ಪ್ರಖ್ಯಾತ ಮಾರುತಿ ಫ್ರಾಂಕ್ಸ್ ಎಸ್‌ಯುವಿಗೆ 3 ಪರ್ಯಾಯ ಕಾರುಗಳಿವು.. 5-ಸೀಟರ್, ಭಾರೀ ಮೈಲೇಜ್.. ಬೆಲೆ ಎಷ್ಟು?

ಮಾರುತಿ ಸುಜುಕಿ ಫ್ರಾಂಕ್ಸ್ (Maruti Suzuki Fronx) ಪ್ರಖ್ಯಾತ ಎಸ್‌ಯುವಿಯಾಗಿದೆ. ಇದು ರೂ.7.51 ಲಕ್ಷದಿಂದ ರೂ.13.04 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1-ಲೀ. ಟರ್ಬೊ ಪೆಟ್ರೋಲ್, 1.2-ಲೀ. ಡುಯಲ್ಜೆಟ್ ಪೆಟ್ರೋಲ್ & ಸಿಎನ್‌ಜಿ ಎಂಜಿನ್‌ನ್ನು ಪಡೆದಿದ್ದು, 20.1 ರಿಂದ 28.51 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿ 5 ಮಂದಿ ಸಂಚಾರ ಮಾಡಬಹುದು. 9-ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಜೊತೆಗೆ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ. ನೂತನ ಫ್ರಾಂಕ್ಸ್ ಎಸ್‌ಯುವಿಗೆ ಪರ್ಯಾಯವಾಗಿ ಗ್ರಾಹಕರು ಈ 3 ಕಾರುಗಳನ್ನು ಖರೀದಿ ಮಾಡಬಹುದು. ಬನ್ನಿ.. ಇವುಗಳ ಬೆಲೆ ಹಾಗೂ ವಿಶೇಷತೆಗಳ ಕುರಿತಂತೆ ಸಂಕ್ಷಿಪ್ತವಾದ ವಿವರವನ್ನು ತಿಳಿಯೋಣ.

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್ (Toyota Urban Cruiser Taisor): ಈ ಎಸ್‌ಯುವಿ ಕನಿಷ್ಠ ರೂ.7.74 ಲಕ್ಷ ಹಾಗೂ ಗರಿಷ್ಠ ರೂ.13.04 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1-ಲೀ. ಟರ್ಬೊ ಪೆಟ್ರೋಲ್ & 1.2-ಲೀ. ಸಿಎನ್‌ಜಿ ಎಂಜಿನ್ ಆಯ್ಕೆಯನ್ನು ಹೊಂದಿದ್ದು, 19.8 ರಿಂದ 28.5 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ.

Best 3 Alternatives For Maruti Suzuki Fronx Suv Toyota Taisor Renault Kiger Nissan Magnite

ಈ ಕಾರಿನಲ್ಲಿ 5 ಜನರು ಪ್ರಯಾಣಿಸಬಹುದು. ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಸ್ಟೀರಿಂಗ್-ಮೌಂಟೆಡ್ ಕಂಟ್ರೋಲ್‌ಗಳು ಮತ್ತು ಪ್ಯಾಡಲ್ ಶಿಫ್ಟರ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6 ಏರ್‌ಬ್ಯಾಗ್‌ಗಳು, ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ರೆನಾಲ್ಟ್ ಕಿಗರ್ (Renault Kiger): ಇದು ಕೂಡ ಎಸ್‌ಯುವಿಯಾಗಿದೆ. ರೂ.6.10 ಲಕ್ಷದಿಂದ ರೂ.11.23 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಹಾಗೂ 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಪಡೆದಿದ್ದು, 18.24 ರಿಂದ 20.5 ಕೆಎಂಪಿಎಲ್‌ವರೆಗೆ ಮೈಲೇಜ್ ನೀಡುತ್ತದೆ. ಇದರಲ್ಲಿಯೂ 5 ಮಂದಿ ಓಡಾಟ ನಡೆಸಬಹುದು.

