34 ಕಿ.ಮೀ ಮೈಲೇಜ್.. 4.70 ಲಕ್ಷ, 3-ಸ್ಟಾರ್ ಸೇಫ್ಟಿ ಹೊಸ ಮಾರುತಿ ಸೆಲೆರಿಯೊಗೆ 5 ಪರ್ಯಾಯ ಕಾರುಗಳಿವು.. ಬೆಲೆ ಎಷ್ಟು?
ಮಾರುತಿ ಸುಜುಕಿ ಸೆಲೆರಿಯೊ (Maruti Suzuki Celerio) ಪ್ರಮುಖ ಹ್ಯಾಚ್‌ಬ್ಯಾಕ್ ಆಗಿದೆ. ಕನಿಷ್ಠ ರೂ.4.70 ಲಕ್ಷ ಮತ್ತು ಗರಿಷ್ಠ ರೂ.6.73 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1-ಲೀಟರ್ ಪೆಟ್ರೋಲ್ ಹಾಗೂ 1-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 24 ರಿಂದ 34 ಕಿಲೋಮೀಟರ್‌ವರೆಗೂ ಮೈಲೇಜ್ ನೀಡುತ್ತದೆ. 5-ಆಸನಗಳನ್ನು ಒಳಗೊಂಡಿದ್ದು, ಪ್ರಯಾಣಿಕರು ಆರಾಮದಾಯಕವಾಗಿ ಕುಳಿತುಕೊಂಡು ಸಂಚರಿಸಬಹುದು. 7-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್, ರೇರ್ ಎಸಿ ವೆಂಟ್‌ಗಳು, ಐಡಲ್ ಎಂಜಿನ್ ಸ್ಟಾರ್ಟ್/ ಸ್ಟಾಪ್ ಸಿಸ್ಟಮ್ ಹಾಗೂ ಎಲೆಕ್ಟ್ರಿಕ್ ಪವರ್ ಸ್ಟೀರಿಂಗ್ ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ.
ಈ ಕಾರು ಸುರಕ್ಷತೆಯಿಂದಲೂ ಮನೆ ಮಾತಾಗಿದೆ. ಗ್ಲೋಬಲ್ ಎನ್‌ಸಿಎಪಿಯಿಂದ 3-ಸ್ಟಾರ್ ಸೇಫ್ಟಿ ರೇಟಿಂಗ್‌ನ್ನು ಹೊಂದುವಲ್ಲಿ ಸಫಲವಾಗಿದೆ. ವಯಸ್ಕರ ರಕ್ಷಣೆ ವಿಭಾಗದಲ್ಲಿ 34ಕ್ಕೆ 18.04 ಅಂಕಗಳನ್ನು ಗಳಿಸಿದೆ. ಮಕ್ಕಳ ರಕ್ಷಣೆ ವಿಭಾಗದಲ್ಲಿ 49ಕ್ಕೆ 18.57 ಅಂಕಗಳನ್ನು ಪಡೆದಿದೆ. 6-ಏರ್‌ಬ್ಯಾಗ್‌ಗಳು, ಎಬಿಎಸ್ (ಆಂಟಿಲಾಕ್ ಬ್ರೇಕಿಂಗ್ ಸಿಸ್ಟಮ್), ಇಬಿಡಿ (ಎಲೆಕ್ಟ್ರಾನಿಕ್ ಬ್ರೇಕ್‌ಫೋರ್ಸ್ ಡಿಸ್ಟ್ರಿಬ್ಯೂಷನ್), ಇಎಸ್‌ಪಿ (ಎಲೆಕ್ಟ್ರಾನಿಕ್ ಸ್ಟೆಬಿಲಿಟಿ ಪ್ರೋಗ್ರಾಂ) ಮತ್ತು ರಿವರ್ಸ್ ಪಾರ್ಕಿಂಗ್ ಸೆನ್ಸರ್‌ನಂತಹ ರಕ್ಷಣಾತ್ಮಕ ವೈಶಿಷ್ಟ್ಯಗಳನ್ನು ಹೊಂದಿದೆ.

ನೀವು ಇದೇ 'ಮಾರುತಿ ಸುಜುಕಿ ಸೆಲೆರಿಯೊ' ಬದಲಾಗಿ ಟಾಟಾ ಟಿಯಾಗೊ, ಟಾಟಾ ಪಂಚ್, ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್, ಟಾಟಾ ಆಲ್ಟ್ರೋಜ್ ಹಾಗೂ ನಿಸ್ಸಾನ್ ಮ್ಯಾಗ್ನೈಟ್ ಕಾರುಗಳನ್ನು ಖರೀದಿಸಬಹುದು. ಬನ್ನಿ, ಇವುಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಪೂರ್ಣವಾದ ವಿವರಗಳನ್ನು ತಿಳಿಯೋಣ.
ಟಾಟಾ ಟಿಯಾಗೊ (Tata Tiago):
ಇದು ಜನಪ್ರಿಯ ಹ್ಯಾಚ್‌ಬ್ಯಾಕ್ ಆಗಿದ್ದು, 'ಮಾರುತಿ ಸುಜುಕಿ ಸೆಲೆರಿಯೊ'ಗೆ ಪರ್ಯಾಯ ಕಾರಾಗಿದೆ. ರೂ.4.57 ಲಕ್ಷದಿಂದ ರೂ.7.82 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ & 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಒಳಗೊಂಡಿದೆ. 19 ರಿಂದ 28 ಕಿಲೋಮೀಟರ್‌ವರೆಗೂ ಮೈಲೇಜ್ ನೀಡುತ್ತದೆ. 5-ಆಸನ ಆಯ್ಜೆ ವ್ಯವಸ್ಥೆಯನ್ನು ತನ್ನದಾಗಿಸಿಕೊಂಡಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ ಡುಯಲ್ ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ.

