30 Km ಮೈಲೇಜ್.. 5-ಸೀಟರ್, 6.90 ಲಕ್ಷ.. ಈ ಜನಪ್ರಿಯ Toyota ಹ್ಯಾಚ್‌ಬ್ಯಾಕ್‌ಗೆ 3 ಪರ್ಯಾಯ ಕಾರುಗಳಿವು!

ಟೊಯೊಟಾ ಗ್ಲಾನ್ಜಾ (Toyota Glanza) ಜನಪ್ರಿಯ ಹ್ಯಾಚ್‌ಬ್ಯಾಕ್‌ ಆಗಿದೆ. ಇದು ಕನಿಷ್ಠ ರೂ.6.90 ಲಕ್ಷ ಹಾಗೂ ಗರಿಷ್ಠ ರೂ.10 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.2-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ ಪಡೆದಿದ್ದು, 22 ರಿಂದ 30 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನಗಳಿವೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಎಂಜಿನ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್, ಆಟೋ ಕ್ಲೇಮೇಟ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ. ನೀವು 'ಗ್ಲಾನ್ಜಾ'ಗೆ ಬದಲಾಗಿ ಈ 3 ಕಾರುಗಳನ್ನು ಖರೀದಿ ಮಾಡಬಹುದು. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.

ಟಾಟಾ ಆಲ್ಟ್ರೋಜ್ ಫೇಸ್‌ಲಿಫ್ಟ್ (Tata Altroz Facelift):

ಇದು ಹೊಚ್ಚ ಹೊಸ ಹ್ಯಾಚ್‌ಬ್ಯಾಕ್‌ ಆಗಿದ್ದು, 'ಟೊಯೊಟಾ ಗ್ಲಾನ್ಜಾ'ಗೆ ಅತ್ಯುತ್ತಮವಾದ ಪರ್ಯಾಯ ಆಯ್ಕೆಯಾಗಲಿದೆ. ತುಂಬಾ ಸರಳವಾದ ವಿನ್ಯಾಸ ಹೊಂದಿದ್ದು, ಅದಕ್ಕೆ ತಕ್ಕಂತೆ ರೂ.6.89 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.2-ಲೀ. ಸಿಎನ್‌ಜಿ & 1.5-ಲೀ. ಟರ್ಬೋಚಾರ್ಜ್ಡ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ.

Best 3 Alternative Cars For Toyota Glanza Altroz Baleno Celerio

ಈ ಕಾರಿನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 345 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು 10.25-ಇಂಚಿರುವ ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಮಾರುತಿ ಸುಜುಕಿ ಬಲೆನೊ (Maruti Suzuki Baleno):

ಇದೊಂದು ಪ್ರಖ್ಯಾತ ಹ್ಯಾಚ್‌ಬ್ಯಾಕ್‌ ಆಗಿ ಹೊರಹೊಮ್ಮಿದೆ. 'ಟೊಯೊಟಾ ಗ್ಲಾನ್ಜಾ'ಗೆ ಬದಲಿ ಕಾರಾಗಲಿದೆ. ಬಜೆಟ್ ಬೆಲೆಯಲ್ಲಿಯೂ ದೊರೆಯಲಿದ್ದು, ಕನಿಷ್ಠ ರೂ.6.70 ಲಕ್ಷ ಮತ್ತು ಗರಿಷ್ಠ ರೂ.9.92 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೊರಭಾಗದಲ್ಲೂ ಆಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ನೆಕ್ಸಾ ಬ್ಲೂ, ಆರ್ಕ್ಟಿಕ್ ವೈಟ್, ಗ್ರ್ಯಾಂಡ್ಯೂರ್ ಗ್ರೇ ಹಾಗೂ ಸ್ಪ್ಲೆಂಡಿಡ್ ಸಿಲ್ವರ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.

Best 3 Alternative Cars For Toyota Glanza Altroz Baleno Celerio

ನೂತನ ಬಲೆನೊ ಕಾರು 1.2-ಲೀಟರ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 22 ರಿಂದ 30 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಆಸನಗಳಿವೆ. ಪ್ರವಾಸಕ್ಕೆ ಹೋಗುವಾಗ ಹೆಚ್ಚಿನ ಲಗೇಜ್ ಸಾಗಿಸಲು 318 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ. 37 ಲೀಟರ್‌ನಷ್ಟು ಫ್ಯುಯೆಲ್ ಟ್ಯಾಂಕ್‌ನ್ನು ಹೊಂದಿದೆ.

ಈ ಹ್ಯಾಚ್‌ಬ್ಯಾಕ್‌ 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕ್ರೂಸ್ ಕಂಟ್ರೋಲ್, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಹಾಗೂ ಕೀಲೆಸ್ ಎಂಟ್ರಿ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 3 Alternative Cars For Toyota Glanza Altroz Baleno Celerio

ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio):

ಇದು ಪ್ರಮುಖ ಹ್ಯಾಚ್‌ಬ್ಯಾಕ್‌ ಆಗಿದ್ದು, 'ಟೊಯೊಟಾ ಗ್ಲಾನ್ಜಾ'ಗೆ ಉತ್ತಮವಾದ ಪರ್ಯಾಯ ಕಾರಾಗಲಿದೆ. ಅದಕ್ಕೆ ಅನುಗುಣವಾಗಿ ರೂ.5.64 ಲಕ್ಷದಿಂದ ರೂ.7.37 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ ಆಯ್ಕೆಯನ್ನು ಒಳಗೊಂಡಿದೆ. 24 ರಿಂದ 34 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

Best 3 Alternative Cars For Toyota Glanza Altroz Baleno Celerio

ಈ ಕಾರು 5 ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. 7-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಅಡ್ಜಸ್ಟಬಲ್ ಹೆಡ್‌ರೆಸ್ಟ್‌ಗಳು, ಸೆಂಟ್ರಲ್ ಆರ್ಮ್‌ರೆಸ್ಟ್, ರೇರ್-ಎಸಿ ವೆಂಟ್‌ಗಳು, ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಹೊಂದಿದೆ.

More from DriveSpark

Article Published On: Monday, June 30, 2025, 8:29 [IST]
English summary
Best 3 alternative cars for toyota glanza altroz baleno celerio
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+