8 ಲಕ್ಷ.. ಅತಿ ಶೀಘ್ರದಲ್ಲೇ ಹೊಸ ರೆನಾಲ್ಟ್ ಡಸ್ಟರ್ ಎಸ್‌ಯುವಿ ಬಿಡುಗಡೆ.. 3 ಜನಪ್ರಿಯ ಪರ್ಯಾಯ ಕಾರುಗಳಿವು, ಬೆಲೆ ಎಷ್ಟು?
ಜನವರಿ 26ರ ಗಣರಾಜ್ಯೋತ್ಸವದಂದು ಹೊಚ್ಚ ಹೊಸ ರೆನಾಲ್ಟ್ ಡಸ್ಟರ್ (Renault Duster) ಎಸ್‌ಯುವಿಯನ್ನು ಅನಾವರಣಗೊಳಿಸಲಾಗುತ್ತದೆ. ಇದು ರೂ.8 ಲಕ್ಷದಿಂದ ರೂ.15 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರುವ ನಿರೀಕ್ಷೆಯಿದೆ. 1.3-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1.0-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿರಲಿದ್ದು, 24 ಕಿ.ಮೀವರೆಗೆ ಮೈಲೇಜ್ ಕೊಡಬಹುದು ಎಂದು ಅಂದಾಜಿಸಲಾಗಿದೆ. 5 ಆಸನಗಳನ್ನು ಹೊಂದಿರಲಿದೆ. 10 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಸ್ಕ್ರೀನ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದುಕೊಂಡಿರಲಿದೆ ಎಂದು ಹೇಳಲಾಗಿದೆ.
ಮುಂಬರುವ 'ರೆನಾಲ್ಟ್ ಡಸ್ಟರ್'ಗೆ ಪರ್ಯಾಯವಾಗಿ ಈ 3 ಜನಪ್ರಿಯ ಎಸ್‌ಯುವಿಗಳಾದ ಟಾಟಾ ನೆಕ್ಸಾನ್, ಹೋಂಡಾ ಎಲಿವೇಟ್ ಮತ್ತು ಮಾರುತಿ ಸುಜುಕಿ ಬ್ರೆಝಾಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಈ ನೂತನ ಕಾರುಗಳ ದರವೆಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟಾಟಾ ನೆಕ್ಸಾನ್ (Tata Nexon):
ಇದೊಂದು ಜಗಮೆಚ್ಚಿದ ಎಸ್‌ಯುವಿಯಾಗಿದೆ. 'ರೆನಾಲ್ಟ್ ಡಸ್ಟರ್'ಗೆ ಬದಲಾಗಿಯೂ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.7.32 ಲಕ್ಷದಿಂದ ರೂ.14.05 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ದೂರದ ಊರುಗಳಿಗೆ ಓಡಾಟ ನಡೆಸಬಹುದು.
ನೂತನ 'ನೆಕ್ಸಾನ್' 1.2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್, 1.5 ಲೀಟರ್ ಟರ್ಬೋಚಾರ್ಜ್ಡ್ ಡೀಸೆಲ್ ಹಾಗೂ 1.2-ಲೀಟರ್ ಟರ್ಬೋಚಾರ್ಜ್ಡ್ 3-ಸಿಲಿಂಡರ್ ಪೆಟ್ರೋಲ್+ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 17 ರಿಂದ 24 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಹಾಗೂ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.

ಹೋಂಡಾ ಎಲಿವೇಟ್ (Honda Elevate):
ಈ ಕಾರನ್ನು 'ರೆನಾಲ್ಟ್ ಡಸ್ಟರ್'ಗೆ ಪರ್ಯಾಯವಾಗಿ ಮನೆಗೆ ತರಬಹುದು. ಇದು ರೂ.11 ಲಕ್ಷದಿಂದ ರೂ.16.67 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 5 ಆಸನಗಳನ್ನು ಹೊಂದಿದೆ. ಗೋಲ್ಡನ್ ಬ್ರೌನ್ ಮೆಟಾಲಿಕ್, ಫೀನಿಕ್ಸ್ ಆರೆಂಜ್ ಪರ್ಲ್, ಅಬ್ಸಿಡಿಯನ್ ಬ್ಲೂ ಪರ್ಲ್, ಮೆಟಿಯೊರಾಯ್ಡ್ ಗ್ರೇ ಮೆಟಾಲಿಕ್, ರೇಡಿಯಂಟ್ ರೆಡ್ ಮೆಟಾಲಿಕ್ ಹಾಗೂ ಲೂನಾರ್ ಸಿಲ್ವರ್ ಮೆಟಾಲಿಕ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಹೊಸ 'ಎಲಿವೇಟ್' 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 15 ರಿಂದ 17 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ರೇರ್ ಎಸಿ ವೆಂಟ್‌ಗಳು, ವೈರ್‌ಲೆಸ್ ಫೋನ್ ಚಾರ್ಜರ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza):
ಇದನ್ನು ಕೂಡ 'ರೆನಾಲ್ಟ್ ಡಸ್ಟರ್'ಗೆ ಬದಲಾಗಿ ಖರೀದಿ ಮಾಡಬಹುದು. ರೂ.8.26 ಲಕ್ಷದಿಂದ ರೂ.13.01 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದ್ದು, ಪ್ರಯಾಣಿಕರು ಸುಲಭವಾಗಿ ಸಂಚಾರ ಮಾಡಬಹುದು. ಸಿಜ್ಲಿಂಗ್ ರೆಡ್, ಬ್ರೇವ್ ಖಾಕಿ, ಎಕ್ಸೂಬೆರಂಟ್ ಬ್ಲೂ, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ನೂತನ 'ಬ್ರೆಝಾ' 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಮೈಲ್ಡ್ ಹೈಬ್ರಿಡ್ ಪೆಟ್ರೋಲ್ ಹಾಗೂ 1.5-ಲೀಟರ್ ಪೆಟ್ರೋಲ್+ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 17.80 ರಿಂದ 25.51 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೊಮೇಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಹೊಂದಿದೆ.


Click it and Unblock the Notifications








