ಈ 2025ರಲ್ಲಿ ಮಾರಾಟಕ್ಕೆ ಬಂದ ಪ್ರಮುಖ ಕಾರುಗಳಿವು.. ಜನ ಮುಗಿಬಿದ್ದು ಕೊಳ್ಳುವರು, ಬೆಲೆ ಎಷ್ಟು.. ವಿಶೇಷೇತೆಗಳೇನು?
'2025' ವಾಹನ ತಯಾರಕ ಕಂಪನಿಗಳಿಗೆ ಮಹತ್ವದ ವರ್ಷವಾಗಿದೆ. ಹಲವು ಕಾರುಗಳು ಅದ್ದೂರಿಯಾಗಿ ಬಿಡುಗಡೆಗೊಂಡಿವೆ. ಬಹುಮುಖ್ಯವಾಗಿ ಜನಪ್ರಿಯ ಎಸ್‌ಯುವಿಗಳಾದ ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್, ವಿನ್‌ಫಾಸ್ಟ್ ವಿಎಫ್6 ಹಾಗೂ ಮಹೀಂದ್ರಾ ಬೊಲೆರೊ ಫೇಸ್‌ಲಿಫ್ಟ್‌ಗಳನ್ನು ಮಾರಾಟಕ್ಕೆ ತರಲಾಗಿತ್ತು. ಇವು ಆಕರ್ಷಕವಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳನ್ನು ಪಡೆದುಕೊಂಡಿವೆ. ಬನ್ನಿ, ಈ ಕಾರುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ರೆನಾಲ್ಟ್ ಕೈಗರ್ ಫೇಸ್‌ಲಿಫ್ಟ್ (Renault Kiger Facelift):
ಇದೊಂದು ಪ್ರಮುಖ ಎಸ್‌ಯುವಿಯಾಗಿದೆ. ಆಗಸ್ಟ್‌ನಲ್ಲಿ ಮಾರಾಟಕ್ಕೆ ತರಲಾಗಿತ್ತು. ಎಲ್ಲ ವರ್ಗದ ಖರೀದಿದಾರರು ಸುಲಭವಾಗಿ ಕೊಂಡುಕೊಳ್ಳಬಹುದು. ರೂ.5.76 ಲಕ್ಷದಿಂದ ರೂ.10.34 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಒಳಗೊಂಡಿದೆ. ರೇಡಿಯಂಟ್ ರೆಡ್, ಕ್ಯಾಸ್ಪಿಯನ್ ಬ್ಲೂ, ಐಸ್ ಕೂಲ್ ವೈಟ್, ಮೂನ್‌ಲೈಟ್ ಸಿಲ್ವರ್ ಹಾಗೂ ಪರ್ಲ್ ವೈಟ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಸಿಗುತ್ತದೆ. 205 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,500 ಮಿ.ಮೀ ವೀಲ್‌ಬೇಸ್‌ನ್ನು ಹೊಂದಿದೆ.

