6-ಆಸನಗಳ ಈ ಜನಪ್ರಿಯ 'Tata Suv'ಗೆ 3 ಬದಲಿ ಕಾರುಗಳಿವು.. ತುಂಬು ಕುಟುಂಬ ಹೋಗಬಹುದು!
ಟಾಟಾ ಸಫಾರಿ (Tata Safari) ಪ್ರಖ್ಯಾತ ಎಸ್‌ಯುವಿಯಾಗಿದೆ. ಕನಿಷ್ಠ ರೂ.15 ಲಕ್ಷದಿಂದ ಗರಿಷ್ಠ ರೂ.27 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 14.50 ರಿಂದ 16.30 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದು 6-ಆಸನಗಳನ್ನು ಪಡೆದಿದ್ದು, ಹೊರಭಾಗದಲ್ಲಿ ಆಕರ್ಷಕ ವಿನ್ಯಾಸವನ್ನು ಒಳಗೊಂಡಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 7 ಏರ್‌ಬ್ಯಾಗ್‌ಗಳನ್ನು ಹೊಂದಿದೆ. ನಾವಿಲ್ಲಿ ಟಾಟಾ ಸಫಾರಿಗೆ ಪರ್ಯಾಯ ಆಯ್ಕೆಯಾಗಬಲ್ಲ 3 ಪ್ರಮುಖ ಕಾರುಗಳ ಬಗ್ಗೆ ಸಂಕ್ಷಿಪ್ತವಾಗಿ ವಿವರಿಸಿದ್ದೇವೆ.
ಮಹೀಂದ್ರಾ ಎಕ್ಸ್‌ಯುವಿ700 (Mahindra XUV700): ಇದು ಪ್ರಖ್ಯಾತ ಎಸ್‌ಯುವಿಯಾಗಿದ್ದು, ಕೊಂಚ ಮಟ್ಟಿಗೆ ಹೆಚ್ಚಿನ ಬೆಲೆಯನ್ನು ಹೊಂದಿದೆ. ಅದರಲ್ಲೂ ಟಾಟಾ ಸಫಾರಿಗೆ ಪರ್ಯಾಯ ಆಯ್ಕೆಯಾಗಲಿದೆ. ಈ ಕಾರು ರೂ.14 ಲಕ್ಷದಿಂದ ರೂ.26 ಲಕ್ಷ ಎಕ್ಸ್-ಶೋರೂಂ ಬೆಲೆಯನ್ನು ಒಳಗೊಂಡಿದೆ. ಇದು 6/ 7 ಆಸನಗಳನ್ನು ಪಡೆದಿದೆ.

ಹೊಸ ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿ, 2-ಲೀಟರ್ ಟರ್ಬೊ ಪೆಟ್ರೋಲ್ ಮತ್ತು 2.2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.25-ಇಂಚು), ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ (10.25-ಇಂಚು), 12-ಸ್ಪೀಕರ್ ಆಡಿಯೊ ಸಿಸ್ಟಮ್, ಸನ್‌ರೂಫ್ ಮತ್ತು ಡುಯಲ್-ಝೋನ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಟೊಯೋಟಾ ಇನ್ನೋವಾ ಕ್ರಿಸ್ಟಾ (Toyota Innova Crysta): ಈ ಎಂಪಿವಿಯೂ ಟಾಟಾ ಸಫಾರಿಗೆ ಬದಲಿ ಆಯ್ಕೆಯಾಗಲಿದೆ ಎಂದು ಹೇಳಬಹುದು. ರೂ.20 ಲಕ್ಷದಿಂದ ರೂ.27 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. ಇದರಲ್ಲಿ 7/8 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು.

ಈ ಇನ್ನೋವಾ ಕ್ರಿಸ್ಟಾ ಎಂಪಿವಿ 2.4-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 8 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ರೇರ್ ಎಸಿ ವೆಂಟ್‌ಗಳು ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳು ಹಾಗೂ ಮುಂಭಾಗ (ಫ್ರಂಟ್) ಮತ್ತು ಹಿಂಭಾಗ ಹಿಂಭಾಗ (ರೇರ್) ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.
ಹ್ಯುಂಡೈ ಅಲ್ಕಾಜರ್ (Hyundai Alcazar): ಇದೊಂದು ಜನಪ್ರಿಯ ಪ್ರೀಮಿಯಂ ಎಸ್‌ಯುವಿಯಾಗಿದೆ. ರೂ.15 ಲಕ್ಷದಿಂದ ರೂ.22 ಲಕ್ಷ ಎಕ್ಸ್-ಶೋರೂಂ ದರವನ್ನು ಪಡೆದಿದೆ. ಇದು 6/7 ಆಸನ ಆಯ್ಕೆ ವ್ಯವಸ್ಥೆಯಲ್ಲಿಯೂ ಸಿಗುತ್ತದೆ. 1.5-ಲೀಟರ್ ಜಿಡಿಟಿ ಟರ್ಬೊ ಪೆಟ್ರೋಲ್ ಹಾಗೂ 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17.5 ರಿಂದ 20.4 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಹ್ಯುಂಡೈ ಅಲ್ಕಾಜರ್ ಎಸ್‌ಯುವಿ ಹತ್ತಾರು ಆಕರ್ಷಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡಿಸ್‌ಪ್ಲೇ, ಪನೊರೊಮಿಕ್ ಸನ್‌ರೂಫ್ ಮತ್ತು ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್‌ನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾಗಳನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications