ವಿಶ್ವಾಸಾರ್ಹ ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒಗೆ ಮೂರು ಪರ್ಯಾಯ ಕಾರುಗಳಿವು.. ಬೆಲೆ ಇಷ್ಟೇನಾ, ಹೇಗಿವೆ?
ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO) ಜನಪ್ರಿಯ ಕಾಂಪ್ಯಾಕ್ಟ್ ಎಸ್‌ಯುವಿಯಾಗಿ ಹೊರಹೊಮ್ಮಿದೆ. ಇದು ರೂ.7.99 ಲಕ್ಷದಿಂದ ರೂ.15.56 ಲಕ್ಷ (ಎಕ್ಸ್-ಶೋರೂಂ) ಬೆಲೆಯಲ್ಲಿ ಖರೀದಿಗೆ ದೊರೆಯುತ್ತದೆ. ಪೆಟ್ರೋಲ್ ಹಾಗೂ ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 17.96 ರಿಂದ 21.2 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಈ ಕಾರಿನಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು. 10.25-ಇಂಚಿನ ಡುಯಲ್ ಡಿಸ್‌ಪ್ಲೇ, ಡುಯಲ್-ಝೋನ್ ಎಸಿ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ. ಈ ಎಕ್ಸ್‌ಯುವಿ 3ಎಕ್ಸ್ಒಗೆ ಪರ್ಯಾಯವಾಗಿ ಗ್ರಾಹಕರು ಈ 3 ಕಾರುಗಳನ್ನು ಖರೀದಿ ಮಾಡಬಹುದು. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.
ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor): ಇದೊಂದು ಎಸ್‌ಯುವಿಯಾಗಿದೆ. ರೂ.7.74 ಲಕ್ಷದಿಂದ ರೂ.13.04 (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2.ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1-ಟರ್ಬೊ ಪೆಟ್ರೋಲ್ & 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19.8 ರಿಂದ 28.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿ 5 ಮಂದಿ ಸುಲಭವಾಗಿ ಓಡಾಟ ನಡೆಸಬಹುದು.

ಈ ಕಾರು 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳು ಮತ್ತು ರೇರ್ ಎಸಿ ವೆಂಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಲುಸೆಂಟ್ ಆರೆಂಜ್, ಸ್ಪೋರ್ಟಿನ್ ರೆಡ್, ಕೆಫೆ ವೈಟ್, ಎಂಟೈಸಿಂಗ್ ಸಿಲ್ವರ್ ಮತ್ತು ಗೇಮಿಂಗ್ ಗ್ರೇ ಒಳಗೊಂಡಂತೆ ವಿವಿಧ ಬಣ್ಣಗಳೊಂದಿಗೂ ದೊರೆಯುತ್ತದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಹ್ಯುಂಡೈ ವೆನ್ಯೂ (Hyundai Venue): ಈ ಎಸ್‌ಯುವಿ ರೂ.7.94 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ) ದರದಲ್ಲಿ ಸಿಗುತ್ತದೆ. 1.2 ಲೀಟರ್ ಪೆಟ್ರೋಲ್, 1.0 ಲೀಟರ್ ಟರ್ಬೊ ಪೆಟ್ರೋಲ್ ಮತ್ತು 1.5 ಲೀಟರ್ ಡಿಸೇಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 17 ರಿಂದ 22.7 ರಿಂದ ಕೆಎಂಪಿಎಲ್‌ವರೆಗೆ ಕೊಡುತ್ತದೆ.

ನೂತನ ಹ್ಯುಂಡೈ ವೆನ್ಯೂ ಕಾರು 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 8-ಇಂಚಿನ ಸೆಮಿ-ಡಿಜಿಟಲ್ ಡ್ರೈವರ್ಸ್ ಡಿಸ್‌ಪ್ಲೇ, ಏರ್ ಪ್ಯೂರಿಫೈಯರ್, ಆಟೋಮೆಟಿಕ್ ಎಸಿ ಪುಶ್ ಬಟನ್ ಸ್ಟಾರ್ಟ್/ ಸ್ಟಾಪ್ ಮತ್ತು ಸನ್‌ರೂಫ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಎಸ್‌ಯುವಿಯಲ್ಲಿ 5 ಮಂದಿ ಸುಲಭವಾಗಿ ಪ್ರಯಾಣ ಮಾಡಬಹುದು. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು ರೇರ್ ವ್ಯೂ ಕ್ಯಾಮೆರಾವನ್ನು ಒಳಗೊಂಡಿದೆ.
ಕಿಯಾ ಸೋನೆಟ್ (Kia Sonet): ಇದು ಕಾಂಪ್ಯಾಕ್ಟ್ ಎಸ್‌ಯುವಿ ಎಂದೇ ಹೆಸರುವಾಸಿಯಾಗಿದೆ. ಕನಿಷ್ಠ ರೂ.8 ಲಕ್ಷ ಹಾಗೂ ಗರಿಷ್ಠ ರೂ.15.60 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 18.7 ರಿಂದ 22.3 ಕೆಎಂಪಿಎಲ್‌ವರೆಗೆ ನೀಡುತ್ತದೆ.

ಈ ಕಾರಿನಲ್ಲಿ 5 ಜನರು ಪ್ರಯಾಣ ಮಾಡಬಹುದು. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸ್ಕ್ರೀನ್, 10.25-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸನ್‌ರೂಫ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಒಳಗೊಂಡಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಪಡೆದಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications