Brezza: ಮಾರುತಿ ಸುಜುಕಿ ಬ್ರೆಝಾಗೆ ಸವಾಲೆಸೆಯಬಲ್ಲ 3 ಪರ್ಯಾಯ ಕಾರುಗಳಿವು.. ಬೆಲೆ ಎಷ್ಟು, ವಿಶೇಷತೆಗಳೇನು?
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ರೂ.8.69 ಲಕ್ಷದಿಂದ ರೂ.14.14 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಖರೀದಿಗೆ ದೊರೆಯುತ್ತದೆ. 1.5-ಲೀ. ಪೆಟ್ರೋಲ್ & ಸಿಎನ್‌ಜಿ ಎಂಜಿನ್ ಹೊಂದಿದ್ದು, 17.38 ರಿಂದ 25.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು. ವಿಶೇಷವಾಗಿ ಬ್ರೆಝಾಗೆ ಪರ್ಯಾಯವಾಗಿ ಗ್ರಾಹಕರು ಈ 3 ಕಾರುಗಳನ್ನು ತೆಗೆದುಕೊಳ್ಳಬಹುದು. ಬನ್ನಿ, ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ಮಾಹಿತಿಯನ್ನು ತಿಳಿಯೋಣ.
ಟಾಟಾ ಪಂಚ್ (Tata Punch): ಇದೊಂದು ಮೈಕ್ರೋ ಎಸ್‌ಯುವಿಯಾಗಿ ಗುರುತಿಸಿಕೊಂಡಿದೆ. ರೂ.6.20 ಲಕ್ಷದಿಂದ ರೂ.10.32 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀ. ಸಾಮರ್ಥ್ಯದ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 18.8 ರಿಂದ 26.99 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ ಒಟ್ಟು 5 ಆಸನಗಳಿವೆ.

ನೂತನ ಟಾಟಾ ಪಂಚ್ ಕಾರು ಹತ್ತಾರು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಬಹುಮುಖ್ಯವಾಗಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಯುಎಸ್‌ಬಿ ಟೈಪ್-ಸಿ ಚಾರ್ಜಿಂಗ್ ಪೋರ್ಟ್, ಸನ್‌ರೂಫ್ ಹಾಗೂ ರೇರ್ ಎಸಿ ವೆಂಟ್‌ಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಹ್ಯುಂಡೈ ವೆನ್ಯೂ (Hyundai Venue): ಈ ಎಸ್‌ಯುವಿ, ರೂ.7.94 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಗ್ರಾಹಕರ ಖರೀದಿಗೆ ಲಭ್ಯವಿದೆ. 1.2 ಲೀ. ಪೆಟ್ರೋಲ್, 1-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 22.7 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಹೊರಭಾಗದಲ್ಲಿಯೂ ಆಕರ್ಷಕವಾದ ವಿನ್ಯಾಸವನ್ನು ಹೊಂದಿದ್ದು, ಟೈಟಾನ್ ಗ್ರೇ, ಡೆನಿಮ್ ಬ್ಲೂ, ಫಿಯರಿ ರೆಡ್ & ಅಟ್ಲಾಸ್ ವೈಟ್ ಒಳಗೊಂಡಂತೆ ಹಲವು ಬಣ್ಣಗಳೊಂದಿಗೂ ಸಿಗುತ್ತದೆ.

ಹೊಸ ಹ್ಯುಂಡೈ ವೆನ್ಯೂ ಕಾರಿನಲ್ಲಿ 5 ಜನರು ಓಡಾಟ ನಡೆಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಏರ್ ಪ್ಯೂರಿಫೈಯರ್, ಸನ್‌ರೂಫ್, ಪುಶ್-ಬಟನ್ ಸ್ಟಾರ್ಟ್ ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು ಮತ್ತು ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಹೊಂದಿದೆ.

ಕಿಯಾ ಸೊನೆಟ್ (Kia Sonet): ಇದು ರೂ.8 ರಿಂದ ರೂ.15.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 18.6 ರಿಂದ 22.3 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಮಂದಿ ಸಂಚಾರ ನಡೆಸಬಹುದು.
ನೂತನ ಕಿಯಾ ಸೊನೆಟ್ ಎಸ್‌ಯುವಿ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಡಿಸ್‌ಪ್ಲೇ, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್, ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು, ಸನ್‌ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಡ್ರೈವ್ ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋ ಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications