532 ಕಿಲೋಮೀಟರ್ ರೇಂಜ್.. ಹೊಸ VinFast VF7ಗೆ ಪರ್ಯಾಯವಾಗಬಲ್ಲ 3 ಜನಪ್ರಿಯ ಕಾರುಗಳಿವು!
ಇತ್ತೀಚೆಗೆ ವಿನ್‌ಫಾಸ್ಟ್ ವಿಎಫ್7 (VinFast VF7) ಎಲೆಕ್ಟ್ರಿಕ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಗಿದೆ. ಇದು ಕನಿಷ್ಠ ರೂ.20.89 ಲಕ್ಷ ಹಾಗೂ ಗರಿಷ್ಠ ರೂ.25,49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹಾಗೂ ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿದೆ. 59.6 ಮತ್ತು 70.8 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 438 ಕಿಲೋಮೀಟರ್ ರಿಂದ 532 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. 5-ಆಸನಗಳನ್ನು ಪಡೆದಿದೆ. 12.9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಪನೋರಮಿಕ್ ಗ್ಲಾಸ್ ರೂಫ್, 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ನೀವು ಇದೇ 'ವಿಎಫ್7'ಗೆ ಬದಲಾಗಿ 3 ಜನಪ್ರಿಯ ಎಲೆಕ್ಟ್ರಿಕ್ ಕಾರುಗಳನ್ನು ತೆಗೆದುಕೊಳ್ಳಬಹುದು. ಆ ಬಗ್ಗೆ ಇಲ್ಲಿದೆ ಹೆಚ್ಚಿನ ಮಾಹಿತಿ.
ಟಾಟಾ ಹ್ಯಾರಿಯರ್ ಇವಿ (Tata Harrier EV):
ಈ ಎಲೆಕ್ಟ್ರಿಕ್ ಎಸ್‌ಯುವಿಯನ್ನು 'ವಿನ್‌ಫಾಸ್ಟ್ ವಿಎಫ್7'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.21.49 ಲಕ್ಷದಿಂದ ರೂ.30.23 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಪಡೆದಿದೆ. ಸ್ಟೆಲ್ತ್ ಬ್ಲ್ಯಾಕ್, ಎಂಪವರ್ಡ್ ಆಕ್ಸೈಡ್ ಮತ್ತು ಪ್ಯೂರ್ ಗ್ರೇ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಇದು 65 ಮತ್ತು 75 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಪೂರ್ತಿ ಚಾರ್ಜ್‌ನಲ್ಲಿ 538 ರಿಂದ 627 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. 5 ಆಸನಗಳನ್ನು ಪಡೆದಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಹೆಚ್ಚಿನ ಲಗೇಜ್ ಸಾಗಿಸಲು ಸಾಧ್ಯವಾಗುವಂತೆ 502 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಒಳಗೊಂಡಿದೆ.
ನೂತನ ಹ್ಯಾರಿಯರ್ ಇವಿಯು 14.5-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, 10-ಜೆಬಿಎಲ್ ಸ್ಪೀಕರ್ ಸೌಂಡ್ ಸಿಸ್ಟಮ್, ಸನ್‌ರೂಫ್, ಆಂಬಿಯೆಂಟ್ ಲೈಟಿಂಗ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಆಲ್-ವೀಲ್ ಡಿಸ್ಕ್ ಬ್ರೇಕ್ ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಮಹೀಂದ್ರಾ ಎಕ್ಸ್ಇವಿ 9ಇ (Mahindra XEV 9e):
ಇದು ಕೂಡ ಎಸ್‌ಯುವಿಯಾಗಿದ್ದು, 'ವಿನ್‌ಫಾಸ್ಟ್ ವಿಎಫ್7'ಗೆ ಬದಲಿ ಆಯ್ಕೆಯಾಗಲಿದೆ. ಕನಿಷ್ಠ ರೂ.21.90 ಲಕ್ಷ ಮತ್ತು ಗರಿಷ್ಠ ರೂ.31.25 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಪಡೆದಿದೆ. ಎವರೆಸ್ಟ್ ವೈಟ್, ರೂಬಿ ವೆಲ್ವೆಟ್, ಸ್ಟೆಲ್ತ್ ಬ್ಲ್ಯಾಕ್, ಡೆಸರ್ಟ್ ಮಿಸ್ಟ್, ನೆಬ್ಯುಲಾ ಬ್ಲೂ, ಡೀಪ್ ಫಾರೆಸ್ಟ್ ಹಾಗೂ ಟ್ಯಾಂಗೋ ರೆಡ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಹೊಸ 'ಎಕ್ಸ್ಇವಿ 9ಇ' ಕಾರು 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. ಹೆಚ್ಚಿನ ಲಗೇಜ್ ತೆಗೆದುಕೊಂಡು ಹೋಗಲು 663 ಲೀಟರ್ ಸಾಮರ್ಥ್ಯದ ಬೂಟ್ ಸ್ಪೇಸ್‌ನ್ನು ಹೊಂದಿದೆ. 59 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಒಳಗೊಂಡಿದೆ. ಭರ್ತಿ ಚಾರ್ಜ್‌ನಲ್ಲಿ 542 ರೇಂಜ್ (ಮೈಲೇಜ್) ನೀಡುತ್ತದೆ. ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು 16-ಸ್ಪೀಕರ್ ಹರ್ಮನ್ ಕಾರ್ಡನ್ ಸೌಂಡ್ ಸಿಸ್ಟಮ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಇವಿ (Kia Carens Clavis EV):
ಇದೊಂದು ಎಂಪಿವಿಯಾಗಿದೆ. ಆದರೂ 'ವಿನ್‌ಫಾಸ್ಟ್ ವಿಎಫ್7'ಗೆ ಪರ್ಯಾಯವಾಗಲಿದೆ. ರೂ.17.99 ಲಕ್ಷದಿಂದ ರೂ.24.49 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುತ್ತದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಅರೋರಾ ಬ್ಲ್ಯಾಕ್ ಪರ್ಲ್, ಗ್ರಾವಿಟಿ ಗ್ರೇ, ಪ್ಯೂಟರ್ ಆಲಿವ್ ಮತ್ತು ಇಂಪೀರಿಯಲ್ ಬ್ಲೂ ಸೇರಿದಂತೆ ವಿವಿಧ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ.

ಈ ಕಾರು 42 ಮತ್ತು 51.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 404 ಕಿಲೋಮೀಟರ್ ಮತ್ತು 490 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. 7 ಆಸನಗಳನ್ನು ತನ್ನದಾಗಿಸಿಕೊಂಡಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು ಪನೋರಮಿಕ್ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications








