Toyota: 550 ಕಿ.ಮೀ ಓಡುತ್ತೆ! ಮುಂಬರುವ ಟೊಯೊಟಾದ ಮೊದಲ ಇ-SUVಗೆ 3 ಬದಲಿ ಕಾರುಗಳಿವು.. ಬೆಲೆ ಎಷ್ಟು, ವಿಶೇಷತೆಗಳೇನು?

ಟೊಯೊಟಾ ಅರ್ಬನ್ ಕ್ರೂಸರ್ ಬಿಇವಿ (Toyota Urban Cruiser BEV), ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. 2026ರ ಫೆಬ್ರವರಿಯಲ್ಲಿ ಅದ್ದೂರಿಯಾಗಿಯೂ ಮಾರಾಟಕ್ಕೆ ಬರುವ ನಿರೀಕ್ಷೆಯಿದೆ. ರೂ.18 ಲಕ್ಷದಿಂದ ರೂ.25 ಲಕ್ಷ (ಎಕ್ಸ್-ಶೋರೂಂ) ದರವಿರಬಹುದು ಎಂದು ಅಂದಾಜಿಸಲಾಗಿದೆ. ಈಗಾಗಲೇ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋದಲ್ಲೂ ಪ್ರದರ್ಶನಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಕಣ್ಣು ಕುಕ್ಕುವ ಬಣ್ಣಗಳೊಂದಿಗೂ ದೊರೆಯಬಹುದು. 5 ಆಸನಗಳನ್ನು ಒಳಗೊಂಡಿರಲಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚಾರ ಮಾಡಬಹುದು. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 400 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿರವ ಸಾಧ್ಯತೆಯಿದೆ.

ಈ ಕಾರು 49 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 61 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿರಬಹುದು ಎನ್ನಲಾಗಿದೆ. ಭರ್ತಿ ಚಾರ್ಜ್‌ನಲ್ಲಿ 550 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಹಾಗೂ ಆಟೋ ಎಸಿಯಂತಹ ವೈಶಿಷ್ಟ್ಯಗಳನ್ನು ಒಳಗೊಂಡಿರಬಹುದು ಎಂದು ಹೇಳಲಾಗಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿರುವ ಎಲ್ಲ ಲಕ್ಷಣಗಳಿವೆ.

Best 3 Alternative Cars for Toyota Urban Cruiser BEV Mahindra BE 6 VinFast VF6 And Tata Nexon EV

ನೀವು ಕೂಡ ಮುಂಬರುವ 'ಟೊಯೊಟಾ ಅರ್ಬನ್ ಕ್ರೂಸರ್ ಬಿಇವಿ'ಗೆ ಪರ್ಯಾಯವಾಗಿ ಈ 3 ಎಲೆಕ್ಟ್ರಿಕ್ ಎಸ್‌ಯುವಿಗಳಾದ ಮಹೀಂದ್ರಾ ಬಿಇ 6, ವಿನ್‌ಫಾಸ್ಟ್ ವಿಎಫ್6 ಹಾಗೂ ಟಾಟಾ ನೆಕ್ಸಾನ್ ಇವಿಗಳನ್ನು ಖರೀದಿ ಮಾಡಬಹುದು. ಬನ್ನಿ.. ಇವುಗಳ ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮಹೀಂದ್ರಾ ಬಿಇ 6 (Mahindra BE 6):

ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದೆ. 'ಟೊಯೊಟಾ ಅರ್ಬನ್ ಕ್ರೂಸರ್ ಬಿಇವಿ'ಗೆ ಬದಲಾಗಿ ಕೊಂಡುಕೊಳ್ಳಬಹುದು. ರೂ.18.90 ಲಕ್ಷದಿಂದ ರೂ.27.79 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಎವರೆಸ್ಟ್ ವೈಟ್, ಡೆಸರ್ಟ್ ಮಿಸ್ಟ್, ಫೈರ್‌ಸ್ಟಾರ್ಮ್ ಆರೆಂಜ್, ನಪೋಲಿ ಬ್ಲ್ಯಾಕ್, ಡೆಸರ್ಟ್ ಮಿಸ್ಟ್ ಸ್ಯಾಟಿನ್ ಮತ್ತು ಎವರೆಸ್ಟ್ ವೈಟ್ ಸ್ಯಾಟಿನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ.