ಈ ಕಾರು ಶಕ್ತಿಶಾಲಿಯಾದ ಪವರ್‌ಟ್ರೇನ್‌ನ್ನು ಪಡೆದಿದೆ. 1.0-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ ಮತ್ತು 1.0-ಲೀ. ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 5-ಸ್ಪೀಡ್ ಮ್ಯಾನುವಲ್, 5-ಸ್ಪೀಡ್ ಆಟೋಮೆಟಿಕ್ ಹಾಗೂ ಸಿವಿಟಿ ಗೇರ್‌ಬಾಕ್ಸ್‌ನ್ನು ತನ್ನದಾಗಿಸಿಕೊಂಡಿದೆ. 19 ರಿಂದ 20 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಪಡೆದಿದೆ.
ನೂತನ 'ಕೈಗರ್' ಎಸ್‌ಯುವಿಯು 5 ಆಸನಗಳನ್ನು ಒಳಗೊಂಡಿದೆ. 8 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಫುಲ್-ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ವೈರ್‌ಲೆಸ್ ಫೋನ್ ಚಾರ್ಜರ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಯ ದೃಷ್ಟಿಯಿಂದ 6-ಏರ್‌ಬ್ಯಾಗ್‌ಗಳು, ಇಎಸ್‌ಸಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಕಂಟ್ರೋಲ್), ಟ್ರಾಕ್ಷನ್ ಕಂಟ್ರೋಲ್ ಹಾಗೂ 360- ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ವಿನ್‌ಫಾಸ್ಟ್ ವಿಎಫ್6 (VinFast VF6):
ಈ ಎಲೆಕ್ಟ್ರಿಕ್ ಎಸ್‌ಯುವಿಯು ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆಗೊಳಿಸಲಾಗಿತ್ತು. ರೂ.16.49 ಲಕ್ಷದಿಂದ ರೂ.18.29 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ಅತ್ಯುತ್ತಮವಾದ ವಿನ್ಯಾಸವನ್ನು ಹೊಂದಿದೆ. ಕ್ರಿಮ್ಸನ್ ರೆಡ್, ಜೆನಿತ್ ಗ್ರೇ, ಅರ್ಬನ್ ಮಿಂಟ್, ಜೆಟ್ ಬ್ಲ್ಯಾಕ್ ಮತ್ತು ಡೆಸ್ಯಾಟ್ ಸಿಲ್ವರ್ ಬಣ್ಣಗಳೊಂದಿಗೂ ದೊರೆಯುತ್ತದೆ. 190 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,730 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.
ಹೊಸ 'ವಿನ್‌ಫಾಸ್ಟ್ ವಿಎಫ್6' ಕಾರು 59.6 ಕಿಲೋವ್ಯಾಟ್ (ಕೆಡಬ್ಲ್ಯೂಹೆಚ್) ಬ್ಯಾಟರಿ ಪ್ಯಾಕ್‌ನ್ನು ಹೊಂದಿದೆ. ಭರ್ತಿ ಚಾರ್ಜ್‌ನಲ್ಲಿ 463 ರಿಂದ 468 ಕಿ.ಮೀ ರೇಂಜ್ (ಮೈಲೇಜ್) ನೀಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ಪಡೆದಿದೆ. 12.9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ಹಾಗೂ ಪನೋರಮಿಕ್ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 7-ಏರ್‌ಬ್ಯಾಗ್‌ಗಳು, ಲೆವೆಲ್-2 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಮತ್ತು 360-ಡಿಗ್ರಿ ಕ್ಯಾಮೆರಾವನ್ನು ಹೊಂದಿದೆ.

ಮಹೀಂದ್ರಾ ಬೊಲೆರೊ ಫೇಸ್‌ಲಿಫ್ಟ್ (Mahindra Bolero Facelift):
ಇದು ಜನಪ್ರಿಯ ಎಸ್‌ಯುವಿಯಾಗಿದೆ. ರೂ.7.99 ಲಕ್ಷದಿಂದ ರೂ.9.69 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಸ್ಟೆಲ್ತ್ ಬ್ಲ್ಯಾಕ್, ಡೈಮಂಡ್ ವೈಟ್, ಡಿಸ್ಯಾಟ್ ಸಿಲ್ವರ್ ಹಾಗೂ ರಾಕಿ ಬೀಜ್ ಎಂಬ ಬಣ್ಣಗಳ ಆಯ್ಕೆಯಲ್ಲಿಯೂ ಲಭ್ಯವಿದೆ. 183 ಮಿ.ಮೀ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,680 ಮಿ.ಮೀ ವೀಲ್‌ಬೇಸ್‌ನ್ನು ಪಡೆದಿದೆ.
ನೂತನ 'ಬೊಲೆರೊ' ಕಾರು 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 14 ರಿಂದ 16 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 7 ಆಸನಗಳನ್ನು ಹೊಂದಿದೆ. 7 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಸೆಮಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಸ್ಟೀರಿಂಗ್ ಮೌಂಟೆಡ್ ಆಡಿಯೋ ಕಂಟ್ರೋಲ್‌ಗಳು ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ ಡುಯಲ್ ಫ್ರಂಟ್ ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ - ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್) ಹಾಗೂ ರೇರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ತನ್ನದಾಗಿಸಿಕೊಂಡಿದೆ.


Click it and Unblock the Notifications








