Toyota: 6.39 ಲಕ್ಷದಿಂದ ಪ್ರಾರಂಭ.. 30 Km ವರೆಗೆ ಮೈಲೇಜ್.. ಇವೇ 3 ಬಲು ಜನಪ್ರಿಯ ಟೊಯೊಟಾ ಕಾರುಗಳು!

ಟೊಯೊಟಾ (Toyota) ನಂಬಿಕಾರ್ಹ ವಾಹನ ತಯಾರಕ ಕಂಪನಿ ಎಂದೇ ಮನೆ ಮಾತಾಗಿದೆ. ದೇಶೀಯ ಮಾರುಕಟ್ಟೆಯಲ್ಲಿ ಕಂಪನಿ ಮಾರಾಟಗೊಳಿಸುವ ಕಾರುಗಳನ್ನು ಗ್ರಾಹಕರು ಕೂಡ ಇಷ್ಟಪಟ್ಟು ಕೊಂಡುಕೊಳ್ಳುತ್ತಿದ್ದಾರೆ. ನೀವು, ಹೊಚ್ಚ ಹೊಸ ಕಾರೊಂದನ್ನು ಖರೀದಿಸಲು ಪ್ಲ್ಯಾನ್ ಮಾಡಿದ್ದೀರಾ.. ಹಾಗಾದರೆ ಗ್ಲಾನ್ಜಾ, ಅರ್ಬನ್ ಕ್ರೂಸರ್ ಟೈಸರ್ ಟೈಸರ್ ಹಾಗೂ ರೂಮಿಯನ್ ಮಾಡೆಲ್‌ಗಳು ಬೆಸ್ಟ್ ಚಾಯ್ಸ್ ಆಗಲಿವೆ. ಬನ್ನಿ.. ಇವುಗಳು ಬೆಲೆ ಎಷ್ಟು, ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಟೊಯೊಟಾ ಗ್ಲಾನ್ಜಾ:

ಇದೊಂದು ಪ್ರೀಮಿಯಂ ಹ್ಯಾಚ್‌ಬ್ಯಾಕ್‌ ಎಂದೇ ಹೆಸರುವಾಸಿಯಾಗಿದೆ. ಆದರೂ ಕೈಗೆಟುಕುವ ಬೆಲೆಯಲ್ಲಿಯೇ ಲಭ್ಯವಿದೆ. ರೂ.6.39 ಲಕ್ಷದಿಂದ ರೂ.9.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದ್ದು, ಎಲ್ಲ ವರ್ಗದ ಗ್ರಾಹಕರು ಸುಲಭವಾಗಿ ಕೊಂಡುಕೊಳ್ಳಲು ಸಾಧ್ಯವಾಗಲಿದೆ. ಈ ಕಾರು ಹೆಚ್ಚು ಅತ್ಯಾಧುನಿಕವಾದ ವಿನ್ಯಾಸವನ್ನು ಒಳಗೊಂಡಿದೆ. ಸ್ಪೋರ್ಟಿನ್ ರೆಡ್, ಎಂಟೈಸಿಂಗ್ ಸಿಲ್ವರ್, ಗೇಮಿಂಗ್ ಗ್ರೇ & ಕೆಫೆ ವೈಟ್ ಎಂಬ ಬಣ್ಣಗಳೊಂದಿಗೂ ದೊರೆಯುತ್ತದೆ. 170 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,520 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

Best 3 Toyota Cars Under Rs 11 Lakhs Glanza Urban Cruiser Taisor And Rumion

ನೂತನ 'ಗ್ಲಾನ್ಜಾ' ಕಾರು 1.2-ಲೀಟರ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. ಯಾವುದೇ ಸಾಮಾನ್ಯ ಬೈಕ್‌ಗೂ ಕಮ್ಮಿಯಿಲ್ಲದ ರೀತಿಯಲ್ಲಿ 22.35 ರಿಂದ 30 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 180 ಕೆಎಂಪಿಹೆಚ್ ಟಾಪ್ ಸ್ಪೀಡ್‌ನ್ನು ಹೊಂದಿದೆ. ಕೇವಲ 11.6 ಸೆಕೆಂಡುಗಳಲ್ಲಿ 0 ರಿಂದ 100 ಕೆಎಂಪಿಹೆಚ್ ವೇಗವನ್ನು ಪಡೆಯಲಿದೆ.