Best 3 Alternatives For Maruti Suzuki Fronx Suv Toyota Taisor Renault Kiger Nissan Magnite

ನೂತನ ಕಿಗರ್ ಎಸ್‌ಯುವಿ 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 7-ಇಂಚಿನ ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಪುಶ್-ಬಟನ್ ಸ್ಟಾರ್ಟ್/ ಸ್ಟಾಪ್ ಮತ್ತು ವೈರ್‌ಲೆಸ್ ಫೋನ್ ಚಾರ್ಜರ್ ಒಳಗೊಂಡಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಸುರಕ್ಷತೆಯ ದೃಷ್ಟಿಯಿಂದ 4 ಏರ್‌ಬ್ಯಾಗ್‌ಗಳು, ಟಿಪಿಎಂಎಸ್ (ಟೈರ್ ಪ್ರೆಶರ್ ಮಾನಿಟರಿಂಗ್ ಸಿಸ್ಟಮ್) ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಪಡೆದಿದೆ.

Best 3 Alternatives For Maruti Suzuki Fronx Suv Toyota Taisor Renault Kiger Nissan Magnite

ನಿಸ್ಸಾನ್ ಮ್ಯಾಗ್ನೈಟ್ (Nissan Magnite): ಈ ಎಸ್‌ಯುವಿ ರೂ.6.14 ಲಕ್ಷದಿಂದ ರೂ.11.76 ಲಕ್ಷ (ಎಕ್ಸ್-ಶೋರೂಂ) ದರವನ್ನು ಒಳಗೊಂಡಿದೆ.1-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 1-ಲೀ. ಟರ್ಬೊ ಪೆಟ್ರೋಲ್ ಎಂಜಿನ್‌ ಆಯ್ಕೆಯನ್ನು ಹೊಂದಿದೆ. 17 ರಿಂದ 20 ಕೆಎಂಪಿಎಲ್‌ವರೆಗೆ ಮೈಲೇಜ್ ಕೊಡುತ್ತದೆ. ಈ ಕಾರಿನಲ್ಲಿಯೂ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಸಂಚರಿಸಬಹುದು.

Best 3 Alternatives For Maruti Suzuki Fronx Suv Toyota Taisor Renault Kiger Nissan Magnite

ಈ ನಿಸ್ಸಾನ್ ಮ್ಯಾಗ್ನೈಟ್ ಎಸ್‌ಯುವಿಯು ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್-ಡ್ರೈವರ್ ಡಿಸ್‌ಪ್ಲೇ, ಫೋನ್ ಚಾರ್ಜರ್ & ಆಟೋಮೆಟಿಕ್ - ಕ್ಲೇಮೇಟ್ ಕಂಟ್ರೋಲ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ - ಸ್ಟೆಬಿಲಿಟಿ ಕಂಟ್ರೋಲ್) ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.

ಡ್ರೈವ್‌ಸ್ಪಾರ್ಕ್ ಕನ್ನಡ ವೆಬ್‌ಸೈಟ್ ತ್ವರಿತವಾಗಿ ಆಟೋಮೊಬೈಲ್ ಸಂಬಂಧಿಸಿದ ಸುದ್ದಿಗಳನ್ನು ನೀಡುತ್ತದೆ. ಜೊತೆಗೆ ಸೋಷಿಯಲ್ ಮೀಡಿಯಾಗಳ ಮೂಲಕ ತಕ್ಷಣವೇ ಓದುಗರೊಂದಿಗೆ ಸುದ್ದಿಗಳನ್ನು ಶೇರ್ ಮಾಡುತ್ತೇವೆ. ಇತ್ತೀಚಿನ ಕಾರು, ಬೈಕ್ ಸುದ್ದಿ, ಟೆಸ್ಟ್ ಡ್ರೈವ್ ವರದಿಗಳು ಮತ್ತು ವೀಡಿಯೊ ಗಳನ್ನು ಪಡೆಯಲು ನಮ್ಮ ಫೇಸ್‌ ಬುಕ್, ಇನ್‌ಸ್ಟಾಗ್ರಾಮ್, ಯೂಟ್ಯೂಬ್ ಪೇಜ್‌ಗಳೊಂದಿಗೆ ಫಾಲೋ ಮಾಡಿ. ನಿಮಗೆ ನಮ್ಮ ಯಾವುದೇ ಸುದ್ದಿ ಇಷ್ಟವಾದರೆ ಲೈಕ್, ಕಾಮೆಂಟ್ ಮಾಡುವುದನ್ನು ಮರೆಯದಿರಿ.

Article Published On: Thursday, April 3, 2025, 8:30 [IST]
English summary
Best 3 alternatives for maruti suzuki fronx suv toyota taisor renault kiger nissan magnite
Read more on auto news india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+