28 ಕಿ.ಮೀ ಮೈಲೇಜ್, 10.95 ಲಕ್ಷ.. ಈ ಕಲ್ಲುಬಂಡೆಯಂತಹ ಟೊಯೊಟಾ ಎಸ್‌ಯುವಿಗೆ 3 ಬದಲಿ ಕಾರುಗಳಿವು, ಬೆಲೆ ಎಷ್ಟು?

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder), ಪ್ರಖ್ಯಾತ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಮಿಡ್‌ನೈಟ್ ಬ್ಲ್ಯಾಕ್ & ಸ್ಪೀಡಿ ಬ್ಲೂ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 28 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9 ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

ನೀವು ಇದೇ 'ಟೊಯೊಟಾ ಹೈರೈಡರ್'ಗೆ ಪರ್ಯಾಯವಾದ ಈ 3 ಜನಪ್ರಿಯ ಎಸ್‌ಯುವಿಗಳಾದ ಮಾರುತಿ ಸುಜುಕಿ ವಿಕ್ಟೋರಿಸ್, ಸ್ಕೋಡಾ ಕುಶಾಕ್ ಮತ್ತು ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಈ ನೂತನ ಕಾರುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

Best 3 Alternative Cars For Toyota Urban Cruiser Hyryder Victoris Kushaq And Grand Vitara

ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris):

ಇದೊಂದು ಮಿಡ್-ಸೈಜ್ ಎಸ್‌ಯುವಿಯಾಗಿದೆ. 'ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್'ಗೆ ಬದಲಿ ಆಯ್ಕೆಯಾಗಲಿದೆ. ಕನಿಷ್ಠ ರೂ.10.50 ಲಕ್ಷ ಹಾಗೂ ಗರಿಷ್ಠ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ಸಿಜ್ಲಿಂಗ್ ರೆಡ್, ಮಿಸ್ಟಿಕ್ ಗ್ರೀನ್, ಬ್ಲ್ಯೂಯಿಸ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಹಾಗೂ ಪರ್ಲ್ ಆರ್ಕ್ಟಿಕ್ ವೈಟ್ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ವಿಕ್ಟೋರಿಸ್' 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 21 ರಿಂದ 28.65 ಕಿ.ಮೀವರಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10.1 ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

Best 3 Alternative Cars For Toyota Urban Cruiser Hyryder Victoris Kushaq And Grand Vitara

ಸ್ಕೋಡಾ ಕುಶಾಕ್ (Skoda Kushaq):

ಈ ಪ್ರಮುಖ ಎಸ್‌ಯುವಿಯನ್ನು 'ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.10.61ಲಕ್ಷದಿಂದ ರೂ.18.43 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಟೊರ್ನಾಡೊ ರೆಡ್, ಕ್ಯಾಂಡಿ ವೈಟ್, ಕಾರ್ಬನ್ ಸ್ಟೀಲ್, ಬ್ರಿಲಿಯಂಟ್ ಸಿಲ್ವರ್, ಡೀಪ್ ಬ್ಲ್ಯಾಕ್, ಲಾವಾ ಬ್ಲೂ ಹಾಗೂ ಕಾರ್ಬನ್ ಸ್ಟೀಲ್ ಮ್ಯಾಟ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

ಹೊಸ 'ಕುಶಾಕ್' 1-ಲೀಟರ್ ಟರ್ಬೊ ಪೆಟ್ರೋಲ್ & 1.5-ಲೀಟರ್ ಟರ್ಬೊ ಪೆಟ್ರೋಲ್ ಡೀಸೆಲ್ ಎಂಜಿನ್‌ನ್ನು ಪಡೆದಿದೆ. 18.09 ರಿಂದ 19.76 ಕಿ.ಮೀವರಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (10 ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸಿಂಗಲ್ ಪೇನ್ ಸನ್‌ರೂಫ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 3 Alternative Cars For Toyota Urban Cruiser Hyryder Victoris Kushaq And Grand Vitara

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara):

ಇದು ವಿಶ್ವಾಸಾರ್ಹ ಎಸ್‌ಯುವಿಯಾಗಿದೆ. ಕನಿಷ್ಠ ರೂ.10.76 ಲಕ್ಷ ಮತ್ತು ಗರಿಷ್ಠ ರೂ.19.72 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ತನ್ನದಾಗಿಸಿಕೊಂಡಿದೆ. ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಗ್ರ್ಯಾಂಡ್ಯೂರ್ ಗ್ರೇ ಹಾಗೂ ಸ್ಪ್ಲೆಂಡಿಡ್ ಸಿಲ್ವರ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

Best 3 Alternative Cars For Toyota Urban Cruiser Hyryder Victoris Kushaq And Grand Vitara

ನೂತನ 'ಗ್ರ್ಯಾಂಡ್ ವಿಟಾರಾ' 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 28 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9 ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಹಾಗೂ ಆಂಬಿಯೆಂಟ್ ಲೈಟಿಂಗ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

More from DriveSpark

Article Published On: Wednesday, October 22, 2025, 11:15 [IST]
English summary
Best 3 alternative cars for toyota urban cruiser hyryder victoris kushaq and grand vitara
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+