29 Km ಮೈಲೇಜ್.. ಫುಲ್ ಡಿಮ್ಯಾಂಡ್, ಹೊಸ ಮಾರುತಿ ವಿಕ್ಟೋರಿಸ್‌ಗೆ ಪರ್ಯಾಯವಾಗಬಲ್ಲ 5 ಕಾರುಗಳಿವು.. ಬೆಲೆ ಎಷ್ಟು?
ಮಾರುತಿ ಸುಜುಕಿ ವಿಕ್ಟೋರಿಸ್ (Maruti Suzuki Victoris) ಪ್ರಮುಖ ಎಸ್‌ಯುವಿಯಾಗಿದೆ. ಸೆ.16 ರಂದು ಈ ಕಾರನ್ನು ಅದ್ದೂರಿಯಾಗಿ ಬಿಡುಗಡೆಗೊಳಿಸಲಾಗಿತ್ತು. 4,261 ಯುನಿಟ್‌ಗಳನ್ನು ಮಾರಾಟಗೊಳಿಸಲಾಗಿದೆ. ಇದು ರೂ.10.50 ಲಕ್ಷದಿಂದ ರೂ.19.99 ಲಕ್ಷ (ಎಕ್ಸ್-ಶೋರೂಂ) ದರವನ್ನು ಹೊಂದಿದೆ. 1.5-ಲೀ. ಮೈಲ್ಡ್ ಹೈಬ್ರಿಡ್ ಪೆಟ್ರೋಲ್, 1.5-ಲೀ. ಸ್ಟ್ರಾಂಗ್ ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಹಾಗೂ 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಪಡೆದಿದೆ. 21 ರಿಂದ 29 ಕಿ.ಮೀವರಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 10.1 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, ಡಿಜಿಟಲ್ ಡ್ರೈವರ್ ಡಿಸ್‌ಪ್ಲೇ, ಸನ್‌ರೂಫ್ ಹಾಗೂ ವೆಂಟಿಲೇಟೆಡ್ ಫ್ರಂಟ್ ಸೀಟ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ಹೊಂದಿದೆ. ಸುರಕ್ಷತೆಗಾಗಿ 6 ಏರ್‌ಬ್ಯಾಗ್‌ಗಳು, ಎಡಿಎಎಸ್ (ಅಡ್ವಾನ್ಸ್ಡ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ಸ್) ಹಾಗೂ 360 ಡಿಗ್ರಿ ಕ್ಯಾಮೆರಾವನ್ನು ಒಳಗೊಂಡಿದೆ.
ನೀವು ಇದೇ 'ವಿಕ್ಟೋರಿಸ್'ಗೆ ಪರ್ಯಾಯವಾಗಿ ಈ 5 ಜನಪ್ರಿಯ ಕಾರುಗಳಾದ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೋಸ್, ಟಾಟಾ ಕರ್ವ್, ಹೋಂಡಾ ಎಲಿವೇಟ್ ಹಾಗೂ ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್‌ಗಳನ್ನು ಕೊಂಡುಕೊಳ್ಳಬಹುದು. ಬನ್ನಿ, ಈ ನೂತನ ಎಸ್‌ಯುವಿಗಳ ಬೆಲೆ ಎಷ್ಟು.. ವಿಶೇಷತೆಗಳೇನು ಎಂಬುದರ ಕುರಿತಂತೆ ಸಂಕ್ಷಿಪ್ತವಾದ ವಿವರಗಳನ್ನು ತಿಳಿಯೋಣ.

