Kia: ಕಿಯಾ ಸೈರಸ್ ಎಸ್‌ಯುವಿಗೆ 3 ಪರ್ಯಾಯ ಕಾರುಗಳಿವು.. ಬೆಲೆ ಇಷ್ಟೇನಾ, ವಿಶೇಷತೆಗಳೇನು?
ಕಿಯಾ ಮೋಟಾರ್ಸ್ (Kia Motors), ಈ ಫೆಬ್ರವರಿ ತಿಂಗಳು ಹೊಚ್ಚ ಹೊಸ ಸೈರಸ್ (Syros) ಎಸ್‌ಯುವಿಯನ್ನು ಬಿಡುಗಡೆಗೊಳಿಸಿತ್ತು. ಈ ಕಾರು ರೂ.8.99 ಲಕ್ಷದಿಂದ ರೂ.17.80 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀ. ಟರ್ಬೊ ಪೆಟ್ರೋಲ್ ಹಾಗೂ 1.5-ಲೀ. ಡೀಸೆಲ್ ಎಂಜಿನ್‌ನ್ನು ಹೊಂದಿದೆ. 17.65 ರಿಂದ 20.75 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಡ್ರೈವರ್ಸ್ ಡಿಸ್‌ಪ್ಲೇಗಾಗಿ ಡುಯಲ್ ಸ್ಕ್ರೀನ್ ಸೆಟಪ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಈ 'ಸೈರಸ್' ಎಸ್‌ಯುವಿಗೆ ಪರ್ಯಾಯವಾಗಿ ಗ್ರಾಹಕರು ಈ 3 ಕಾರುಗಳನ್ನು ಖರೀದಿ ಮಾಡಬಹುದು. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರವನ್ನು ತಿಳಿಯೋಣ.
ಮೊದಲಿಗೆ ಸ್ಕೋಡಾ ಕೈಲಾಕ್ (Skoda Kylaq) ಎಸ್‌ಯುವಿ ಬಗ್ಗೆ ಮಾತನಾಡೋಣ. ಇದು ರೂ.7.89 ರಿಂದ ರೂ.14.40 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.0-ಲೀ. ಪೆಟ್ರೋಲ್ ಎಂಜಿನ್‌ನ್ನು ಒಳಗೊಂಡಿದ್ದು, 15 ರಿಂದ 18 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದ್ದು, ಪ್ರಯಾಣಿಕರು ಸುಲಭವಾಗಿ ಓಡಾಟ ನಡೆಸಬಹುದು.

ಈ ಕಾರು 10-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 8-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಟು-ಸ್ಪೋಕ್ ಸ್ಟೀರಿಂಗ್ ವೀಲ್, ಸನ್‌ರೂಫ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್) ಹಾಗೂ ಡಿಸ್ಕ್/ ಡ್ರಮ್ ಬ್ರೇಕ್‌ಗಳನ್ನು ಒಳಗೊಂಡಿದೆ.
ಹ್ಯುಂಡೈ ಕ್ರೆಟಾ (Hyundai Creta) ಕುರಿತಂತೆ ಹೇಳುವುದಾದರೆ, ಈ ಎಸ್‌ಯುವಿ ರೂ.11 ಲಕ್ಷದಿಂದ ರೂ.20.42 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ & 1.5-ಲೀ. ಡೀಸೆಲ್ ಎಂಜಿನ್ ಆಯ್ಕೆಯನ್ನು ಒಳಗೊಂಡಿದೆ. 17.4 ರಿಂದ 21.8 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ.

ನೂತನ ಹ್ಯುಂಡೈ ಕ್ರೆಟಾ ಎಸ್‌ಯುವಿಯಲ್ಲಿ 5 ಮಂದಿ ಪ್ರಯಾಣಿಸಬಹುದು. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ ಡುಯಲ್ ಡಿಸ್‌ಪ್ಲೇ, ಡುಯಲ್ ಝೋನ್ ಎಸಿ, 8-ಸ್ಪೀಕರ್ ಸೌಂಡ್ ಸಿಸ್ಟಮ್ ಹಾಗೂ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ವಿಎಸ್‌ಸಿ (ವೆಹಿಕಲ್ ಸ್ಟೆಬಿಲಿಟಿ ಕಂಟ್ರೋಲ್), ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಅನ್ನು ಒಳಗೊಂಡಿದೆ.

ಕಡೆಯದಾಗಿ ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಎಸ್‌ಯುವಿ ಬಗ್ಗೆ ತಿಳಿಸುವುದಾದರೆ, ಇದು ರೂ.7.51 ರಿಂದ ರೂ.13.04 ಲಕ್ಷ (ಎಕ್ಸ್ ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಡುಯಲ್ಜೆಟ್ ಪೆಟ್ರೋಲ್ ಮತ್ತು ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.
ಈ ಕಾರಿನಲ್ಲಿಯೂ 5 ಜನರು ಸಂಚಾರ ನಡೆಸಬಹುದು. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಕ್ರೂಸ್ ಕಂಟ್ರೋಲ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.


Click it and Unblock the Notifications