Tata: 7-ಸೀಟರ್.. ಅತಿ ಶೀಘ್ರದಲ್ಲೇ ಗಟ್ಟಿಮುಟ್ಟಾದ ಟಾಟಾ ಸಫಾರಿ ಪೆಟ್ರೋಲ್ ಕಾರು ಮಾರಾಟಕ್ಕೆ, 3 ಜನಪ್ರಿಯ ಬದಲಿ ಕಾರುಗಳಿವು!
ಟಾಟಾ ಸಫಾರಿ ಪೆಟ್ರೋಲ್ (Tata Safari Petrol) ಎಸ್‌ಯುವಿ, ಬಿಡುಗಡೆಗೆ ದಿನಗಣನೆ ಶುರುವಾಗಿದೆ. ಅತಿ ಶೀಘ್ರದಲ್ಲೇ ಈ ಕಾರು ಮಾರಾಟಕ್ಕೂ ಬರಲಿದೆ. ರೂ.16 ಲಕ್ಷದಿಂದ ರೂ.23.13 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿರಬಹುದು ಎಂದು ಅಂದಾಜಿಸಲಾಗಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಉತ್ತಮವಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, 'ಸಫಾರಿ' ಬ್ಯಾಡ್ಜಿಂಗ್, ಫಾಗ್ ಲೈಟ್‌ಗಳು ಎಲ್ಇಡಿ ಟೈಲ್ ಲ್ಯಾಂಪ್‌ಗಳನ್ನು ಹೊಂದಿದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,741 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.
ಈ ಕಾರು 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 14.8 ರಿಂದ 16.3 ಕಿಲೋಮೀಟರ್‌ವರೆಗೆ ಮೈಲೇಜ್ ನೀಡಬಹುದು ಎಂದು ಹೇಳಲಾಗಿದೆ. 6/ 7 ಆಸನಗಳನ್ನು ಹೊಂದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಸರೌಂಡ್-ವ್ಯೂ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

ನೀವು ಇದೇ 'ಟಾಟಾ ಸಫಾರಿ ಪೆಟ್ರೋಲ್'ಗೆ ಪರ್ಯಾಯವಾಗಿ ಈ 3 ಜನಪ್ರಿಯ ಕಾರುಗಳಾದ ಮಹೀಂದ್ರಾ ಸ್ಕಾರ್ಪಿಯೋ ಎನ್, ಹ್ಯುಂಡೈ ಅಲ್ಕಾಜರ್ ಮತ್ತು ಎಂಜಿ ಹೆಕ್ಟರ್‌ಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು ಹಾಗೂ ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಮಹೀಂದ್ರಾ ಸ್ಕಾರ್ಪಿಯೋ ಎನ್ ಪೆಟ್ರೋಲ್ (Mahindra Scorpio N Petrol):
ಇದು ಪ್ರಖ್ಯಾತ ಎಸ್‌ಯುವಿಯಾಗಿದೆ. 'ಟಾಟಾ ಸಫಾರಿ ಪೆಟ್ರೋಲ್'ಗೆ ಬದಲಾಗಿ ಕೊಂಡುಕೊಳ್ಳಬಹುದು. ರೂ.13.20 ಲಕ್ಷದಿಂದ ರೂ.19.36 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು, ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಹೊಂದಿದೆ. 187 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,750 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

ಈ ಕಾರು 2.0-ಲೀ. ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 12.12 ರಿಂದ 12.17 ಕಿಲೋಮೀಟರ್‌ವರೆಗೆ ಕೊಡುತ್ತದೆ. 6/ 7 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಹ್ಯುಂಡೈ ಅಲ್ಕಾಜರ್ ಪೆಟ್ರೋಲ್ (Hyundai Alcazar Petrol):
ಇದೊಂದು ವಿಶ್ವಾಸಾರ್ಹ ಎಸ್‌ಯುವಿಯಾಗಿದ್ದು, 'ಟಾಟಾ ಸಫಾರಿ ಪೆಟ್ರೋಲ್'ಗೆ ಪರ್ಯಾಯವಾಗಿ ಮನೆಗೆ ತರಬಹುದು. ರೂ.14.47 ಲಕ್ಷದಿಂದ ರೂ.20.96 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಹಾಗೂ ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ಪಡೆದಿದೆ. 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,760 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ನೂತನ 'ಅಲ್ಕಾಜರ್' ಕಾರು 1.5-ಲೀಟರ್ ಜಿಡಿಟಿ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 6-ಸ್ಪೀಡ್ ಮ್ಯಾನುವಲ್ ಹಾಗೂ 7-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 17.5 ರಿಂದ 18 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 6/7 ಆಸನಗಳನ್ನು ಒಳಗೊಂಡಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡಿಸ್ಪ್ಲೇ ಹಾಗೂ ಪನೊರೊಮಿಕ್ ಸನ್‌ರೂಫ್‌ನಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಹೊಂದಿದೆ. 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಎಂಜಿ ಹೆಕ್ಟರ್ ಪೆಟ್ರೋಲ್ (MG Hector Petrol)
ಇದು ಪ್ರಮುಖ ಎಸ್‌ಯುವಿಯಾಗಿ ಎಂದೇ ಹೆಸರುವಾಸಿಯಾಗಿದ್ದು, 'ಟಾಟಾ ಸಫಾರಿ ಪೆಟ್ರೋಲ್'ಗೆ ಬದಲಾಗಿಯೂ ಕೊಂಡುಕೊಳ್ಳಬಹುದು, ರೂ.11.99 ಲಕ್ಷದಿಂದ ರೂ.19.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಎಲ್ಇಡಿ ಹೆಡ್‌ಲ್ಯಾಂಪ್‌ಗಳು, ಎಲ್ಇಡಿ ಡಿಆರ್‌ಎಲ್‌ಗಳು ಮತ್ತು ಎಲ್ಇಡಿ ಟೈಲ್‌ಲ್ಯಾಂಪ್‌ಗಳನ್ನು ತನ್ನದಾಗಿಸಿಕೊಂಡಿದೆ. 200 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,760 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಈ ಕಾರು 1.5-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದೆ. 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಡಿಸಿಟಿ ಗೇರ್‌ಬಾಕ್ಸ್‌ನ್ನು ಹೊಂದಿದೆ. 12.34 ರಿಂದ 13.79 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಮತ್ತು 7 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. 14-ಇಂಚಿನ ಇನ್ಫೋಟೈನ್‌ಮೆಂಟ್ ಸ್ಕ್ರೀನ್ ಹಾಗೂ ಪನೋರಮಿಕ್ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.


Click it and Unblock the Notifications








