24+ ಕಿ.ಮೀ ಮೈಲೇಜ್.. ಅಗ್ಗದ ದರಕ್ಕೆ ಸಿಗುವ ಟಾಪ್-5 ಡೀಸೆಲ್ ಎಸ್‌ಯುವಿಗಳಿವು!
ಭಾರತದಾದ್ಯಂತ ಕಠಿಣ ಎಮಿಷನ್ ಮಾನದಂಡಗಳು ಜಾರಿಯಲ್ಲಿದ್ದು, ಎಲೆಕ್ಟ್ರಿಕ್ ಕಾರುಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ. ಅದರಲ್ಲೂ ಮಾರುತಿ ಸುಜುಕಿಯು ಡೀಸೆಲ್ ಎಂಜಿನ್ ಹೊಂದಿರುವ ಎಲ್ಲ ವಿಧದ ಕಾರುಗಳ ಉತ್ಪಾದನೆಯನ್ನು ಸ್ಥಗಿತಗೊಳಿಸಿ ವರ್ಷಗಳಾಗಿವೆ. ಕೇವಲ ಪೆಟ್ರೋಲ್ ಚಾಲಿತ ಹ್ಯಾಚ್‌ಬ್ಯಾಕ್, ಸೆಡಾನ್ ಹಾಗೂ ಎಸ್‌ಯುವಿಗಳನ್ನು ಮಾತ್ರ ತಯಾರಿಸುತ್ತಿದೆ. ವಿಶೇಷವಾಗಿ, ದೇಶೀಯ ಮಾರುಕಟ್ಟೆಯಲ್ಲಿ ಕಡಿಮೆ ಬೆಲೆಗೆ ಡೀಸೆಲ್ ಎಂಜಿನ್ ಒಳಗೊಂಡಿರುವ ಎಸ್‌ಯುವಿಗಳು ಖರೀದಿಗೆ ದೊರೆಯುವುದು ಕೂಡ ಕಷ್ಟವಾಗಿ ಬಿಟ್ಟಿದೆ. ಆದರೂ ನೀವು ಹೆಚ್ಚು ಟಾರ್ಕ್ ಹೊರಹಾಕಬಲ್ಲ ಬಜೆಟ್ ದರಕ್ಕೆ ಲಭ್ಯವಿರುವ ಈ 5 ಡೀಸೆಲ್ ಚಾಲಿತ ಕಾರುಗಳನ್ನು ಖರೀದಿ ಮಾಡಬಹುದು.
ಹ್ಯುಂಡೈ ವೆನ್ಯೂ (Hyundai Venue):
ಈ ಎಸ್‌ಯುವಿ ರೂ.7.94 ಲಕ್ಷದಿಂದ ರೂ.13.62 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಪಡೆದಿದೆ. 116 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 250 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.2 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.

ಇದರಲ್ಲಿ 5 ಆಸನಗಳಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಓಡಾಟ ನಡೆಸಬಹುದು. 8-ಇಂಚಿರುವ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಆಂಡ್ರಾಯ್ಡ್ ಆಟೋ, ಆಪಲ್ ಕಾರ್‌ಪ್ಲೇ, ವೈರ್‌ಲೆಸ್ ಫೋನ್ ಚಾರ್ಜಿಂಗ್ ಮತ್ತು ಲೆವೆಲ್ 1 ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಮಹೀಂದ್ರಾ ಎಕ್ಸ್‌ಯುವಿ 3ಎಕ್ಸ್ಒ (Mahindra XUV 3XO):
ಈ ಎಸ್‌ಯುವಿಯು ಬಜೆಟ್ ಬೆಲೆಯಲ್ಲಿ ಲಭ್ಯವಿದ್ದು, ರೂ.7.99 ಲಕ್ಷದಿಂದ ರೂ.15.80 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 117 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಮತ್ತು 300 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಉತ್ಪಾದಿಸುತ್ತದೆ. 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 20.6 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ.