ಹ್ಯುಂಡೈ ಕ್ರೆಟಾ (Hyundai Creta):
ಇದೊಂದು ಪ್ರಖ್ಯಾತ ಎಸ್‌ಯುವಿಯಾಗಿದ್ದು, 'ಮಾರುತಿ ವಿಕ್ಟೋರಿಸ್'ಗೆ ಬದಲಿ ಆಯ್ಕೆಯಾಗಲಿದೆ. ಅದಕ್ಕೆ ತಕ್ಕಂತೆ ರೂ.10.73 ಲಕ್ಷದಿಂದ ರೂ.20.50 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಒಳಗೊಂಡಿದೆ. 17 ರಿಂದ 21.8 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 10.25 ಇಂಚಿನ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಪಡೆದಿದೆ.
ಕಿಯಾ ಸೆಲ್ಟೋಸ್ (Kia Seltos):
ಈ ಎಸ್‌ಯುವಿಯು 'ಮಾರುತಿ ಸುಜುಕಿ ವಿಕ್ಟೋರಿಸ್'ಗೆ ಪರ್ಯಾಯವಾಗಲಿದೆ. ರೂ. 10.79 ಲಕ್ಷದಿಂದ ರೂ.19.81 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ಪೆಟ್ರೋಲ್, 1.5-ಲೀ. ಟರ್ಬೊ ಪೆಟ್ರೋಲ್ ಮತ್ತು 1.5-ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 17 ರಿಂದ 21.8 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 10.25 ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ಗಳು ಸೇರಿದಂತೆ ವಿವಿಧ ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಟಾಟಾ ಕರ್ವ್ (Tata Curvv):
ಇದು ಕೂಪೆ ಎಸ್‌ಯುವಿಯಾಗಿದ್ದು, 'ಮಾರುತಿ ವಿಕ್ಟೋರಿಸ್'ಗೆ ಬದಲಿ ಕಾರಾಗಿಯೂ ಹೊರಹೊಮ್ಮಿದೆ. ರೂ.9.66 ಲಕ್ಷದಿಂದ ರೂ.18.85 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.2 ಲೀ. ಟರ್ಬೊ ಪೆಟ್ರೋಲ್, 1.2 ಲೀ. ಜಿಡಿಐ ಟರ್ಬೊ ಪೆಟ್ರೋಲ್ ಮತ್ತು 1.5 ಲೀ. ಡೀಸೆಲ್ ಎಂಜಿನ್‌ನ್ನು ಪಡೆದಿದೆ. 11 ರಿಂದ 15 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 12.3 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಹೊಂದಿದೆ.
ಹೋಂಡಾ ಎಲಿವೇಟ್ (Honda Elevate):
ಈ ಎಸ್‌ಯುವಿ ಕೂಡ 'ಮಾರುತಿ ಸುಜುಕಿ ವಿಕ್ಟೋರಿಸ್'ಗೆ ಪರ್ಯಾಯ ಆಯ್ಕೆಯಾಗಲಿದೆ. ರೂ.11 ಲಕ್ಷದಿಂದ ರೂ.16.15 ಲಕ್ಷ (ಎಕ್ಸ್-ಶೋರೂಂ) ದರವನ್ನು ಪಡೆದಿದೆ. 1.5-ಲೀ. ಪೆಟ್ರೋಲ್ ಎಂಜಿನ್ ಹೊಂದಿದ್ದು, 15 ರಿಂದ 17 ಕಿ.ಮೀವರೆಗೆ ಮೈಲೇಜ್ ಕೊಡುತ್ತದೆ. 5 ಆಸನಗಳನ್ನು ಒಳಗೊಂಡಿದೆ. 10.25 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಮತ್ತು 6 ಏರ್‌ಬ್ಯಾಗ್‌ನಂತಹ ಹತ್ತಾರು ವೈಶಿಷ್ಟ್ಯಗಳನ್ನು ತನ್ನದಾಗಿಸಿಕೊಂಡಿದೆ.

ಟೊಯೊಟಾ ಅರ್ಬನ್ ಕ್ರೂಸರ್ ಹೈರೈಡರ್ (Toyota Urban Cruiser Hyryder):
ಇದೊಂದು ವಿಶ್ವಾಸಾರ್ಹ ಎಸ್‌ಯುವಿಯಾಗಿದೆ. 'ಮಾರುತಿ ವಿಕ್ಟೋರಿಸ್'ಗೆ ಬದಲಿ ಕಾರಾಗಿಯೂ ಗುರುತಿಸಿಕೊಂಡಿದೆ. ರೂ.10.95 ಲಕ್ಷದಿಂದ ರೂ.19.76 ಲಕ್ಷ (ಎಕ್ಸ್-ಶೋರೂಂ) ಬೆಲೆಯನ್ನು ಒಳಗೊಂಡಿದೆ. 1.5-ಲೀ. ನ್ಯಾಚುರಲಿ ಆಸ್ಪಿರೇಟೆಡ್ ಪೆಟ್ರೋಲ್, 1.5-ಲೀ. ಹೈಬ್ರಿಡ್ (ಪೆಟ್ರೋಲ್+ಎಲೆಕ್ಟ್ರಿಕ್) ಮತ್ತು 1.5-ಲೀ. ಸಿಎನ್‌ಜಿ ಎಂಜಿನ್‌ನ್ನು ಹೊಂದಿದೆ. 19 ರಿಂದ 27.97 ಕಿ.ಮೀವರೆಗೆ ಮೈಲೇಜ್ ನೀಡುತ್ತದೆ. 5 ಆಸನಗಳನ್ನು ಪಡೆದಿದೆ. 9 ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್ ಹಾಗೂ 6 ಏರ್‌ಬ್ಯಾಗ್‌ಗಳನ್ನು ಒಳಗೊಂಡಿದೆ.
ಒಟ್ಟಾರೆಯಾಗಿ, ಈ ಕಾರುಗಳು ಒಂದಕ್ಕಿಂದ ಒಂದು ಚೆನ್ನಾಗಿವೆ. ತುಂಬಾ ಅಚ್ಚುಕಟ್ಟಾದ ವಿನ್ಯಾಸ ಹೊಂದಿದ್ದು, ಹತ್ತಾರು ವೈಶಿಷ್ಟ್ಯಗಳಿಗೂ ಸಾಕ್ಷಿಯಾಗಿವೆ. ಕೈಗೆಟುಕುವ ಬೆಲೆಯಲ್ಲಿಯೂ ಲಭ್ಯವಿವೆ. ಇವುಗಳಲ್ಲಿ ನಿಮ್ಮ ಕುಟುಂಬಕ್ಕೆ ಯಾವ ಕಾರು ಹೆಚ್ಚು ಸೂಕ್ತವಾಗಲಿದೆ ಎಂಬುದನ್ನು ಆಲೋಚಿಸಿ, ಖರೀದಿ ಮಾಡಿರಿ.


Click it and Unblock the Notifications








