Thar: 9.99 ಲಕ್ಷ.. ಹೊಸ ಮಹೀಂದ್ರಾ ಥಾರ್‌ಗೆ ಬದಲಿ ಆಯ್ಕೆಯಾಗಬಲ್ಲ 3 ಎಸ್‌ಯುವಿಗಳಿವು.. ಬೆಲೆ ಎಷ್ಟು, ವಿಶೇಷತೆಗಳೇನು?
ಇತ್ತೀಚೆಗೆ 2025ರ ನೂತನ ಮಹೀಂದ್ರಾ ಥಾರ್ 3-ಡೋರ್ ಫೇಸ್‌ಲಿಫ್ಟ್ (Mahindra Thar 3-Door Facelift) ಆಫ್-ರೋಡ್ ಎಸ್‌ಯುವಿಯನ್ನು ಬಿಡುಗಡೆಗೊಳಿಸಲಾಯಿತು. ಇದು ಕನಿಷ್ಠ ರೂ.9.99 ಲಕ್ಷ ಹಾಗೂ ಗರಿಷ್ಠ ರೂ.16.25 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 2-ಲೀಟರ್ ಟರ್ಬೋಚಾರ್ಜ್ಡ್ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ 2.2-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 15 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 4 ಆಸನಗಳನ್ನು ಒಳಗೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 4 ಸ್ಪೀಕರ್ ಸೌಂಡ್ ಸಿಸ್ಟಮ್, ಸ್ಲೈಡಿಂಗ್ ಆರ್ಮ್‌ರೆಸ್ಟ್ ಹಾಗೂ ಟೈಪ್-ಸಿ ಯುಎಸ್‌ಬಿ ಪೋರ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ ಡುಯಲ್ ಏರ್‌ಬ್ಯಾಗ್‌ಗಳನ್ನು ತನ್ನಾಗಿಸಿಕೊಂಡಿದೆ. ಇದೇ ಹೊಸ 'ಥಾರ್'ಗೆ ಈ 3 ಎಸ್‌ಯುವಿಗಳು ಪರ್ಯಾಯ ಆಯ್ಕೆಯಾಗಬಲ್ಲವು. ಬನ್ನಿ.. ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಜಿಮ್ನಿ (Maruti Suzuki Jimny):
ಇದನ್ನು ಕೂಡ 'ಮಹೀಂದ್ರಾ ಥಾರ್ 3-ಡೋರ್ ಫೇಸ್‌ಲಿಫ್ಟ್'ಗೆ ಬದಲಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ.12.31 ಲಕ್ಷದಿಂದ ರೂ.14.45 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತುತ್ತಮವಾದ ವಿನ್ಯಾಸ ಹೊಂದಿದೆ. ಸಿಜ್ಲಿಂಗ್ ರೆಡ್, ಗ್ರಾನೈಟ್ ಗ್ರೇ, ಬ್ಲ್ಯೂಯಿಸ್ ಬ್ಲ್ಯಾಕ್, ನೆಕ್ಸಾ ಬ್ಲ್ಯೂ ಹಾಗೂ ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಎಸ್‌ಯುವಿಯು 1.5-ಲೀಟರ್ 4-ಸಿಲಿಂಡರ್ ಪೆಟ್ರೋಲ್ ಎಂಜಿನ್ ಹೊಂದಿದ್ದು, 5-ಸ್ಪೀಡ್ ಮ್ಯಾನುವಲ್/4-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 16 ರಿಂದ 17 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 155 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಒಳಗೊಂಡಿದೆ. ಕೇವಲ 13.64 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.
ನೂತನ ಜಿಮ್ನಿ 4 ಆಸನಗಳನ್ನು ಹೊಂದಿದೆ. ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 208 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಪಡೆದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಆಟೋ ಎಸಿ ಹಾಗೂ ಪುಶ್ ಬಟನ್ ಸ್ಟಾರ್ಟ್/ಸ್ಟಾಪ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು 3-ಪಾಯಿಂಟ್ ಸೀಟ್ ಬೆಲ್ಟ್‌ಗಳನ್ನು ಒಳಗೊಂಡಿದೆ.

ಫೋರ್ಸ್ ಗೂರ್ಖಾ (Force Gurkha):
ಈ ಎಸ್‌ಯುವಿಯು 'ಮಹೀಂದ್ರಾ ಥಾರ್ 3-ಡೋರ್ ಫೇಸ್‌ಲಿಫ್ಟ್'ಗೆ ಪರ್ಯಾಯವಾಗಲಿದೆ. ರೂ.15.95 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದ್ದು, ನೋಡುಗರ ಕಣ್ಣು ಕುಕ್ಕುವಂತಿದೆ. ಗ್ರೀನ್, ರೆಡ್, ವೈಟ್ ಹಾಗೂ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.
ಇದು 2.6-ಲೀಟರ್ ಡೀಸೆಲ್ ಎಂಜಿನ್ ಒಳಗೊಂಡಿದ್ದು, 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 9.5 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 120 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 18 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ನೂತನ ಫೋರ್ಸ್ ಗೂರ್ಖಾ 4 ಆಸನಗಳನ್ನು ಹೊಂದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಮ್ಯಾನುವಲ್ ಎಸಿ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ರೇರ್ ಪಾರ್ಕಿಂಗ್ ಸೆನ್ಸಾರ್‌ಗಳನ್ನು ಒಳಗೊಂಡಿದೆ.
ಟಾಟಾ ಸಫಾರಿ (Tata Safari):
ಇದು ಸಹ 'ಮಹೀಂದ್ರಾ ಥಾರ್ 3-ಡೋರ್ ಫೇಸ್‌ಲಿಫ್ಟ್'ಗೆ ಬದಲಿ ಆಯ್ಕೆಯಾಗಲಿದೆ. ಕನಿಷ್ಠ ರೂ.14.66 ಲಕ್ಷ ಮತ್ತು ಗರಿಷ್ಠ ರೂ.25.96 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಒಬೆರಾನ್ ಬ್ಲ್ಯಾಕ್, ಸ್ಟಾರ್‌ಡಸ್ಟ್ ಆಶ್, ಸ್ಟೆಲ್ಲರ್ ಫ್ರಾಸ್ಟ್ ಹಾಗೂ ಸೂಪರ್‌ನೋವಾ ಕಾಪರ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 6/ 7 ಆಸನಗಳನ್ನು ಪಡೆದಿದೆ.

ಈ ಎಸ್‌ಯುವಿಯು 2-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 14.75 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, 10 ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಹಾಗೂ ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications