ್ರಿಯ ಮೈಕ್ರೋ ಎಸ್‌ಯುವಿಯಾಗಿದ್ದು, ಟಾಟಾ ಪಂಚ್ ಕಾರಿಗೆ ನೇರ ಎದುರಾಳಿಯಾಗಿದೆ. ಜೊತೆಗೆ ಅತ್ಯಂತ ಕೈಗೆಟುಕುವ ಬೆಲೆಯಲ್ಲಿಯೂ ದೊರೆಯಲಿದ್ದು, ಕನಿಷ್ಠ ರೂ.6.21 ಲಕ್ಷ ಹಾಗೂ ಗರಿಷ್ಠ ರೂ.10.51 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ.

ಈ ಹ್ಯುಂಡೈ ಎಕ್ಸ್‌ಟರ್ ಕಾರು ಶಕ್ತಿಯುತವಾದ ಪವರ್‌ಟ್ರೇನ್ ಆಯ್ಕೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19.2 ರಿಂದ 27.1 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿಯೂ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಕೊಂಡಿದೆ.
ನಿಸ್ಸಾನ್ ಮ್ಯಾಗ್ನೈಟ್ (Nissan Magnite): ಈ ಎಸ್‌ಯುವಿಯು ಟಾಟಾ ಪಂಚ್ ಕಾರಿಗೆ ಅತ್ಯುತ್ತಮ ಪರ್ಯಾಯ ಆಯ್ಕೆಯಲ್ಲಿದ್ದು, ಬಜೆಟ್ ಬೆಲೆಯಲ್ಲಿಯೇ ಖರೀದಿಗೆ ದೊರೆಯುತ್ತದೆ. ಇದು ರೂ.6.14 ಲಕ್ಷದಿಂದ ರೂ.11.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 17.4 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಮ್ಯಾಗ್ನೈಟ್ ಕಾರು ಹೊರಭಾಗದಲ್ಲಿ ಹೆಚ್ಚು ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಸ್ಟಾರ್ಮ್ ವೈಟ್, ಬ್ಲೇಡ್ ಸಿಲ್ವರ್, ಸನ್‌ರೈಸ್ ಕೂಪರ್ ಆರೆಂಜ್, ಫ್ಲೇರ್ ಗಾರ್ನೆಟ್ ರೆಡ್ ಮತ್ತು ಓನಿಕ್ಸ್ ಬ್ಲ್ಯಾಕ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿ ದೊರೆಯುತ್ತದೆ. ಈ ಎಸ್‌ಯುವಿಯಲ್ಲಿ 5-ಜನರು ಪ್ರಯಾಣಿಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಡಿಜಿಟಲ್ ಡ್ರೈವರ್ ಡಿಸ್‌ಪ್ಲೇಯಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಮಾರುತಿ ಸುಜುಕಿ ಬಲೆನೊ (Maruti Suzuki Baleno): ಇದು ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿದೆ. ಕನಿಷ್ಠ ರೂ.6.70 ಲಕ್ಷ ಮತ್ತು ಗರಿಷ್ಠ ರೂ.9.92 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 22.35 ರಿಂದ 30.61 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

ಈ ಬಲೆನೊ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರ್ಯಾಂಡ್ಯೂರ್ ಗ್ರೇ ಹಾಗೂ ಸ್ಪ್ಲೆಂಡಿಡ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications