TATA: ಅತಿ ಶೀಘ್ರದಲ್ಲೇ ಹೊಸ ಟಾಟಾ ಸಿಯೆರಾ ಎಸ್‌ಯುವಿ ಬಿಡುಗಡೆ.. 3 ಜನಪ್ರಿಯ ಪರ್ಯಾಯ ಕಾರುಗಳಿವು, ಬೆಲೆ ಎಷ್ಟು?

ನವೆಂಬರ್ ಮೊದಲ ಅಥವಾ ಎರಡನೇ ವಾರದಲ್ಲಿ ಹೊಚ್ಚ ಹೊಸ ಟಾಟಾ ಸಿಯೆರಾ (Tata Sierra) ಎಸ್‌ಯುವಿಯಾಗಿ ಅದ್ದೂರಿಯಾಗಿ ಬಿಡುಗಡೆಯಾಗುವ ಎಲ್ಲ ಲಕ್ಷಣಗಳಿವೆ. ಇದು ರೂ.11 ಲಕ್ಷದಿಂದ ರೂ.20 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರುವ ನಿರೀಕ್ಷೆಯಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊಚಾರ್ಜ್ಡ್ ಪೆಟ್ರೋಲ್, 1.5-ಲೀ. ಟರ್ಬೊ ಡೀಸೆಲ್ ಎಂಜಿನ್‌ನ್ನು ಹೊಂದಿರಲಿದೆ. ಜೊತೆಗೆ ಎಲೆಕ್ಟ್ರಿಕ್ ಪವರ್‌ಟ್ರೇನ್‌ ಆಯ್ಕೆಯಲ್ಲಿಯೂ ಮಾರಾಟಕ್ಕೆ ಬರಬಹುದು ಎನ್ನಲಾಗಿದೆ. 5 ಆಸನಗಳನ್ನು ಒಳಗೊಂಡಿರಲಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್, 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದುಕೊಡಿರುವ ಸಾಧ್ಯತೆಯಿದೆ.

ಮುಂಬರುವ 'ಟಾಟಾ ಸಿಯೆರಾ'ಗೆ ಪರ್ಯಾಯವಾಗಿ ಈ 3 ಜನಪ್ರಿಯ ಎಸ್‌ಯುವಿಗಳಾದ ಹ್ಯುಂಡೈ ಕ್ರೆಟಾ, ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ ಮತ್ತು ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್‌ಗಳನ್ನು ಖರೀದಿ ಮಾಡಬಹುದು. ಬನ್ನಿ, ಈ ನೂತನ ಕಾರುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

Best 3 Alternative Cars For Upcoming Tata Sierra Suv Creta Grand Vitara Hyryder

ಹ್ಯುಂಡೈ ಕ್ರೆಟಾ (Hyundai Creta):

ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದ್ದು, 'ಟಾಟಾ ಸಿಯೆರಾ'ಗೆ ಬದಲಿ ಕಾರಾಗಲಿದೆ. ಅದಕ್ಕೆ ತಕ್ಕಂತೆ ರೂ.10.73 ಲಕ್ಷದಿಂದ ರೂ.20.50 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಸ್ಟಾರಿ ನೈಟ್, ಅಟ್ಲಾಸ್ ವೈಟ್, ಅಬಿಸ್ ಬ್ಲ್ಯಾಕ್, ಟೈಟಾನ್ ಗ್ರೇ, ಫಿಯರಿ ರೆಡ್ ಹಾಗೂ ರೇಂಜರ್ ಖಾಕಿ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.

ನೂತನ 'ಕ್ರೆಟಾ' 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 21 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್‌ - ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇಗಳು, ಸನ್‌ರೂಫ್, 6 ಏರ್‌ಬ್ಯಾಗ್‌ಗಳು ಮತ್ತು ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

Best 3 Alternative Cars For Upcoming Tata Sierra Suv Creta Grand Vitara Hyryder

ಮಾರುತಿ ಸುಜುಕಿ ಗ್ರ್ಯಾಂಡ್ ವಿಟಾರಾ (Maruti Suzuki Grand Vitara):

ಈ ಎಸ್‌ಯುವಿಯನ್ನು ಕೂಡ 'ಟಾಟಾ ಸಿಯೆರಾ'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ಇದು ರೂ.10.77 ಲಕ್ಷದಿಂದ ರೂ.19.72 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ನೆಕ್ಸಾ ಬ್ಲೂ, ಒಪ್ಯುಲೆಂಟ್ ರೆಡ್, ಗ್ರ್ಯಾಂಡ್ಯೂರ್ ಗ್ರೇ & ಸ್ಪ್ಲೆಂಡಿಡ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಹೊಸ 'ಗ್ರ್ಯಾಂಡ್ ವಿಟಾರಾ' 1.5-ಲೀ. ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಹಾಗೂ 1.5-ಲೀ. ಪೆಟ್ರೋಲ್/ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19 ರಿಂದ 28 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9 ಇಂಚು), ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್, ಸನ್‌ರೂಫ್ ಹಾಗೂ 6 ಏರ್‌ಬ್ಯಾಗ್‌ಗಳು ಹಾಗೂ ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ.

Best 3 Alternative Cars For Upcoming Tata Sierra Suv Creta Grand Vitara Hyryder

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder):

ಇದು ವಿಶ್ವಾಸಾರ್ಹ ಎಸ್‌ಯುವಿಯಾಗಿದ್ದು, 'ಟಾಟಾ ಸಿಯೆರಾ'ಗೆ ಬದಲಾಗಿ ಮನೆಗೆ ತರಬಹುದು. ಈ ಕಾರು ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್ ಹಾಗೂ ಮಿಡ್‌ನೈಟ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ.

Best 3 Alternative Cars For Upcoming Tata Sierra Suv Creta Grand Vitara Hyryder

ನೂತನ 'ಅರ್ಬನ್ ಕ್ರೂಸರ್ ಹೈರೈಡರ್' 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಹಾಗೂ 1.5-ಲೀ. ಪೆಟ್ರೋಲ್/ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 27.97 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ (9-ಇಂಚು), ಸನ್‌ರೂಫ್, 6 ಏರ್‌ಬ್ಯಾಗ್‌ಗಳು ಮತ್ತು ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್) ಒಳಗೊಂಡಂತೆ ವೈಶಿಷ್ಟ್ಯಗಳನ್ನು ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ.

More from DriveSpark

Article Published On: Friday, October 24, 2025, 17:24 [IST]
English summary
Best 3 alternative cars for upcoming tata sierra suv creta grand vitara hyryder
Read more on tata motors india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+