Tata: ಮುಂಬರುವ ಗಜ ಗಾತ್ರದ ಹೊಸ ಟಾಟಾ ಎಸ್‌ಯುವಿಗೆ 3 ಬದಲಿ ಕಾರುಗಳಿವು.. ಬೆಲೆ ಎಷ್ಟು, ವಿಶೇಷತೆಗಳೇನು?

ಅತಿ ಶೀಘ್ರದಲ್ಲೇ ಟಾಟಾ ಹ್ಯಾರಿಯರ್ ಪೆಟ್ರೋಲ್ (Tata Harrier Petrol) ಎಸ್‌ಯುವಿ ಬಿಡುಗಡೆಯಾಗಲಿದೆ. ಇದು ಸ್ಪರ್ಧಾತ್ಮಕ ಬೆಲೆಯಲ್ಲಿ ಗ್ರಾಹಕರ ಖರೀದಿಗೆ ದೊರೆಯುವ ಸಾಧ್ಯತೆಯಿದೆ. ರೂ.15.49 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿರಬಹುದು ಎಂದು ಅಂದಾಜಿಸಲಾಗಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸ ಹೊಂದಿದ್ದು, ವಿವಿಧ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಾಗುವ ಸಾಧ್ಯತೆಯಿದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2741 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಈ ಕಾರು 1.5-ಲೀಟರ್ ಜಿಡಿಐ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದೆ. 16.8 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡಬಹುದು ಎಂದು ಹೇಳಲಾಗಿದೆ. 5 ಆಸನಗಳನ್ನು ಹೊಂದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಡುಯಲ್ ಜೋನ್ ಆಟೋಮೆಟಿಕ್ ಎಸಿ ಮತ್ತು ಪನೊರೊಮಿಕ್ ಸನ್‌ರೂಫ್‌ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. 7-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

Best 3 Alternative Cars Upcoming Tata Harrier Petrol Suv Victoris Hyryder and Elevate

ನೀವು ಇದೇ 'ಟಾಟಾ ಹ್ಯಾರಿಯರ್ ಪೆಟ್ರೋಲ್'ಗೆ ಪರ್ಯಾಯವಾಗಿ ಮಾರುತಿ ಸುಜುಕಿ ವಿಕ್ಟೋರಿಸ್, ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ ಹಾಗೂ ಹೋಂಡಾ ಎಲಿವೇಟ್ ಕಾರುಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris):

ಇದೊಂದು ಜನಪ್ರಿಯ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದ್ದು, 'ಟಾಟಾ ಹ್ಯಾರಿಯರ್ ಪೆಟ್ರೋಲ್'ಗೆ ಬದಲಿ ಕಾರಾಗಿದೆ. ಅದಕ್ಕೆ ತಕ್ಕಂತೆ ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಸ್ಪ್ಲೆಂಡಿಡ್ ಸಿಲ್ವರ್, ಆರ್ಕ್ಟಿಕ್ ವೈಟ್, ಎಟರ್ನಲ್ ಬ್ಲೂ, ಸಿಜ್ಲಿಂಗ್ ರೆಡ್, ಬ್ಲೂಯಿಶ್ ಬ್ಲ್ಯಾಕ್, ಮ್ಯಾಗ್ಮಾ ಗ್ರೇ ಮತ್ತು ಮಿಸ್ಟಿಕ್ ಗ್ರೀನ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 210 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,600 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

Best 3 Alternative Cars Upcoming Tata Harrier Petrol Suv Victoris Hyryder and Elevate

ನೂತನ 'ವಿಕ್ಟೋರಿಸ್' 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ತನ್ನದಾಗಿಸಿಕೊಂಡಿದೆ. 21 ರಿಂದ 28.65 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 10.1-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಹಾಗೂ ಪನೋರಮಿಕ್ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder):

ಈ ಕಾರನ್ನು 'ಟಾಟಾ ಹ್ಯಾರಿಯರ್ ಪೆಟ್ರೋಲ್'ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ, ಸ್ಪೋರ್ಟಿನ್ ರೆಡ್, ಮಿಡ್‌ನೈಟ್ ಬ್ಲ್ಯಾಕ್, ಕೇವ್ ಬ್ಲ್ಯಾಕ್ ಹಾಗೂ ಸ್ಪೀಡಿ ಬ್ಲೂ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 210 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,600 ಮಿ.ಮೀ ವೀಲ್‌ಬೇಸ್‌ನ್ನು ಒಳಗೊಂಡಿದೆ.

Best 3 Alternative Cars Upcoming Tata Harrier Petrol Suv Victoris Hyryder and Elevate

ಹೊಸ 'ಹೈರೈಡರ್' 1.5-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀಟರ್ ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 28 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಪಡೆದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಹಾಗೂ ಯುಎಸ್‌‍ಬಿ ಚಾರ್ಜಿಂಗ್ ಪೋರ್ಟ್‌ನಂತಹ ನಾನಾ ಬಗೆಯ ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಹೋಂಡಾ ಎಲಿವೇಟ್ (Honda Elevate):

ಇದು ಪ್ರಖ್ಯಾತ ಎಸ್‌ಯುವಿಯಾಗಿದ್ದು, 'ಟಾಟಾ ಹ್ಯಾರಿಯರ್ ಪೆಟ್ರೋಲ್'ಗೆ ಬದಲಾಗಿಯೂ ಮನೆಗೆ ತರಬಹುದು. ರೂ.11.91 ಲಕ್ಷದಿಂದ ರೂ.16.73 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಕರ್ಷಕವಾದ ವಿನ್ಯಾಸವನ್ನು ಒಳಗೊಂಡಿದೆ. ಗೋಲ್ಡನ್ ಬ್ರೌನ್ ಮೆಟಾಲಿಕ್, ಮೆಟಿಯೊರಾಯ್ಡ್ ಗ್ರೇ ಮೆಟಾಲಿಕ್, ರೇಡಿಯಂಟ್ ರೆಡ್ ಮೆಟಾಲಿಕ್, ಲೂನಾರ್ ಸಿಲ್ವರ್ ಮೆಟಾಲಿಕ್ ಹಾಗೂ ಪ್ಲಾಟಿನಂ ವೈಟ್ ಪರ್ಲ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 220 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,650 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.

Best 3 Alternative Cars Upcoming Tata Harrier Petrol Suv Victoris Hyryder and Elevate

ನೂತನ 'ಎಲಿವೇಟ್' 1.5-ಲೀಟರ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 15 ರಿಂದ 17 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಒಳಗೊಂಡಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜರ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.

More from DriveSpark

Article Published On: Wednesday, December 31, 2025, 15:58 [IST]
English summary
Best 3 alternative cars upcoming tata harrier petrol suv victoris hyryder and elevate
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+