Nexon: 5-ಸೀಟರ್.. ಅಗ್ಗದ ಟಾಟಾ ನೆಕ್ಸಾನ್ ಎಲೆಕ್ಟ್ರಿಕ್ ಕಾರಿಗೆ ಪರ್ಯಾಯವಾಗಬಲ್ಲ 3 ಜನಪ್ರಿಯ ಕಾರುಗಳಿವು!
ಟಾಟಾ ನೆಕ್ಸಾನ್ (Tata Nexon) ಪ್ರಮುಖ ಎಲೆಕ್ಟ್ರಿಕ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ಕನಿಷ್ಠ ರೂ.12.49 ಲಕ್ಷ ಹಾಗೂ ಗರಿಷ್ಠ ರೂ.17.49 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 45 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಮತ್ತು 46.08 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ನ್ನು ತನ್ನದಾಗಿಸಿಕೊಂಡಿದೆ. ಪೂರ್ತಿ ಚಾರ್ಜ್‌ನಲ್ಲಿ 275 ರಿಂದ 489 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ತುಂಬಾ ಚೆನ್ನಾಗಿರುವ ವಿನ್ಯಾಸವನ್ನು ಪಡೆದಿದೆ. ಎಂಪವರ್ಡ್ ಆಕ್ಸೈಡ್, ಪ್ರಿಸ್ಟೈನ್ ವೈಟ್, ಇಂಟೆನ್ಸಿ ಟೀಲ್, ಡೇಟೋನಾ ಗ್ರೇ, ಫಿಯರ್‌ಲೆಸ್ ಪರ್ಪಲ್ & ಕ್ರಿಯೇಟಿವ್ ಓಷನ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.
ಈ ಕಾರು 5 ಆಸನಗಳನ್ನು ಒಳಗೊಂಡಿದೆ. 350 ಲೀಟರ್‌ನಷ್ಟು ಬೂಟ್ ಸ್ಪೇನ್‌ನ್ನು ಹೊಂದಿದೆ. 12.3-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್) ಮತ್ತು 360-ಡಿಗ್ರಿ ಕ್ಯಾಮೆರಾನ್ನು ಪಡಿದಿವೆ. ನೀವು ಇದೇ 'ನೆಕ್ಸಾನ್ ಇವಿ'ಗೆ ಬದಲಾಗಿ ಈ 3 ಪರ್ಯಾಯ ಕಾರುಗಳನ್ನು ಖರೀದಿ ಮಾಡಬಹುದು.

ಎಂಜಿ ವಿಂಡ್ಸರ್ ಇವಿ (MG Windsor EV):
ಇದು ಕೂಡ ಎಲೆಕ್ಟ್ರಿಕ್ ಎಸ್‌ಯುವಿಯಾಗಿದೆ. 'ಟಾಟಾ ನೆಕ್ಸಾನ್ ಇವಿ'ಗೆ ಬದಲಿ ಆಯ್ಕೆಯಾಗಲಿದೆ. ರೂ.14 ಲಕ್ಷದಿಂದ ರೂ.18.39 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 38 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಹಾಗೂ 52.9 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 332 ರಿಂದ 449 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಉತ್ತಮವಾದ ವಿನ್ಯಾಸವನ್ನು ಪಡೆದಿದೆ. ಸೆಲಾಡಾನ್ ಬ್ಲೂ, ಗ್ಲೇಜ್ ರೆಡ್ ಮತ್ತು ಅರೋರಾ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ.
ನೂತನ ವಿಂಡ್ಸರ್ 5 ಆಸನ ಆಯ್ಕೆ ವ್ಯವಸ್ಥೆಯನ್ನು ಹೊಂದಿದೆ. 15.6-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜಿಂಗ್ ಪೋರ್ಟ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಹ್ಯುಂಡೈ ಕ್ರೆಟಾ ಎಲೆಕ್ಟ್ರಿಕ್ (Hyundai Creta Electric):
ಈ ಎಲೆಕ್ಟ್ರಿಕ್ ಎಸ್‌ಯುವಿಯು 'ಟಾಟಾ ನೆಕ್ಸಾನ್ ಇವಿ'ಗೆ ಪರ್ಯಾಯವಾಗಲಿದೆ. ಕನಿಷ್ಠ ರೂ.17.99 ಲಕ್ಷ ಮತ್ತು ಗರಿಷ್ಠ ರೂ.24.55 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ. 42 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) & 51.4 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಭರ್ತಿ ಚಾರ್ಜ್‌ನಲ್ಲಿ 390 ರಿಂದ 473 ಕಿಲೋಮೀಟರ್ ರೇಂಜ್ (ಮೈಲೇಜ್) ನೀಡುತ್ತದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ಓಷನ್ ಬ್ಲೂ ಮ್ಯಾಟ್ ಮ್ಯಾಟ್ ಮತ್ತು ಫಿಯರಿ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಹೊಸ ಕ್ರೆಟಾ ಎಲೆಕ್ಟ್ರಿಕ್ 5 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಸ್ಕ್ರೀನ್, ಪನೋರಮಿಕ್ ಸನ್‌ರೂಫ್ ಮತ್ತು ಡುಯಲ್ ಜೋನ್ ಆಟೋ ಎಸಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ ರಿವರ್ಸ್ ಪಾರ್ಕಿಂಗ್ ಕ್ಯಾಮೆರಾವನ್ನು ತನ್ನದಾಗಿಸಿಕೊಂಡಿದೆ.

ವಿನ್‌ಫಾಸ್ಟ್ ವಿಎಫ್6 (VinFast VF6):
ಇದೊಂದು ಎಲೆಕ್ಟ್ರಿಕ್ ಎಸ್‌ಯುವಿಯಾಗಿದ್ದು, 'ಟಾಟಾ ನೆಕ್ಸಾನ್ ಇವಿ'ಗೆ ಬದಲಿ ಕಾರಾಗಿ ಹೊರಹೊಮ್ಮಿದೆ. ರೂ.16.49 ಲಕ್ಷದಿಂದ ರೂ.18.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 59.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಪಡೆದಿದೆ. ಸಂಪೂರ್ಣ ಚಾರ್ಜ್‌ನಲ್ಲಿ 463 ರಿಂದ 468 ಕಿಲೋಮೀಟರ್ ರೇಂಜ್ (ಮೈಲೇಜ್) ಕೊಡುತ್ತದೆ. ಅತ್ಯಾಧುನಿಕವಾದ ವಿನ್ಯಾಸವನ್ನು ತನ್ನದಾಗಿಸಿಕೊಂಡಿದೆ. ಕ್ರಿಮ್ಸನ್ ರೆಡ್, ಜೆನಿತ್ ಗ್ರೇ, ಅರ್ಬನ್ ಮಿಂಟ್ ಮತ್ತು ಜೆಟ್ ಬ್ಲ್ಯಾಕ್ ಹಲವು ಬಣ್ಣದೊಂದಿಗೆ ದೊರೆಯುತ್ತದೆ.

ನೂತನ ವಿಎಫ್6 ಕಾರು 5 ಆಸನಗಳನ್ನು ಪಡೆದಿದೆ. 12.9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್ ಜೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಮತ್ತು 8 ಸ್ಪೀಕರ್ ಸೌಂಡ್ ಸಿಸ್ಟಮ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳು, ಲೆವೆಲ್ 2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.


Click it and Unblock the Notifications