ಟಾಟಾ ಪಂಚ್ (Tata Punch):
ಈ ಕಾರು ವಿಶ್ವಾಸಾರ್ಹ ಮೈಕ್ರೋ ಎಸ್‌ಯುವಿಯಾಗಿದೆ. ಆದರೂ 'ಮಾರುತಿ ಸೆಲೆರಿಯೊ'ಗೆ ಬದಲಾಗಿ ಕೊಂಡುಕೊಳ್ಳಬಹುದು. ಕನಿಷ್ಠ ರೂ.5.50 ಲಕ್ಷ ಮತ್ತು ಗರಿಷ್ಠ ರೂ.9.30 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್ ಹಾಗೂ 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 18 ರಿಂದ 26.99 ಕಿಲೋಮೀಟರ್‌ವರೆಗೂ ಮೈಲೇಜ್ ಕೊಡುತ್ತದೆ. 5-ಆಸನಗಳನ್ನು ಒಳಗೊಂಡಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಹ್ಯುಂಡೈ ಗ್ರ್ಯಾಂಡ್ ಐ10 ನಿಯೋಸ್ (Hyundai Grand i10 Nios):
ಇದೊಂದು ಪ್ರಖ್ಯಾತ ಹ್ಯಾಚ್‌ಬ್ಯಾಕ್ ಎಂದೇ ಹೆಸರುವಾಸಿಯಾಗಿದ್ದು, 'ಮಾರುತಿ ಸುಜುಕಿ ಸೆಲೆರಿಯೊ'ಗೆ ಪರ್ಯಾಯವಾಗಿ ತೆಗೆದುಕೊಳ್ಳಬಹುದು. ರೂ.5.47 ಲಕ್ಷದಿಂದ ರೂ.7.92 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಹೊಂದಿದೆ. 1.2-ಲೀಟರ್ ಪೆಟ್ರೋಲ್ & 1.2-ಲೀಟರ್ ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 16 ರಿಂದ 27 ಕಿಲೋಮೀಟರ್‌ವರೆಗೂ ಮೈಲೇಜ್ ನೀಡುತ್ತದೆ. 5-ಆಸನ ಆಯ್ಜೆ ವ್ಯವಸ್ಥೆಯನ್ನು ಒಳಗೊಂಡಿದೆ. 8-ಇಂಚಿನ ಇನ್ಫೋಟೈನ್‌ಮೆಂಟ್ ಡಿಸ್‌ಪ್ಲೇ ಹಾಗೂ 6-ಏರ್‌ಬ್ಯಾಗ್‌ಗಳನ್ನು ತನ್ನದಾಗಿಸಿಕೊಂಡಿದೆ.

ಟಾಟಾ ಆಲ್ಟ್ರೋಜ್ (Tata Altroz):
ಈ ಕಾರನ್ನು 'ಮಾರುತಿ ಸೆಲೆರಿಯೊ'ಗೆ ಬದಲಾಗಿ ಮನೆಗೆ ತರಬಹುದು. ಕನಿಷ್ಠ ರೂ.6.30 ಲಕ್ಷ ಹಾಗೂ ಗರಿಷ್ಠ ರೂ.10.51 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.2-ಲೀಟರ್ ಪೆಟ್ರೋಲ್, 1.2-ಲೀಟರ್ ಸಿಎನ್‌ಜಿ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್‌ನ್ನು ಹೊಂದಿದೆ. 19 ರಿಂದ 26 ಕಿಲೋಮೀಟರ್‌ವರೆಗೂ ಮೈಲೇಜ್ ಕೊಡುತ್ತದೆ. 5-ಆಸನಗಳನ್ನು ಹೊಂದಿದೆ. 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಮತ್ತು 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.

ನಿಸ್ಸಾನ್ ಮ್ಯಾಗ್ನೈಟ್ (Nissan Magnite):
ಇದು ನಂಬಿಕಾರ್ಹ ಎಸ್‌ಯುವಿಯಾಗಿದೆ. 'ಮಾರುತಿ ಸುಜುಕಿ ಸೆಲೆರಿಯೊ'ಗೆ ಪರ್ಯಾಯ ಕಾರಾಗಿದೆ. ರೂ.5.62 ಲಕ್ಷದಿಂದ ರೂ.10.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಪಡೆದಿದೆ. 1-ಲೀಟರ್ ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್ & 1-ಲೀಟರ್ ಟರ್ಬೊ ಪೆಟ್ರೋಲ್ ಎಂಜಿನ್‌ನ್ನು ಹೊಂದಿದೆ. 17 ರಿಂದ 20 ಕಿಲೋಮೀಟರ್‌ವರೆಗೂ ಮೈಲೇಜ್ ನೀಡುತ್ತದೆ. 5-ಆಸನಗಳನ್ನು ತನ್ನದಾಗಿಸಿಕೊಂಡಿದೆ. 8-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್ಮೆಂಟ್ ಸಿಸ್ಟಮ್ ಹಾಗೂ 6-ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.


Click it and Unblock the Notifications