ನೂತನ ಎಕ್ಸ್‌ಯುವಿ 3ಎಕ್ಸ್ಒ ಕಾರಿನಲ್ಲಿ 5 ಆಸನ ಆಯ್ಕೆ ವ್ಯವಸ್ಥೆಯಿದೆ. ಇನ್ಫೋಟೈನ್‌ಮೆಂಟ್ ಸಿಸ್ಟಮ್ & ಇನ್ಸ್ಟ್ರುಮೆಂಟ್ ಕ್ಲಸ್ಟರ್‌ಗಾಗಿ 10.25-ಇಂಚಿನ ಡುಯಲ್ ಡಿಸ್ಪ್ಲೇಗಳು, ಡುಯಲ್-ಜೋನ್ ಕ್ಲೇಮೇಟ್ ಕಂಟ್ರೋಲ್, ಯುಎಸ್‌ಬಿ ಸಿ ಫಾಸ್ಟ್ ಚಾರ್ಜಿಂಗ್ ಪೋರ್ಟ್‌ಗಳು ಮತ್ತು ಪನೋರಮಿಕ್ ಸನ್‌ರೂಫ್ ಒಳಗೊಂಡಂತೆ ಹಲವು ವೈಶಿಷ್ಟ್ಯಗಳನ್ನು ಪಡೆದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.
ಕಿಯಾ ಸೋನೆಟ್ (Kia Sonet):
ಇದೊಂದು ಜನಪ್ರಿಯ ಎಸ್‌ಯುವಿಯಾಗಿದೆ. ರೂ.8 ಲಕ್ಷದಿಂದ ರೂ.15.64 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 19 ರಿಂದ 24.1 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ. 10.25-ಇಂಚಿರುವ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಆಟೋಮೆಟಿಕ್ ಕ್ಲೇಮೇಟ್ ಕಂಟ್ರೋಲ್, ಕನೆಕ್ಟ್ ಕಾರ್ ಟೆಕ್ ಮತ್ತು ಸನ್‌ರೂಫ್ ಸೇರಿದಂತೆ ಹತ್ತಾರು ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಟಾಟಾ ನೆಕ್ಸಾನ್ (Tata Nexon):
ಈ ಎಸ್‌ಯುವಿಯು ರೂ.8 ಲಕ್ಷದಿಂದ ರೂ.15.60 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 6-ಸ್ಪೀಡ್ ಮ್ಯಾನುವಲ್/ ಆಟೋಮೆಟಿಕ್ ಗೇರ್‌ಬಾಕ್ಸ್‌ನ್ನು ಒಳಗೊಂಡಿದೆ. 24.08 ಕಿ.ಮೀ ವರೆಗೆ ಮೈಲೇಜ್ ಕೊಡುತ್ತದೆ. ಇದರಲ್ಲಿ 5 ಮಂದಿ ಓಡಾಟ ನಡೆಸಬಹುದು. ಜೊತೆಗೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.

ಮಹೀಂದ್ರಾ ಬೊಲೆರೊ (Mahindra Bolero):
ಇದು ಪ್ರಖ್ಯಾತ ಎಸ್‌ಯುವಿಯಾಗಿದ್ದು, ಗ್ರಾಮೀಣ ಭಾಗದ ಜನರು ಇಷ್ಟಪಟ್ಟು ಕೊಂಡುಕೊಳ್ಳುತ್ತಾರೆ. ರೂ.9.70 ಲಕ್ಷದಿಂದ ರೂ.10.93 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀಟರ್ ಡೀಸೆಲ್ ಎಂಜಿನ್ ಹೊಂದಿದ್ದು, 76 ಪಿಎಸ್ ಅಶ್ವ ಶಕ್ತಿ (ಹಾರ್ಸ್ ಪವರ್) ಹಾಗೂ 210 ಎನ್ಎಂ (ನ್ಯೂಟನ್ ಮೀಟರ್) ಪೀಕ್ ಟಾರ್ಕ್ ಹೊರಹಾಕುತ್ತದೆ. 5-ಸ್ಪೀಡ್ ಗೇರ್‌ಬಾಕ್ಸ್‌ನ್ನು ಪಡೆದಿದೆ. 14.3 ಕಿ.ಮೀ ವರೆಗೆ ಮೈಲೇಜ್ ನೀಡುತ್ತದೆ.


Click it and Unblock the Notifications