Best 3 Alternative Cars for Toyota Urban Cruiser BEV Mahindra BE 6 VinFast VF6 And Tata Nexon EV

ನೂತನ 'ಬಿಇ 6' ಕಾರು 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 79 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಸಂಪೂರ್ಣ ಚಾರ್ಜ್‌ನಲ್ಲಿ 556 ರಿಂದ 682 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. ಇನ್ಸ್ಟ್ರುಮೆಂಟ್ ಕ್ಲಸ್ಟರ್ - ಇನ್ಫೋಟೈನ್‌ಮೆಂಟ್ ಸಿಸ್ಟಮ್‌ಗಾಗಿ ಡುಯಲ್ ಸ್ಕ್ರೀನ್, ಟೂ ಸ್ಪೋಕ್ ಸ್ಟೀರಿಂಗ್ ವೀಲ್, ವೆಂಟಿಲೇಟೆಡ್ ಸೀಟ್‌ಗಳು, ವೈರ್‌ಲೆಸ್ ಚಾರ್ಜರ್‌ಗಳು ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ವಿನ್‌ಫಾಸ್ಟ್ ವಿಎಫ್6 (VinFast VF6):

ಈ ಎಲೆಕ್ಟ್ರಿಕ್ ಎಸ್‌ಯುವಿಯನ್ನು 'ಟೊಯೊಟಾ ಅರ್ಬನ್ ಕ್ರೂಸರ್ ಬಿಇವಿ'ಗೆ ಪರ್ಯಾಯವಾಗಿ ಮನೆಗೆ ತರಬಹುದು. ರೂ.16.49 ಲಕ್ಷದಿಂದ ರೂ.18.29 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಹೊಂದಿದೆ. ಕ್ರಿಮ್ಸನ್ ರೆಡ್, ಜೆನಿತ್ ಗ್ರೇ, ಅರ್ಬನ್ ಮಿಂಟ್, ಜೆಟ್ ಬ್ಲ್ಯಾಕ್ ಮತ್ತು ಡೆಸ್ಯಾಟ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಲಭ್ಯವಿವೆ. 5 ಆಸನಗಳನ್ನು ಒಳಗೊಂಡಿದೆ.

Best 3 Alternative Cars for Toyota Urban Cruiser BEV Mahindra BE 6 VinFast VF6 And Tata Nexon EV

ಹೊಸ 'ವಿಎಫ್6' ಕಾರು 59.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಪೂರ್ತಿ ಚಾರ್ಜ್‌ನಲ್ಲಿ 470 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ನೀಡುತ್ತದೆ. 12.9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, 8-ಸ್ಪೀಕರ್ ಸೌಂಡ್ ಸಿಸ್ಟಮ್, ಪನೋರಮಿಕ್ ಸನ್‌ರೂಫ್ ಮತ್ತು ಯುಎಸ್‌‍ಬಿ-ಸಿ ಚಾರ್ಜಿಂಗ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 7-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಟಾಟಾ ನೆಕ್ಸಾನ್ ಇವಿ (Tata Nexon EV):

ಇದು ಜನಪ್ರಿಯ ಎಸ್‌ಯುವಿಯಾಗಿದ್ದು, 'ಟೊಯೊಟಾ ಅರ್ಬನ್ ಕ್ರೂಸರ್ ಬಿಇವಿ'ಗೆ ಬದಲಿ ಕಾರಾಗಿದೆ. ರೂ.12.49 ಲಕ್ಷದಿಂದ ರೂ.17.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಒಳಗೊಂಡಿದೆ. ಪ್ರಿಸ್ಟೈನ್ ವೈಟ್, ಡೇಟೋನಾ ಗ್ರೇ, ಫ್ಲೇಮ್ ರೆಡ್, ಇಂಟೆನ್ಸಿ ಟೀಲ್, ಎಂಪವರ್ಡ್ ಆಕ್ಸೈಡ್ ಹಾಗೂ ಕ್ರಿಯೇಟಿವ್ ಓಷನ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ.

Best 3 Alternative Cars for Toyota Urban Cruiser BEV Mahindra BE 6 VinFast VF6 And Tata Nexon EV

ನೂತನ 'ನೆಕ್ಸಾನ್ ಇವಿ' 30 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 275 ರಿಂದ 489 ಕಿಲೋಮೀಟರ್‌ವರೆಗೆ ರೇಂಜ್ (ಮೈಲೇಜ್) ಕೊಡುತ್ತದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಡ್ರೈವರ್ ಡಿಸ್‌ಪ್ಲೇಯಂತಹ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Saturday, December 13, 2025, 14:47 [IST]
English summary
Best 3 alternative cars for toyota urban cruiser bev mahindra be 6 vinfast vf6 and tata nexon ev
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+