ಈ ಹ್ಯಾಚ್‌ಬ್ಯಾಕ್‌ 5 ಆಸನಗಳನ್ನು ಒಳಗೊಂಡಿದೆ. ಪ್ರಯಾಣಿಕರು ಸುಲಭವಾಗಿ ಸಂಚರಿಸಬಹುದು. ಹೆಚ್ಚಿನ ಲಗೇಜ್ ಕೊಂಡೊಯ್ಯಲು 318 ಲೀಟರ್‌ನಷ್ಟು ಬೂಟ್ ಸ್ಪೇಸ್‌ನ್ನು ಹೊಂದಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್‌ಗಳು, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಮತ್ತು ಕೀಲೆಸ್ ಎಂಟ್ರಿ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

Best 3 Toyota Cars Under Rs 11 Lakhs Glanza Urban Cruiser Taisor And Rumion

ಟೊಯೊಟಾ ಅರ್ಬನ್ ಕ್ರೂಸರ್ ಟೈಸರ್:

ಇದು ಪ್ರಮುಖ ಎಸ್‌ಯುವಿಯಾಗಿದ್ದು, ಗ್ರಾಹಕರ ಮನ ಗೆಲ್ಲುವಲ್ಲಿಯೂ ಯಶಸ್ವಿಯಾಗಿದೆ. ರೂ.7.21 ಲಕ್ಷದಿಂದ ರೂ.12.06 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸವನ್ನು ಹೊಂದಿದೆ. ಕೆಫೆ ವೈಟ್, ಗೇಮಿಂಗ್ ಗ್ರೇ, ಲ್ಯೂಸೆಂಟ್ ಆರೆಂಜ್, ಸ್ಪೋರ್ಟಿನ್ ರೆಡ್ ಹಾಗೂ ಬ್ಲೂಯಿಶ್ ಬ್ಲ್ಯಾಕ್ ಎಂಬ ಬಣ್ಣಗಳೊಂದಿಗೂ ಸಿಗುತ್ತದೆ. 190 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಮತ್ತು 2,520 ಎಂಎಂ ವೀಲ್‌ಬೇಸ್‌ನ್ನು ಒಳಗೊಂಡಿದೆ.

ಹೊಸ ಟೈಸರ್ ಕಾರು 1-ಲೀಟರ್ ಟರ್ಬೊ ಪೆಟ್ರೋಲ್, 1.2-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 20.1 ರಿಂದ 28.51 ಕಿಲೋಮೀಟರ್‌ವರೆಗೆ ಮೈಲೇಜ್ ಕೊಡುತ್ತದೆ. 5 ಆಸನ ಆಯ್ಕೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 9-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್ ಹಾಗೂ ಸ್ಟೀರಿಂಗ್ ಮೌಂಟೆಡ್ ಕಂಟ್ರೋಲ್‌ಗಳಂತಹ ಹಲವು ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.

Best 3 Toyota Cars Under Rs 11 Lakhs Glanza Urban Cruiser Taisor And Rumion

ಟೊಯೊಟಾ ರೂಮಿಯನ್:

ಇದೊಂದು ಜಗಮೆಚ್ಚಿದ ಎಂಪಿವಿಯಾಗಿದೆ. ಅತ್ಯುತ್ತಮವಾದ ಫ್ಯಾಮಿಲಿ ಕಾರಾಗಿಯೂ ಹೊರಹೊಮ್ಮಿದೆ. ರೂ.10.44 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. ನೋಡಲು ಸಹ ಚೆನ್ನಾಗಿದೆ. ಐಕಾನಿಕ್ ಗ್ರೇ, ರಸ್ಟಿಕ್ ಬ್ರೌನ್, ಸ್ಪಂಕಿ ಬ್ಲೂ, ಕೆಫೆ ವೈಟ್ ಮತ್ತು ಎಂಟೈಸಿಂಗ್ ಸಿಲ್ವರ್ ಎಂಬ ಬಣ್ಣಗಳೊಂದಿಗೂ ಲಭ್ಯವಿದೆ. 209 ಎಂಎಂ ಗ್ರೌಂಡ್ ಕ್ಲಿಯರೆನ್ಸ್ ಹಾಗೂ 2,740 ಎಂಎಂ ವೀಲ್‌ಬೇಸ್‌ನ್ನು ಹೊಂದಿದೆ.

ನೂತನ 'ರೂಮಿಯನ್' ಕಾರು 1.5-ಲೀಟರ್ ಪೆಟ್ರೋಲ್ ಹಾಗೂ 1.5-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 20.51 ರಿಂದ 26 ಕಿಲೋಮೀಟರ್‌ವರೆಗೆ ಮೈಲೇಜ್ ನೀಡುತ್ತದೆ. 7 ಆಸನಗಳನ್ನು ಹೊಂದಿದೆ. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, 6-ಸ್ಪೀಕರ್ ಸೌಂಡ್ ಸಿಸ್ಟಮ್, ಆಟೋಮೆಟಿಕ್ ಎಸಿ ಮತ್ತು ಪುಶ್ ಬಟನ್ ಎಂಜಿನ್ ಸ್ಟಾರ್ಟ್/ಸ್ಟಾಪ್ ಸೇರಿದಂತೆ ನಾನಾ ಬಗೆಯ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ. ಪ್ರಯಾಣಿಕರ ರಕ್ಷಣೆಗಾಗಿ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

More from DriveSpark

Article Published On: Thursday, December 18, 2025, 11:31 [IST]
English summary
Best 3 toyota cars under rs 11 lakhs glanza urban cruiser taisor and rumion
Read more on toyota india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+