5-ಸೀಟರ್, 6 ಲಕ್ಷ.. 20.38 ಕಿ.ಮೀ ಮೈಲೇಜ್.. ನೂತನ ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್‌ಗೆ 3 ಬದಲಿ ಎಸ್‌ಯುವಿಗಳಿವು!
ನೂತನ 2025ರ ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್ (Renault Kiger Facelift) ಕಾರನ್ನು ಭಾನುವಾರ ಬಿಡುಗಡೆಗೊಳಿಸಲಾಯಿತು. ಇದೊಂದು ಎಸ್‌ಯುವಿಯಾಗಿದ್ದು, ರೂ.6.29 ಲಕ್ಷದಿಂದ ರೂ.11.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಪೆಟ್ರೋಲ್ ಎಂಜಿನ್ ಪಡೆದಿದ್ದು, 19.83 ರಿಂದ 20.38 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಹೊಂದಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಫುಲ್ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ರೇರ್ ಎಸಿ ವೆಂಟ್‌ಗಳು ಮತ್ತು ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ. ನೀವು ಇದೇ 'ಕೈಗರ್'ಗೆ ಪರ್ಯಾಯವಾಗಿ ಈ 3 ಕಾರುಗಳನ್ನು ಖರೀದಿ ಮಾಡಬಹುದು. ಬನ್ನಿ, ಆ ಬಗ್ಗೆ ಹೆಚ್ಚಿನ ವಿವರಗಳನ್ನು ತಿಳಿಯೋಣ.
ಮಾರುತಿ ಸುಜುಕಿ ಬ್ರೆಝಾ (Maruti Suzuki Brezza):
ಇದು ಕೂಡ ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್‌ಗೆ ಬದಲಿ ಎಸ್‌ಯುವಿಯಾಗಿದೆ. ಕನಿಷ್ಠ ರೂ.8.69 ಲಕ್ಷ ಹಾಗೂ ಗರಿಷ್ಠ ರೂ.14 ಲಕ್ಷವರೆಗೆ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. ಅತ್ಯಾಧುನಿಕವಾದ ವಿನ್ಯಾಸವನ್ನು ಹೊಂದಿದೆ. ಸಿಜ್ಲಿಂಗ್ ರೆಡ್, ಬ್ರೇವ್ ಖಾಕಿ, ಮ್ಯಾಗ್ಮಾ ಗ್ರೇ, ಸ್ಪ್ಲೆಂಡಿಡ್ ಸಿಲ್ವರ್ ಮತ್ತು ಪರ್ಲ್ ಆರ್ಕ್ಟಿಕ್ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ.

ಈ ಕಾರು 1.5-ಲೀಟರ್ ಮೈಲ್ಡ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಪಡೆದಿದೆ. 5-ಸ್ಪೀಡ್ ಮ್ಯಾನುವಲ್/ 6-ಸ್ಪೀಡ್ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 17 ರಿಂದ 25.51 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 159 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 12.68 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಹೊಂದಲಿದೆ.
ನೂತನ ಬ್ರೆಝಾ 5 ಆಸನಗಳನ್ನು ಒಳಗೊಂಡಿದೆ. 9-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಯುಎಸ್‌ಬಿ ಫಾಸ್ಟ್ ಚಾರ್ಜರ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಪುಶ್-ಬಟನ್ ಸ್ಟಾರ್ಟ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳನ್ನು ತನ್ನಾದಾಗಿಸಿಕೊಂಡಿದೆ.

ಟಾಟಾ ನೆಕ್ಸಾನ್ (Tata Nexon)
ಈ ಎಸ್‌ಯುವಿಯನ್ನು ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್‌ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ಅದಕ್ಕೆ ಅನುಗುಣವಾಗಿ ರೂ.8 ಲಕ್ಷದಿಂದ ರೂ.15.60 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ಓಷನ್ ಬ್ಲೂ, ಪ್ಯೂರ್ ಗ್ರೇ, ಪ್ಯೂರ್ ವೈಟ್ ಮತ್ತು ಗ್ರಾಸ್‌ಲ್ಯಾಂಡ್ ಬೀಜ್ ಒಳಗೊಂಡಂತೆ ಹಲವು ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ.
ಹೊಸ ನೆಕ್ಸಾನ್ ಕಾರು 1.2-ಲೀಟರ್ ಟರ್ಬೊ ಪೆಟ್ರೋಲ್, 1.5-ಲೀಟರ್ ಡೀಸೆಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 17 ರಿಂದ 24 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 10.25 ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ ಮತ್ತು 9-ಸ್ಪೀಕರ್ ಜೆಬಿಎಲ್ ಸೌಂಡ್ ಸಿಸ್ಟಮ್ ಒಳಗೊಂಡನಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.

ಸ್ಕೋಡಾ ಕೈಲಾಕ್ (Skoda Kylaq):
ಇದನ್ನು ಸಹ ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್‌ಗೆ ಬದಲಾಗಿ ಕೊಂಡುಕೊಳ್ಳಬಹುದು. ಕನಿಷ್ಠ ರೂ.8.25 ಲಕ್ಷ ಹಾಗೂ ಗರಿಷ್ಠ ರೂ.13.99 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಅಚ್ಚುಕಟ್ಟಾಗಿರುವ ವಿನ್ಯಾಸವನ್ನು ಹೊಂದಿದೆ. ಬ್ರಿಲಿಯಂಟ್ ಸಿಲ್ವರ್, ಲಾವಾ ಬ್ಲೂ, ಆಲಿವ್ ಗೋಲ್ಡ್, ಕಾರ್ಬನ್ ಸ್ಟೀಲ್ ಮತ್ತು ಟೊರ್ನಾಡೊ ರೆಡ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ.

ಈ ಕಾರು 5 ಆಸನಗಳನ್ನು ಪಡೆದಿದೆ. 1.0-ಲೀಟರ್ ಟಿಎಸ್‌ಟಿ ಪೆಟ್ರೋಲ್ ಎಂಜಿನ್ ಹಾಗೂ 6-ಸ್ಪೀಡ್ ಮ್ಯಾನುವಲ್/ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಹೊಂದಿದೆ. 10-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 8-ಇಂಚಿರುವ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.


Click it and Unblock the Notifications








