Toyota: 8-ಸೀಟರ್.. ಟೊಯೊಟಾ ಇನ್ನೋವಾ ಹೈಕ್ರಾಸ್ ಎಂಪಿವಿಗೆ 3 ಬದಲಿ ಕಾರುಗಳಿವು, ಬೆಲೆ ಎಷ್ಟು, ವಿಶೇಷತೆಗಳೇನು?

ಟೊಯೊಟಾ ಇನ್ನೋವಾ ಹೈಕ್ರಾಸ್ (Toyota Innova Hycross) ಪ್ರಮುಖ ಎಂಪಿವಿಯಾಗಿ ಹೊರಹೊಮ್ಮಿದೆ. ಇದು ರೂ.19.94 ಲಕ್ಷದಿಂದ ರೂ.32.58 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಪೆಟ್ರೋಲ್ ಹಾಗೂ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್ ಆಯ್ಕೆಯನ್ನು ಹೊಂದಿದ್ದು, 21 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಇದರಲ್ಲಿ 7/ 8 ಆಸನಗಳಿವೆ. 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ. ನೀವು 'ಇನ್ನೋವಾ ಹೈಕ್ರಾಸ್' ಎಂಪಿವಿಗೆ ಪರ್ಯಾಯವಾಗಿ ಈ 3 ಜನಪ್ರಿಯ ಕಾರುಗಳನ್ನು ಕೊಂಡುಕೊಳ್ಳಬಹುದು. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.

ಮಾರುತಿ ಸುಜುಕಿ ಇನ್ವಿಕ್ಟೊ (Maruti Suzuki Invicto)..

ಇದೊಂದು ಎಂಪಿವಿಯಾಗಿದ್ದು, 'ಟೊಯೊಟಾ ಇನ್ನೋವಾ ಹೈಕ್ರಾಸ್' ಎಂಪಿವಿಗೆ ಅತ್ಯುತ್ತಮ ಬದಲಿ ಕಾರಾಗಲಿದೆ. ರೂ.25.51 ರಿಂದ ರೂ.29.22 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಇದರಲ್ಲಿಯೂ 7/ 8 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ವಾರಾಂತ್ಯ ಹಾಗೂ ರಜಾದಿನಗಳಲ್ಲಿ ಹೆಚ್ಚಿನ ಲಗೇಜ್ ಸಾಗಿಸಲು 239 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಪಡೆದಿದೆ.

Best 3 Alternative Cars For Toyota Innova Hycross Mpv Invicto Carens Clavis Safari

ಈ ಎಂಪಿವಿ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಎಂಜಿನ್‌ನ್ನು ಒಳಗೊಂಡಿದೆ. 23 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್ ಮತ್ತು ವೈರ್‌ಲೆಸ್ ಚಾರ್ಜಿಂಗ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ಕಿಯಾ ಕ್ಯಾರೆನ್ಸ್ ಕ್ಲಾವಿಸ್ (Kia Carens Clavis)..

ಇದು ಕೂಡ ಎಂಪಿವಿಯಾಗಿದ್ದು, 'ಟೊಯೊಟಾ ಇನ್ನೋವಾ ಹೈಕ್ರಾಸ್' ಎಂಪಿವಿಗೆ ಉತ್ತಮವಾದ ಪರ್ಯಾಯ ಆಯ್ಕೆಯಾಗಲಿದೆ. ಈ ಕಾರು ರೂ.11.50 ಲಕ್ಷದಿಂದ ರೂ.21.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಜೊತೆಗೆ 6 & 7 ಆಸನ ಆಯ್ಕೆ ವ್ಯವಸ್ಥೆಯಿದ್ದು, 216 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ.

Best 3 Alternative Cars For Toyota Innova Hycross Mpv Invicto Carens Clavis Safari

ಈ ಎಂಪಿವಿಯು ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಪಡೆದಿದ್ದು, 15 ರಿಂದ 19 ಕೆಎಂಪಿಎಲ್‌ವರೆಗೂ ಮೈಲೇಜ್ ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್‌ (10.25-ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಮತ್ತು 9-ಸ್ಪೀಕರ್ ಬೋಸ್ ಸೌಂಡ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು ಆಲ್ ವೀಲ್ ಡಿಸ್ಕ್ ಬ್ರೇಕ್‌ಗಳನ್ನು ಪಡೆದಿದೆ.

ಟಾಟಾ ಸಫಾರಿ (Tata Safari)..

ಇದೊಂದು ಎಸ್‌ಯುವಿಯಾಗಿದೆ. 'ಟೊಯೊಟಾ ಇನ್ನೋವಾ ಹೈಕ್ರಾಸ್' ಎಂಪಿವಿಗೆ ಬದಲಿ ಕಾರಾಗಿ ಹೊರಹೊಮ್ಮಿದೆ. ಈ ಕಾರು ರೂ.15.50 ಲಕ್ಷದಿಂದ ರೂ.27.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 6/ 7 ಆಸನಗಳನ್ನು ಪಡೆದಿದೆ. ದೂರದ ಊರುಗಳಿಗೆ ತೆರಳುವಾಗ ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು ಸಾಧ್ಯವಂತೆ 420 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.

Best 3 Alternative Cars For Toyota Innova Hycross Mpv Invicto Carens Clavis Safari

ಈ ಕಾರು ಹೆಚ್ಚು ಶಕ್ತಿಯುತವಾದ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 16 ಕೆಎಂಪಿಎಲ್‌ವರೆಗೂ ಮೈಲೇಜ್ ಕೊಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (12.3-ಇಂಚು), ವೈರ್‌ಲೆಸ್ ಫೋನ್ ಚಾರ್ಜಿಂಗ್, ಡುಯಲ್ ಜೋನ್ ಆಟೋಮೆಟಿಕ್ ಎಸಿ ಮತ್ತು ಸನ್‌ರೂಫ್‌ನಂತಹ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 3 Alternative Cars For Toyota Innova Hycross Mpv Invicto Carens Clavis Safari

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

More from DriveSpark

Article Published On: Friday, June 6, 2025, 16:08 [IST]
English summary
Best 3 alternative cars for toyota innova hycross mpv invicto carens clavis safari
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+