28 Km ಮೈಲೇಜ್.. 7.89 ಲಕ್ಷ, 6 ಏರ್‌ಬ್ಯಾಗ್.. ವಿಶ್ವಾಸಾರ್ಹ ಟೊಯೊಟಾ ಟೈಸರ್‌ಗೆ ಬದಲಿಯಾಗಬಲ್ಲ 3 ಎಸ್‌ಯುವಿಗಳಿವು!
ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor) ಜನಪ್ರಿಯ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇತ್ತೀಚೆಗೆ ಈ ಕಾರಿನ ಎಲ್ಲ ರೂಪಾಂತರಗಳನ್ನು (ವೇರಿಯೆಂಟ್) 6-ಏರ್‌ಬ್ಯಾಗ್‌ನೊಂದಿಗೆ ನವೀಕರಿಸಿಯು ಮಾರಾಟಕ್ಕೆ ತರಲಾಗಿತ್ತು. ಸದ್ಯ ಹೊಸ ಟೈಸರ್ ರೂ.7.89 ಲಕ್ಷದಿಂದ ರೂ.13.19 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1-ಲೀಟರ್ ಟರ್ಬೊ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 19 ರಿಂದ 28 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ವಿಶೇಷವಾಗಿ ಇದೇ ಟೊಯೊಟಾ ಟೈಸರ್‌ಗೆ ಈ 3 ಎಸ್‌ಯುವಿಗಳು ಪರ್ಯಾಯ ಆಯ್ಕೆಯಾಗಬಲ್ಲವು. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಸ್ಕೋಡಾ ಕೈಲಾಕ್ (Skoda Kylaq):
ಈ ಎಸ್‌ಯುವಿಯನ್ನು ಟೊಯೊಟಾ ಟೈಸರ್‌ಗೆ ಬದಲಾಗಿ ಖರೀದಿ ಮಾಡಬಹುದು. ಇದು ರೂ.8.25 ಲಕ್ಷದಿಂದ ರೂ.13.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಸ್ಪ್ಲಿಟ್ ಎಲ್ಇಡಿ ಹೆಡ್‌ಲೈಟ್‌ಗಳು, ಸ್ಲಿಮ್ಡ್-ಡೌನ್ ಗ್ರಿಲ್, ಬ್ಲ್ಯಾಕ್ ಕ್ಲಾಡಿಂಗ್ ಮತ್ತು ಸಿಲ್ವರ್ ಫಾಕ್ಸ್ ಬ್ಯಾಷ್ ಪ್ಲೇಟ್‌ನ್ನು ಪಡೆದಿದೆ. ಬ್ರಿಲಿಯಂಟ್ ಸಿಲ್ವರ್, ಲಾವಾ ಬ್ಲೂ, ಆಲಿವ್ ಗೋಲ್ಡ್, ಕಾರ್ಬನ್ ಸ್ಟೀಲ್ ಮತ್ತು ಟೊರ್ನಾಡೊ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ನೂತನ ಕೈಲಾಕ್ ಶಕ್ತಿಯುತವಾದ ಪವರ್‌ಟ್ರೇನ್‌ನ್ನು ಒಳಗೊಂಡಿದೆ. 1.0-ಲೀಟರ್ ಟಿಎಸ್‌ಟಿ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಹೊಂದಿದೆ. 6-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 18 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳಿದ್ದು, 446 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ತನ್ನದಾಗಿಸಿಕೊಂಡಿದೆ. 2566 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.
ಹೊಸ ಕೈಲಾಕ್ ಎಸ್‌ಯುವಿಯು 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು, ಟು-ಸ್ಪೋಕ್ ಸ್ಟೀರಿಂಗ್ ವೀಲ್, ಸನ್‌ರೂಫ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್), ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಟಾಟಾ ನೆಕ್ಸಾನ್ (Tata Nexon):
ಇದನ್ನು ಕೂಡ ಟೊಯೊಟಾ ಟೈಸರ್‌ಗೆ ಪರ್ಯಾಯವಾಗಿ ಕೊಂಡುಕೊಳ್ಳಬಹುದು. ಅದಕ್ಕೆ ತಕ್ಕಂತೆ ರೂ. 8 ಲಕ್ಷದಿಂದ ರೂ.15.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಒಳಗೊಂಡಿದೆ. ರಾಯಲ್ ಬ್ಲೂ, ಪ್ಯೂರ್ ಗ್ರೇ, ಡೇಟೋನಾ ಗ್ರೇ, ಓಷನ್ ಬ್ಲೂ ಮತ್ತು ಕಾರ್ಬನ್ ಬ್ಲ್ಯಾಕ್ ಸೇರಿದಂತೆ ವಿವಿಧ ಬಣ್ಣಗಳೊಂದಿಗೂ ಸಿಗುತ್ತದೆ.
ನೂತನ ನೆಕ್ಸಾನ್ 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ & 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 17 ರಿಂದ 24 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಮಾರುತಿ ಸುಜುಕಿ ಬ್ರೆಝಾ (Maruti Suzuki Brezza):
ಈ ಕಾರನ್ನು ಟೊಯೊಟಾ ಟೈಸರ್‌ಗೆ ಬದಲಾಗಿ ತೆಗೆದುಕೊಳ್ಳಬಹುದು. ಇದು ರೂ.8.69 ಲಕ್ಷದಿಂದ ರೂ.14.14 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಬ್ರೇವ್ ಖಾಖಿ, ಸಿಜ್ಲಿಂಗ್ ರೆಡ್, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್, ಪರ್ಲ್ ಆರ್ಕ್ಟಿಕ್ ವೈಟ್ ಮತ್ತು ಪರ್ಲ್ ಮಿಡ್ನೈಟ್ ಬ್ಲ್ಯಾಕ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ದೊರೆಯುತ್ತದೆ.

ಹೊಸ ಬ್ರೆಝಾ 1.5-ಲೀಟರ್ ಪೆಟ್ರೋಲ್, 1.5-ಲೀಟರ್ ಮೈಲ್ಡ್ ಹೈಬ್ರಿಡ್ (ಪೆಟ್ರೋಲ್ + ಎಲೆಕ್ಟ್ರಿಕ್) ಮತ್ತು 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 17 ರಿಂದ 26 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ತನ್ನದಾಗಿಸಿಕೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ರೇರ್-ಎಸಿ ವೆಂಟ್‌ಗಳು ಹಾಗೂ ಕೀಲೆಸ್ ಎಂಟ್ರಿ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯಾ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.


Click it and Unblock the Notifications